ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ವಾಸುಕಿ ವೈಭವ್ ಮತ್ತು ಬೃಂದಾ ವಿಕ್ರಂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ರಂಗಭೂಮಿಯಲ್ಲಿ ಹೆಸರು ಮಾಡಿರುವ ಬೃಂದಾ ವಿಕ್ರಮ್ ಮತ್ತು ವಾಸುಕಿ ವೈಭವ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ.
ನವೆಂಬರ್ 16ರಂದಿ ಬೆಂಗಳೂರಿನ ಕಲ್ಯಾಣ ಮಂಟಪವೊಂದರಲ್ಲಿ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ ಈ ಲವ್ ಬರ್ಡ್ಸ್.
ಬೆಂಗಳೂರು ಮೂಲದ ಬೃಂದಾ ಒಂದೆರಡು ಕನ್ನಡ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಎರಡೂ ಕುಟುಂಬಬಗಗಳ ಸಮ್ಮತಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ನವೆಂಬರ್ 15ರಂದು ರಾತ್ರಿ ಅದೇ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆದಿದೆ. ಸೋಷಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್ ಆಗಿದೆ.
ಈ ಹಿಂದೆ ಮ್ಯಾನ್ ಆಫ್ ದಿ ಮ್ಯಾಚ್ ಸಿನಿಮಾದಲ್ಲಿ ಈ ಜೋಡಿ ಒಟ್ಟಿಗೆ ನಟಿಸಿದ್ದಾರೆ ಎನ್ನಲಾಗಿದೆ. ಸಿನಿಮಾ ಸ್ನೇಹಿತರು ಮತ್ತು ಕುಟುಂಬಸ್ಥರು ಮದುವೆಯಲ್ಲಿ ಭಾಗಿಯಾಗಿದ್ದರು. ವಾಸುಕಿ ಮನೆಯಲ್ಲಿ ಮೆಹೆಂದಿ ಶಾಸ್ತ್ರ ನಡೆದಿದೆ.