ಮಂಗಳೂರಿಗೆ ಬರ್ತಿದ್ದೆ ಕೊರಗಜ್ಜ ಪರಿಚಯ ಇರಲಿಲ್ಲ: ನಟಿ ರಚಿತಾ ರಾಮ್

Published : Jun 01, 2023, 04:22 PM IST

ಕೊರಗಜ್ಜನ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ರಚಿತಾ ರಾಮ್. ಸಿನಿಮಾ ಹಿಟ್ ಆಗಬೇಕು ಎಂದು ಪ್ರಾರ್ಥನೆ...

PREV
16
ಮಂಗಳೂರಿಗೆ ಬರ್ತಿದ್ದೆ ಕೊರಗಜ್ಜ ಪರಿಚಯ ಇರಲಿಲ್ಲ: ನಟಿ ರಚಿತಾ ರಾಮ್

ಮಂಗಳೂರಿನ ಹೊರವಲಯದ ಕುತ್ತಾರು ಬಳಿ ಇರುವ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ ಡಿಂಪಕ್ ಕ್ವೀನ್ ರಚಿತಾ ರಾಮ್. 

26

'ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಕಾರ್ಣಿಕದ ಬಗ್ಗೆ ಹೇಳಿದ್ದರು. ಹಾಗಾಗಿ ನನಗೂ ಇಲ್ಲಿಗೆ ಬರಬೇಕು ಅನ್ನಿಸಿತು, ಬಂದ್ಬಿಟ್ಟೆ' ಎಂದು ರಚಿತಾ ರಾಮ್ ಮಾತನಾಡಿದ್ದಾರೆ.

36

'ಕೊರಗಜ್ಜನ‌ ಕ್ಷೇತ್ರವು ಪ್ರಾಕೃತಿಕ ಸೌಂದರ್ಯವನ್ನೊಳಗೊಂಡಿದ್ದು, ತುಂಬಾ ಚೆನ್ನಾಗಿದೆ.  ಮುಂದಿನ ಜೂನ್ ತಿಂಗಳಲ್ಲಿ ಮ್ಯಾಟ್ನಿ ಮತ್ತು ಬ್ಯಾಡ್ ಮ್ಯಾನರ್ಸ್ ಚಿತ್ರಗಳು ತೆರೆ ಕಾಣಲಿದೆ.'

46

 'ಎರಡು ಚಿತ್ರಗಳು ಯಶಸ್ಸು ಕಾಣಲಿ ಎಂದು ಕೊರಗಜ್ಜನಲ್ಲಿ ಪ್ರಾರ್ಥಿಸಿದೆ' ಎಂದು ಹೇಳಿದ್ದಾರೆ' ಎಂದಿದ್ದಾರೆ ರಚಿತಾ ರಾಮ್ . 

56

 ಸದ್ಯ ರಚಿತಾ ಅನೇಕ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ವೀರಂ, ಮ್ಯಾಟ್ನಿ, ಬ್ಯಾಡ್ ಮ್ಯಾನರ್ಸ್, ಶಬರಿ ಸರ್ಚಿಂಗ್ ಫಾರ್ ರಾವಣ, ಲವ್ ಮಿ ಆರ್ ಹೇಟ್ ಮಿ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಅಭಿಷೇಕ್ ಅಂಬರೀಶ್ ಜೊತೆ ನಟಿಸಿರುವ ಬ್ಯಾಡ್ ಮ್ಯಾನರ್ಸ್ ಸಿನಿಮಾ ರಿಲೀಸ್‌ಗೆ ಸಿದ್ಧವಾಗುತ್ತಿದೆ.  

66

ರಚಿತಾ ನಟನೆಯ ಸಿನಿಮಾಗಳು ಹೇಳಿಕೊಳ್ಳುವಷ್ಟು ಸಕ್ಸಸ್ ಕಂಡಿಲ್ಲ. ಸಾಲು ಸಾಲು ಸಿನಿಮಾಗಳು ನೆಲಕಚ್ಚಿವೆ. ಹಾಗಾಗಿ ಸಿನಿಮಾ ಸಕ್ಸಸ್‌ಗಾಗಿ ಕೊರಗಜ್ಜನ ಮೊರೆ ಹೋಗಿದ್ದಾರೆ.

Read more Photos on
click me!

Recommended Stories