ನೋವಲ್ಲಿ ಹುಟ್ಟುಹಬ್ಬ ಆಚರಿಸಲಾರೆ: #Happybirthday Duniya Vijay

Kannadaprabha News   | Asianet News
Published : Jan 20, 2022, 09:29 AM IST

ನೀವು ಇದ್ದಲ್ಲಿಂದಲೇ ಹಾರೈಸಿ ಅಂತ ಅವರು ಸೋಷಿಯಲ್‌ ಮೀಡಿಯಾ ಮೂಲಕ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿ ಸಲಗ.

PREV
15
ನೋವಲ್ಲಿ ಹುಟ್ಟುಹಬ್ಬ ಆಚರಿಸಲಾರೆ: #Happybirthday Duniya Vijay

ಇಂದು (ಜ.20) ದುನಿಯಾ ವಿಜಯ್‌ (Duniya Vijay) ಹುಟ್ಟುಹಬ್ಬ. ಈ ಸಲವೂ ಜನ್ಮದಿನ ಆಚರಿಸಿಕೊಳ್ಳುವುದಿಲ್ಲ. ನೀವು ಇದ್ದಲ್ಲಿಂದಲೇ ಹಾರೈಸಿ ಅಂತ ಅವರು ಸೋಷಿಯಲ್‌ ಮೀಡಿಯಾ ಮೂಲಕ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

25

‘ಅಭಿಮಾನಿಗಳಿಗೆ ನಮಸ್ಕಾರ. ಇಡೀ ಜಗತ್ತು ಸಂಕಷ್ಟದಲ್ಲಿರುವ ಸಮಯವಿದು. ಇಂಥಾ ಸಮಯದಲ್ಲಿ ನನಗೊಂದು ಅಭೂತಪೂರ್ವ ಗೆಲುವನ್ನು ನೀವೆಲ್ಲರೂ ಕೊಟ್ಟಿದ್ದೀರ'

35

'ಇಂಥಾ ಹೊತ್ತಿನಲ್ಲಿ ನನ್ನ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಬೇಕು ಎಂಬ ಆಸೆ ನಿಮಗೆ ಇದೆ ಎಂಬುದು ನನಗೆ ಗೊತ್ತು. ನಾನೂ ನಿಮ್ಮನ್ನೆಲ್ಲ ಹುಟ್ಟುಹಬ್ಬದ ದಿನ ಭೇಟಿಯಾಗಬೇಕು ಎಂದುಕೊಂಡಿದ್ದೆ.'

45

'ಆದರೆ ಕಳೆದ ನಾಲ್ಕು ದಶಕಗಳಿಂದ ನನ್ನನ್ನು ಸಾಕಿ ಸಲಹಿದ ನನ್ನಮ್ಮ, ಅಪ್ಪ ಈ ವರ್ಷ ವಿಧಿಯಾಟಕ್ಕೆ ಬಲಿಯಾದರು. ಆತ್ಮೀಯರಾದ ಪುನೀತ್‌ ರಾಜ್‌ಕುಮಾರ್‌ ನಮ್ಮನ್ನೆಲ್ಲ ಬಿಟ್ಟು ಹೋದರು. '

55

'ಈ ನೋವುಗಳನ್ನು ಇಟ್ಟುಕೊಂಡು ನಾನು ಹುಟ್ಟುಹಬ್ಬ ಹೇಗೆ ಸಂಭ್ರಮಿಸಲಿ.. ಜೊತೆಗೆ ಕೋವಿಡ್‌ ಕೇಸ್‌ಗಳು ಹೆಚ್ಚಾಗುತ್ತಿರುವ ಕಾರಣ ನಿಮ್ಮೆಲ್ಲರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ನಾನು ಈ ವರ್ಷ ಹುಟ್ಟುಹಬ್ಬ ಆಚರಿಸೋದಿಲ್ಲ. ಆ ದಿನ ಮನೆಯಲ್ಲಿ ಇರೋದಿಲ್ಲ. ಯಾರೂ ಮನೆಯ ಕಡೆ ಬರಬೇಡಿ’ ಎಂದು ವಿಜಯ್‌ ಬರೆದುಕೊಂಡಿದ್ದಾರೆ.'

Read more Photos on
click me!

Recommended Stories