ಕೆಜಿಎಫ್ ಮತ್ತು ಕಾಂತಾರ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ದೊಡ್ಡ ಹಿಟ್ ಕೊಟ್ಟು, ಪ್ರಪಂಚವೇ ಕರ್ನಾಟಕದ ಕಡೆಗೆ ತಿರುಗಿ ನೋಡುವಂತೆ ಮಾಡಿವೆ. ಹೀಗಿದ್ದಾಗ ಎರಡೂ ಚಿತ್ರಗಳ ಲೆಜೆಂಡ್ ನಟ ಮತ್ತು ನಿರ್ದೇಶಕರು ಭೇಟಿಯಾಗಿದ್ದಾರೆ.
ಮಾರ್ಚ್ 1ರಂದು ಪ್ರಶಾಂತ್ ನೀಲ್ ಮನೆಯಲ್ಲಿ ಕಾರ್ಯಕ್ರಮ ಒಂದನ್ನು ಹಮ್ಮಿಕೊಳ್ಳಲಾಗಿತ್ತು. ಇದಕ್ಕಾಗಿ ಜೂನಿಯರ್ ಎನ್‌ಟಿಆರ್ ಅವರು ತೆರೆಳಿದ್ದರು. ಎನ್‌ಟಿಆರ್ ಜೊತೆ ಅವರ ಪತ್ನಿ, ರಿಷಬ್ ಶೆಟ್ಟಿ ಹಾಗೂ ಅವರ ಪತ್ನಿ ಪ್ರಗತಿ ಕೂಡ ಕಾಣಿಸಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.
27
ಜ್ಯೂನಿಯರ್ ಎನ್‌ಟಿಆರ್ ಅವರು ಬೆಂಗಳೂರಿಗೆ ಬಂದಿದ್ದಾರೆ, ಆ ವೇಳೆ ಅವರು ಹೊಂಬಾಳೆ ಫಿಲ್ಮ್ಸ್ ಒಡೆಯ ವಿಜಯ್ ಕಿರಗಂದೂರು, ನಿರ್ದೇಶಕ ಪ್ರಶಾಂತ್ ನೀಲ್, ರಿಷಬ್ ಶೆಟ್ಟಿ-ಪ್ರಗತಿ ಶೆಟ್ಟಿ ದಂಪತಿ ಜೊತೆ ಒಂದಿಷ್ಟು ಸಮಯ ಕಳೆದಿದ್ದಾರೆ.
37
ಪ್ರಶಾಂತ್ ನೀಲ್, ವಿಜಯ್ ಕಿರಗಂದೂರು, ಜ್ಯೂನಿಯರ್ ಎನ್‌ಟಿಆರ್ ಕಾಂಬಿನೇಶನ್‌ನಲ್ಲಿ ಸಿನಿಮಾವೊಂದು ಮೂಡಿ ಬರುತ್ತಿದೆ. ಎನ್‌ಟಿಆರ್ ಅವರು ಪತ್ನಿ ಲಕ್ಷ್ಮೀ ಪ್ರಣತಿ ಜೊತೆಗೆ ಬೆಂಗಳೂರಿಗೆ ಬಂದಿದ್ದರು. ಆ ವೇಳೆ ತೆಗೆಸಿಕೊಂಡ ಫೋಟೋಗಳನ್ನು ‘ಬೆಂಗಳೂರು ಡೈರೀಸ್’ ಎಂದು ಕ್ಯಾಪ್ಶನ್ ನೀಡಿ ಸಾಮಾಜಿಕ ಜಾಲತಾಣಲದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
47
ಈ ರೀತಿ ಸ್ಟಾರ್ಗಳು ಒಂದೆಡೆ ಸೇರಿದಾಗ ಸಿನಿಮಾ ಬಗ್ಗೆ ಕುತೂಹಲ ಮೂಡೋದು ಸಹಜ. ಈಗಲೂ ಹಾಗೆಯೇ ಆಗಿದೆ. ಜೂನಿಯರ್ ಎನ್‌ಟಿಆರ್ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಕೂಡ ನಟಿಸುತ್ತಾರಾ ಎನ್ನುವ ಕುತೂಹಲ ಮೂಡಿದೆ. ಈ ಪ್ರಶ್ನೆಗೆ ಪ್ರಶಾಂತ್ ನೀಲ್ ಅವರ ಕಡೆಯಿಂದಲೇ ಉತ್ತರ ಸಿಗಬೇಕಿದೆ.
57
ಜೂನಿಯರ್ ಎನ್‌ಟಿಆರ್ ಅವರು ‘ದೇವರ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಇದಾದ ಬಳಿಕ ಅವರು ‘ವಾರ್ 2’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ ಎನ್ನಲಾಗಿದೆ.
67
ಪ್ರಶಾಂತ್ ನೀಲ್ ಅವರು ಸದ್ಯ ಬ್ರೇಕ್ನಲ್ಲಿ ಇದ್ದಾರೆ. ಜೂನಿಯರ್ ಎನ್‌ಟಿಆರ್ ‘ವಾರ್ 2’ ಕೆಲಸ ಪೂರ್ಣಗೊಳಿಸಿದ ಬಳಿಕ ಇವರ ಸಿನಿಮಾ ಕೆಲಸಗಳು ಆರಂಭ ಆಗಲಿವೆ. ರಿಷಬ್ ಶೆಟ್ಟಿ ಅವರು ‘ಕಾಂತಾರ: ಅಧ್ಯಾಯ 1’ ಶೂಟಿಂಗ್ನಲ್ಲಿ ಬ್ಯುಸಿ ಇದ್ದಾರೆ.
77
ಕಳೆದ ವರ್ಷವೇ ಪ್ರಶಾಂತ್ ನೀಲ್-ತಾರಕ್ ರಾಮ್ ಅವರು 2024ರ ಮಾರ್ಚ್ ತಿಂಗಳಿನಿಂದ ಶೂಟಿಂಗ್ ಶುರು ಮಾಡಲಿದ್ದಾರೆ ಎನ್ನಲಾಗಿತ್ತು. ಪ್ರಭಾಸ್ ನಟನೆಯ ಸಲಾರ್ ಸಿನಿಮಾ ನಂತರದಲ್ಲಿ ಪ್ರಶಾಂತ್ ನೀಲ್ ಅವರು ಈ ಸಿನಿಮಾವನ್ನು ಕೈಗೆತ್ತಿಕೊಳ್ಳಲಿದ್ದಾರೆ ಎನ್ನಲಾಗಿತ್ತು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.