X&Y Movie: ರಿಲೀಸ್‌ಗೆ ರೆಡಿಯಾಗಿರೋ 'ರಾಮಾ ರಾಮಾ ರೇʼ ಸಿನಿಮಾ ನಿರ್ದೇಶಕ ಡಿ ಸತ್ಯಪ್ರಕಾಶ್‌ರ X&Y ಸಿನಿಮಾ!

Published : Jun 23, 2025, 04:52 PM ISTUpdated : Jun 23, 2025, 04:54 PM IST

"ರಾಮಾ ರಾಮಾ ರೇ" ಸಿನಿಮಾ ಮಾಡಿದ ಖ್ಯಾತಿ ಎಲ್ಲರಿಗೂ ಗೊತ್ತಿದೆ. ಈ ಸಿನಿಮಾದ ನಿರ್ದೇಶಕ ಡಿ.ಸತ್ಯಪ್ರಕಾಶ್ ಅವರೇ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ಪ್ರಮುಖಪಾತ್ರದಲ್ಲೂ ನಟಿಸಿರುವ ಬಹು ನಿರೀಕ್ಷಿತ "X&Y" ಚಿತ್ರ ರಿಲೀಸ್‌ಗೆ ರೆಡಿಯಿದೆ. 

PREV
15

ಹೌದು, ಈ ವಾರ ಜೂನ್ 26(ಗುರುವಾರ) ರಂದು X&Y ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ‘ರಾಮಾ ರಾಮಾ ರೇ’, ‘ಒಂದಲ್ಲಾ ಎರಡಲ್ಲಾ’ ಮತ್ತು ‘ಮ್ಯಾನ್ ಆಫ್ ದಿ ಮ್ಯಾಚ್’ ಸಿನಿಮಾಗಳನ್ನು ನಿರ್ದೇಶಿಸಿರುವ ಡಿ ಸತ್ಯಪ್ರಕಾಶ್ ಅವರಿಗೆ ʼX&Yʼ ನಾಲ್ಕನೇ ನಿರ್ದೇಶನದ ಸಿನಿಮಾವಿದು.

25

ಈಗಾಗಲೇ ಪೋಸ್ಟರ್, ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಜನರನ್ನು ತಲುಪಿರುವ ʼX&Yʼ ಚಿತ್ರ ಈ ವಾರ ತೆರೆಗೆ ಬರುತ್ತಿದ್ದು, ಈ ಚಿತ್ರ ಕೂಡ ಪ್ರೇಕ್ಷಕರ ಮನ ಗೆಲ್ಲಲ್ಲಿದೆ ಎಂಬ ಅಭಿಪ್ರಾಯ ಚಿತ್ರತಂಡದ್ದು.

35

ನಿರ್ದೇಶಕರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಲವಿತ್ ಛಾಯಾಗ್ರಹಣ, ಬಿ.ಎಸ್.ಕೆಂಪರಾಜು, ಕೌಶಿಕ್ ಹರ್ಷ ಸಂಗೀತ ನಿರ್ದೇಶನ ಹಾಗೂ ವರದರಾಜ್ ಕಾಮತ್ ಅವರ ಕಲಾ ನಿರ್ದೇಶನವಿದೆ.

45

ಸತ್ಯ ಪಿಕ್ಚರ್ಸ್ ನಿರ್ಮಾಣದ "X&Y" ಚಿತ್ರದ ತಾರಾಬಳಗದಲ್ಲಿ ಬೃಂದಾ ಆಚಾರ್ಯ, ಡಿ.ಸತ್ಯಪ್ರಕಾಶ್, ಅಯಾನ, ಅಥರ್ವ ಪ್ರಕಾಶ್, ದೊಡ್ಡಣ್ಣ , ವೀಣಾ ಸುಂದರ್, ಸುಂದರ್ ವೀಣಾ, ಹರಿಣಿ, ಧರ್ಮಣ್ಣ ಕಡೂರ್, ತೇನಪ್ಪನ್ ಮುಂತಾದವರಿದ್ದಾರೆ.

55

ಈ ಸಿನಿಮಾ ಬಗ್ಗೆ ಭಾರೀ ನಿರೀಕ್ಷೆಯಿದ್ದು, ಚಿತ್ರತಂಡವು ಭರ್ಜರಿ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದೆ. 

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories