Dildaar Movie: 'ದಿಲ್‌ದಾರ್‌' ಆದ 'ಪಡ್ಡೆಹುಲಿ' ಸಿನಿಮಾ ಖ್ಯಾತಿಯ ಶ್ರೇಯಸ್‌ ಮಂಜು; ಪೋಸ್ಟರ್‌ ರಿಲೀಸ್

Published : Jul 14, 2026, 12:08 PM IST

Dildar Kannada Movie: ಪಡ್ಡೆಹುಲಿ ಸಿನಿಮಾ ಖ್ಯಾತಿಯ ಶ್ರೇಯಸ್ ಮಂಜು ನಾಯಕನಾಗಿ ನಟಿಸಿರುವ ಚಿತ್ರ `ದಿಲ್‌ದಾರ್'. ಮಧು ಗೌಡ ಗಂಗೂರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದ ಫಸ್ಟ್ ಲುಕ್ ಟೀಸರ್ ಇದೀಗ ಬಿಡುಗಡೆಗೊಂಡಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

PREV
14
ಮಾಸ್‌ ಪಾತ್ರ ಮಾಡಿರೋ ಶ್ರೇಯಸ್‌ ಮಂಜು!

ಈಗಾಗಲೇ ಮಾಸ್ ಪಾತ್ರಗಳ ಮೂಲಕ ಗಮನ ಸೆಳೆದಿರುವ ಶ್ರೇಯಸ್ ಮಂಜು, ಈ ಚಿತ್ರದಲ್ಲಿ ಮತ್ತೊಂದೊಂದು ಹಂತದ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿರುವ ಸುಳಿವೊಂದು ಈ ಮೂಲಕ ಜಾಹೀರಾಗಿದೆ.

24
ಈ ಹಿಂದೆ ಕಾಣಿಸಿಕೊಂಡಿರದ ಪಾತ್ರ

ಏನ್ಸಿಯಂಟ್ ಮೂವೀಸ್ ಬ್ಯಾನರಿನಡಿಯಲ್ಲಿ ಆರ್. ಸಂತೋಷ್ ಕುಮಾರ್ (ಎಸ್‌ವಿಟಿ) ನಿರ್ಮಾಣ ಮಾಡಿರುವ ದಿಲ್‌ದಾರ್ ಚಿತ್ರವೀಗ ಚಿತ್ರೀಕರಣವನ್ನೆಲ್ಲ ಮುಗಿಸಿಕೊಂಡು ಬಿಡುಗಡೆಯ ಹೊಸ್ತಿಲಲ್ಲಿದೆ. ಈ ಹಂತದಲ್ಲಿ ಫಸ್ಟ್ ಲುಕ್ ಟೀಸರ್ ಮೂಲಕ ಪ್ರೇಕ್ಷಕರನ್ನು ತಲುಪಲು ಚಿತ್ರತಂಡ ಪ್ರಯತ್ನಿಸಿದೆ. ಈ ಹಿಂದೆಯೇ ಶ್ರೇಯಸ್ ಮಂಜು ಈ ಹಿಂದೆಂದೂ ಕಾಣಿಸಿಕೊಂಡಿರದಿದ್ದ ಪಾತ್ರದಲ್ಲಿ ನಟಿಸಿದ್ದಾರೆಂದು ಚಿತ್ರತಮಡ ಹೇಳಿಕೊಂಡಿತ್ತು. ಅದರ ಚಹರೆ ಈ ಟೀಸರ್ ಮೂಲಕ ಅನಾವರಣಗೊಂಡಿದೆ.

34
ಪಕ್ಕಾ ಆಕ್ಷನ್‌ ಸಿನಿಮಾ

ಇದು ಭಿನ್ನವಾದೊಂಣದು ಪ್ರೇಮ ಕಥಾನಕವನ್ನೊಳಗೊಂಡಿರೋ ಪಕ್ಕಾ ಆಕ್ಷನ್ ಚಿತ್ರವೆಂಬ ಬಗ್ಗೆ ಚಿತ್ರತಂಡ ಹೇಳಿಕೊಂಡಿದೆ. ನಟ ಶರಣ್ ಅವರ ತಂಗಿ ಮಗಳಾದ ಕೀರ್ತಿ ಕೃಷ್ಣ ಈ ಚಿತ್ರದ ಮೂಲಕವೇ ನಾಯಕಿಯಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ.

44
ದೊಡ್ಡ ತಾರಾಗಣವಿರುವ ಸಿನಿಮಾ

ಸಾಧು ಕೋಕಿಲ, ಚಂದ್ರಪ್ರಭ, ಕಾರ್ತಿಕ್, ಚಿಲ್ಲರ್ ಮಂಜು ಮುಂತಾದ ಹಾಸ್ಯ ನಟರ ದಂಡೇ ಈ ಚಿತ್ರದಲ್ಲಿದೆ. ಕೆಜಿಎಫ್ ಖ್ಯಾತಿಯ ಆಂಡ್ರೋ ಅವಿನಾಶ್, ಭಜರಂಗಿ ಲೋಕಿ, ಅರ್ಪಿತ್ ಖಳ ನಟರಾಗಿ ಅಬ್ಬರಿಸಿದ್ದಾರೆ. ಹರೇಕೃಷ್ಣ ರೆಡ್ಡಿ ಎಸ್ ಕರ್ಯಕಾರಿ ನಿರ್ಮಾಪಕರಾಗಿ ಜೊತೆಯಾಗಿದ್ದಾರೆ. ದಿಲ್ ದಾರ್ ಕುರಿತಾದ ಮತ್ತಷ್ಟು ಮಾಹಿತಿಗಳು ಶೀಘ್ರದಲ್ಲಿಯೇ ಪ್ರೇಕ್ಷಕರನ್ನು ತಲುಪಲಿವೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories