ಬಸವನಗುಡಿ ಗವಿ ಗಂಗಾಧರೇಶ್ವರ ದರ್ಶನ ಪಡೆದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

Suvarna News   | Asianet News
Published : Mar 17, 2022, 09:41 AM IST

ಪತಿ ಪುನೀತ್‌ ರಾಜ್‌ಕುಮಾರ್ ಹುಟ್ಟುಹಬ್ಬದ ಹಿನ್ನಲೆ ಗವಿ ಗಂಗಾಧರೇಶ್ವರ ಸ್ವಾಮಿ ದರ್ಶನ ಪಡೆದ ಅಶ್ವಿನಿ.

PREV
16
ಬಸವನಗುಡಿ ಗವಿ ಗಂಗಾಧರೇಶ್ವರ ದರ್ಶನ ಪಡೆದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಇಂದು 46ರ ವಸಂತಕ್ಕೆ ಕಾಲಿಟ್ಟಿದ್ದಾರೆ. ಅಪ್ಪು ನೆನಪಿನಲ್ಲಿ ಅಭಿಮಾನಿಗಳು ಮತ್ತು ಕುಟುಂಬಸ್ಥರು ಹುಟ್ಟುಹಬ್ಬ ಆಚರಣೆ ಮಾಡುತ್ತಿದ್ದಾರೆ. 

26

ಅಪ್ಪು ಹುಟ್ಟುಹಬ್ಬದ ದಿನ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಸವನಗುಡಿಯಲ್ಲಿರುವ ಗವಿ ಗಂಗಾಧರೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. 

36

ಕುಟುಂಬಸ್ಥರ ಜೊತೆ ಅಶ್ವಿನಿ ದರ್ಶನ ಪಡೆದಿರುವ ಫೋಟೋಗಳನ್ನು ಸ್ಥಳೀಯರು ಕ್ಲಿಕ್ ಮಾಡಿದ್ದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

46

ಇಂದು ಪುನೀತ್‌ ನಾಯಕನಾಗಿ ನಟಿಸಿರುವ ಕೊನೆಯ ಸಿನಿಮಾ ಜೇಮ್ಸ್‌ ಬಿಡುಗಡೆಯಾಗಿದೆ. ಕರ್ನಾಟಕದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ಸಿನಿಮಾ ಬಿಡುಗಡೆಯಾಗಿದೆ. 

56

 ರಾತ್ರಿ  12 ಗಂಟೆಗೆ ಅಪ್ಪು ಸಮಾಧಿ ಬಳಿ ರಾಘವೇಂದ್ರ ರಾಜ್‌ಕುಮಾರ್, ಯುವರಾಜ್ ಮತ್ತು ವಿನಯ್‌ ಅಭಿಮಾನಿಗಳ ಜೊತೆ ಸೇರಿಕೊಂಡು ಕೇಕ್ ಕಟ್ ಮಾಡಿದ್ದಾರೆ. 

66

ಶಿವರಾಜ್‌ಕುಮಾರ್‌ ಹಾಗೂ ಗೀತಾ ಶಿವರಾಜ್‌ಕುಮಾರ್‌ ದಂಪತಿ ಮೈಸೂರಿನ ಶಕ್ತಿಧಾಮದ ಮಕ್ಕಳ ಜತೆ ಪುನೀತ್‌ರಾಜ್‌ಕುಮಾರ್‌ ಹುಟ್ಟು ಹಬ್ಬ ಆಚರಿಸಲಿದ್ದಾರೆ. ಹೀಗಾಗಿ ಮೈಸೂರಿನಲ್ಲೇ ಶಿವರಾಜ್‌ಕುಮಾರ್‌ ಅವರು ಕುಟುಂಬ ಸಮೇತರಾಗಿ ‘ಜೇಮ್ಸ್‌’ ಚಿತ್ರ ನೋಡಲಿದ್ದಾರೆ.

Read more Photos on
click me!

Recommended Stories