Karavali Movie: ಪ್ರಜ್ವಲ್ ದೇವರಾಜ್ ನಟನೆ, ಗುರುದತ್ತ ಗಾಣಿಗ ನಿರ್ದೇಶನದ ‘ಕರಾವಳಿ’ ಸಿನಿಮಾ ಜುಲೈ 24ರಂದು ಬಿಡುಗಡೆಯಾಗುತ್ತಿದೆ. ರಾಜ್ ಬಿ ಶೆಟ್ಟಿ ಈ ಸಿನಿಮಾದಲ್ಲೂ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ.
ಪ್ರಜ್ವಲ್ ದೇವರಾಜ್ ನಟನೆ, ಗುರುದತ್ತ ಗಾಣಿಗ ನಿರ್ದೇಶನದ ‘ಕರಾವಳಿ’ ಸಿನಿಮಾ ಜುಲೈ 24ರಂದು ಬಿಡುಗಡೆಯಾಗುತ್ತಿದೆ. ವಿಶೇಷ ಅಂದರೆ ಕಳೆದ ವರ್ಷ ರಾಜ್.ಬಿ.ಶೆಟ್ಟಿ ನಿರ್ಮಾಣದ ‘ಸು ಫ್ರಂ ಸೋ’ ಸಿನಿಮಾ ಬಿಡುಗಡೆಯಾದ ದಿನದಂದೇ ಈ ಚಿತ್ರವನ್ನೂ ರಿಲೀಸ್ ಮಾಡುತ್ತಿದ್ದಾರೆ.
26
ಮನುಷ್ಯ ಪ್ರಾಣಿ ಸಂಘರ್ಷದ ಕಥಾಹಂದರ
ರಾಜ್ ಬಿ ಶೆಟ್ಟಿ ಈ ಸಿನಿಮಾದಲ್ಲೂ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ. ರಮೇಶ್ ಇಂದಿರಾ, ಮಿತ್ರ ಮೊದಲಾದವರು ಇತರೆ ಪಾತ್ರಗಳಲ್ಲಿದ್ದಾರೆ. ಕರಾವಳಿಯ ಯಕ್ಷಗಾನ, ಕಂಬಳ ಮೊದಲಾದ ಅಂಶಗಳಿರುವ ಚಿತ್ರದಲ್ಲಿ ದ್ವೇಷ, ಸೇಡು, ಮನುಷ್ಯ ಪ್ರಾಣಿ ಸಂಘರ್ಷದ ಕಥಾಹಂದರವಿದೆ. ಕೆವಿಎನ್ ಪ್ರೊಡಕ್ಷನ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ.
36
ಸಿನಿಪ್ರೇಕ್ಷಕರಲ್ಲಿ ಕುತೂಹಲ
ಪೋಸ್ಟರ್ ಮತ್ತು ಟೀಸರ್ ಮೂಲಕವೇ ಸಿನಿಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸಿರುವ ‘ಕರಾವಳಿ’ ಸಿನಿಮಾ ಇದೀಗ ಬಿಡುಗಡೆಯ ಅಂಚಿಗೆ ತಲುಪಿದೆ. ಕಳೆದ ವರ್ಷ ‘ಸು ಫ್ರಂ ಸೋ’ ಹಾಗೂ ‘ಎಕ್ಕ’ ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ಹೊಸ ಭರವಸೆ ಮೂಡಿಸಿದ್ದರೆ, ಈ ಬಾರಿ ‘ಕರಾವಳಿ’ ಅದೇ ಸಾಲಿನಲ್ಲಿ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಮಹತ್ವದ ಮೈಲಿಗಲ್ಲಾಗುವ ನಿರೀಕ್ಷೆ ಹುಟ್ಟಿಸಿದೆ.
ಕಳೆದ ವರ್ಷದ ಜುಲೈ ತಿಂಗಳು ಕನ್ನಡ ಸಿನಿಮಾರಂಗಕ್ಕೆ ಹೊಸ ಚೈತನ್ಯ ತುಂಬಿದಂತೆ, ಈ ಬಾರಿಯ ಜುಲೈ ಕೂಡ ಚಿತ್ರರಂಗಕ್ಕೆ ಹೊಸ ಉತ್ಸಾಹ ತರುವ ಲಕ್ಷಣಗಳು ಗೋಚರಿಸುತ್ತಿವೆ. ‘ಕರಾವಳಿ’ ಎಂಬ ಶೀರ್ಷಿಕೆಯೇ ಸೂಚಿಸುವಂತೆ, ಕರಾವಳಿ ಭಾಗದ ಸಂಸ್ಕೃತಿ, ಜೀವನಶೈಲಿ ಹಾಗೂ ಅಲ್ಲಿನ ನೆಲದ ಸೊಗಡನ್ನು ತೆರೆ ಮೇಲೆ ಕಟ್ಟಿಕೊಡುವ ಪ್ರಯತ್ನ ಈ ಚಿತ್ರದದ್ದು.
56
ನಾಯಕಿಯಾಗಿ ಸಂಪದಾ
ಪ್ರಜ್ವಲ್ ದೇವರಾಜ್ ನಾಯಕನಾಗಿ ಕಾಣಿಸಿಕೊಂಡಿರುವ ಚಿತ್ರದಲ್ಲಿ ಸಂಪದಾ ನಾಯಕಿಯಾಗಿ ನಟಿಸಿದ್ದಾರೆ. ನಿರ್ದೇಶಕ ಗುರುದತ್ ಗಾಣಿಗ ಅವರು ನಿರ್ದೇಶನದ ಜೊತೆಗೆ ನಿರ್ಮಾಣದ ಹೊಣೆಗಾರಿಕೆಯನ್ನು ಕೂಡ ವಹಿಸಿಕೊಂಡಿದ್ದು, ವಿಕೆ ಫಿಲ್ಮ್ ಅಸೋಸಿಯೇಷನ್ ಹಾಗೂ ಗಾಣಿಗ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣವಾಗಿದೆ.
66
ಗ್ರಾಮೀಣ ಹಿನ್ನೆಲೆಯ ನೈಜ ಕಥಾಹಂದರ
ಮನುಷ್ಯ ಮತ್ತು ಪ್ರಾಣಿಯ ನಡುವಿನ ಸಂಘರ್ಷವನ್ನು ಕೇಂದ್ರವಾಗಿಟ್ಟುಕೊಂಡಿರುವ ‘ಕರಾವಳಿ’, ಗ್ರಾಮೀಣ ಹಿನ್ನೆಲೆಯ ನೈಜ ಕಥಾಹಂದರವನ್ನು ಒಳಗೊಂಡಿದೆ. ಕರಾವಳಿಯ ನೈಸರ್ಗಿಕ ಸೌಂದರ್ಯ ಮತ್ತು ಹಳ್ಳಿಯ ಬದುಕಿನ ಸೊಗಡನ್ನು ಅಭಿಮನ್ಯು ಸದಾನಂದನ್ ಅವರ ಕ್ಯಾಮೆರಾ ಕಣ್ಣಿನಲ್ಲಿ ಸೆರೆಹಿಡಿದಿದ್ದರೆ, ಸಚಿನ್ ಬಸ್ರೂರು ಅವರ ಸಂಗೀತ ಚಿತ್ರದ ಭಾವನಾತ್ಮಕತೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.