ರಾಜ್ಯಾದ್ಯಾಂತ ‘ಜೇಮ್ಸ್’ ಚಿತ್ರವನ್ನು ಸ್ವಾಗತಿಸುವ ಜತೆಗೆ ರಕ್ತದಾನ, ಆರೋಗ್ಯತಪಸಾಣೆ ಶಿಬಿರ, ಅನ್ನದಾನ, ಗಿಡಗಳನ್ನು ನೆಡುವುದು, ಶಾಲೆಗಳಿಗೆ ಪಠ್ಯ ಪುಸ್ತಕ ವಿತರಣೆ ಸೇರಿದಂತೆ ಹಲವು ರೀತಿಯ ಸಾಮಾಜಿಕ ಕಾರ್ಯಕ್ರಮಗಳನ್ನು ಪುನೀತ್ ಅಭಿಮಾನಿಗಳು ಆಯೋಜಿಸಿದ್ದಾರೆ.
ಪುನೀತ್ ಕುಟುಂಬದವರು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸುವ ಮೂಲಕ ಹುಟ್ಟುಹಬ್ಬ ಆಚರಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಕಂಠೀರವ ಸ್ಟುಡಿಯೋಗೆ ಆಗಮಿಸಲಿರುವ ಅಪ್ಪು ಅಭಿಮಾನಿಗಳಿಗೆ ಡಾ. ರಾಜ್‌ಕುಮಾರ್ ಕುಟುಂಬದಿಂದ ಅನ್ನಸಂತರ್ಪಣೆ ನಡೆಯಲಿದೆ.
ಶಿವರಾಜ್‌ಕುಮಾರ್ ಹಾಗೂ ಗೀತಾ ಶಿವರಾಜ್‌ಕುಮಾರ್ ದಂಪತಿ ಮೈಸೂರಿನ ಶಕ್ತಿಧಾಮದ ಮಕ್ಕಳ ಜತೆ ಪುನೀತ್‌ರಾಜ್‌ಕುಮಾರ್ ಹುಟ್ಟು ಹಬ್ಬ ಆಚರಿಸಲಿದ್ದಾರೆ. ಹೀಗಾಗಿ ಮೈಸೂರಿನಲ್ಲೇ ಶಿವರಾಜ್‌ಕುಮಾರ್ ಅವರು ಕುಟುಂಬ ಸಮೇತರಾಗಿ ‘ಜೇಮ್ಸ್’ ಚಿತ್ರ ನೋಡಲಿದ್ದಾರೆ.
ದಾವಣಗೆರೆಯಲ್ಲಿ ಅಖಿಲ ಕರ್ನಾಟಕ ಡಾ.ರಾಜಕುಮಾರ್ ಅಭಿಮಾನಿಗಳ ಸಂಘಗಳ ಒಕ್ಕೂಟ, ಅಖಿಲ ಕರ್ನಾಟಕ ಡಾ.ಶಿವಕುಮಾರ ಅಭಿಮಾನಿಗಳ ಸಂಘ, ರಾಜರತ್ನ ಪುನೀತ ರಾಜಕುಮಾರ ಅಭಿಮಾನಿಗಳ ಸಂಘದ ಆಶ್ರಯದಲ್ಲಿ ಬೆಳಿಗ್ಗೆ 7.30ಕ್ಕೆ ನಿಟುವಳ್ಳಿ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಕೆ.
ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರುವ ಕಾರಣ ಕೆಲವೆಡೆ ಪುನೀತ್ ಜನ್ಮದಿನಾಚರಣೆಗೆ ಅನುಮತಿ ಸಿಕ್ಕಿಲ್ಲ. ಬೆಂಗಳೂರಿನ ಚಾಮರಾಜಪೇಟೆಯಿಂದ ವೀರೇಶ್ ಚಿತ್ರಮಂದಿರದವರೆಗೂ ಬೈಕ್ ರಾರಯಲಿ, ಮೆರವಣಿಗೆ ಮಾಡಲು ಅಭಿಮಾನಿಗಳು ನಿರ್ಧರಿಸಿದ್ದರು.