Bikiniಯಲ್ಲಿ ಬಿಂದಾಸ್‌ ಆಗಿ ಕಾಣಿಸಿದ KGF ನಟಿ: 'ನೀವು ಬಿಡಿ ಹಾಲಿವುಡ್ಡು' ಎಂದ ಫ್ಯಾನ್ಸ್‌!

Published : Oct 04, 2023, 05:54 PM IST

ಸ್ಯಾಂಡಲ್‌ವುಡ್‌ನ ‘ಕೆಜಿಎಫ್’ ಚಿತ್ರದ ಮೂಲಕ ಚಿರಪರಿಚಿತರಾದ ನಟಿ ರೂಪಾ ರಾಯಪ್ಪ ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಹವಾ ಕ್ರಿಯೆಟ್ ಮಾಡುತ್ತಲೇ ಇರುತ್ತಾರೆ. ಈಗ ಮತ್ತೆ ಹೊಸ ಫೋಟೋಶೂಟ್ ಮೂಲಕ ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ್ದಾರೆ. 

PREV
16
Bikiniಯಲ್ಲಿ ಬಿಂದಾಸ್‌ ಆಗಿ ಕಾಣಿಸಿದ KGF ನಟಿ: 'ನೀವು ಬಿಡಿ ಹಾಲಿವುಡ್ಡು' ಎಂದ ಫ್ಯಾನ್ಸ್‌!

ನಟಿ ರೂಪಾ ರಾಯಪ್ಪ ನೀಲಿ ಬಣ್ಣದ ಒಳ ಉಡುಪಿನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದು, ಕ್ಯಾಮೆರಾ ಕಣ್ಣಿಗೆ ಮಸ್ತ್ ಆಗಿ ಪೋಸ್ ಕೊಟ್ಟಿದ್ದಾರೆ. ಈ ಮೂಲಕ ಪಡ್ಡೆಹುಡುಗರ ನಿದ್ದೆ ಕದ್ದಿದ್ದಾರೆ.

26

ಈ ಫೋಟೋ ನೋಡ್ತಿದಂತೆ ನೆಟ್ಟಿಗರು ಹಾಲಿವುಡ್ ನಟಿಗೆ ಅನುಕರಣೆ ಮಾಡಿ ಕಾಮೆಂಟ್ ಹಾಕಿದ್ದಾರೆ. ಸಖತ್ ಹಾಟ್ ಆಗಿದ್ದೀರಾ ಎಂದೆಲ್ಲಾ ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿವೆ. ನೆಗೆಟಿವ್‌ ಕಾಮೆಂಟ್‌ ಮತ್ತು ಟ್ರೋಲ್‌ಗೆ ತಲೆಕೆಡಿಸಿಕೊಳ್ಳದ ನಟಿಯ ನಡೆಗೆ ಡೇರಿಂಗ್‌ ಬ್ಯೂಟಿ ಎಂದು ನೆಟ್ಟಿಗರು ಕಾಲೆಳೆದಿದ್ದಾರೆ. 

36

ಸಿನಿಮಾಗಿಂತ ಹಾಟ್ ಫೋಟೋಗಳ ಮೂಲಕವೇ ಹಲ್‌ಚಲ್ ಎಬ್ಬಿಸಿರುವ ರೂಪಾ, ಕಳೆದ ಬಾರಿ ವಿವಿಧ ಭಂಗಿಗಳ ಫೋಟೋ ಹಂಚಿಕೊಂಡು ಕ್ಯಾಮೆರಾ ಕಣ್ಣಿಗೆ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು. ರೂಪಾ ಹಾಟ್ ಫೋಟೋ ಜೊತೆ ಟ್ರೋಲ್ ಮಾಡೋರಿಗೆ ಮನವಿ ಕೂಡ ಮಾಡಿದ್ದರು. 

46

ನನ್ನ ಹಾಲಿವುಡ್ ಸಿನಿಮಾ ಕನಸಿನ ಬಗ್ಗೆ ಹೇಳುತ್ತಾ ಟ್ರೋಲರ್ಸ್‌ಗೆ ಒಂದು ಮನವಿ ಎಂದಿದ್ದಾರೆ. ನಾನು ಅಪ್ಲೋಡ್ ಮಾಡಿರುವ ಫೋಟೋಸ್‌ ಒಂದು ಪ್ರೊಫೆಷನಲ್ ಎನ್ವೀರಾಂನ್ಮೆಂಟ್‌ನಲ್ಲಿ ಮಾಡೆಲಿಂಗ್‌ಗಾಗಿ ತೆಗೆದಿದ್ದು, ಅವುಗಳನ್ನ ಅಪಹಾಸ್ಯ ಮಾಡಿ ನಮ್ಮ ಪ್ರಯತ್ನಗಳು ವ್ಯರ್ಥವೆಂದು ಅನಿಸುವಂತೆ ಮಾಡಬೇಡಿ. 

56

ಕೆಟ್ಟದಾಗಿ ಕಾಮೆಂಟ್ ಹಾಕುವುದಕ್ಕೆ ಒಂದು ನಿಮಿಷ ಸಾಕು. ನಮಗೆ ಅವುಗಳ ಪರಿಣಾಮದಿಂದ ಹೊರಬರಲು ಹೆಚ್ಚು ಸಮಯ ಬೇಕು. ಆದ್ದರಿಂದ ದಯವಿಟ್ಟು ಕಲೆಯ ಕೆಲಸವನ್ನು ಗೌರವಿಸಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ರೂಪಾ ರಾಯಪ್ಪ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಹಿಂದೆ ಮನವಿ ಮಾಡಿದ್ದರು.

66

‘ಎಲ್ರ ಕಾಲೆಳೆಯುತ್ತೆ ಕಾಲ’ ಚಿತ್ರದಲ್ಲಿ ಬಿಗ್ ಬಾಸ್ ವಿನ್ನರ್ ಚಂದನ್ ಶೆಟ್ಟಿ ಜೊತೆ ರೂಪಾ ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಶ್ವೇತಾ ಶ್ರೀವಾತ್ಸವ್ ಜೊತೆ ಹೊಸ ಪ್ರಾಜೆಕ್ಟ್‌ನಲ್ಲಿ ನಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ರೂಪಾ ರಾಯಪ್ಪ ಹಿಂದಿ ವೆಬ್ ಸಿರೀಸ್‌ವೊಂದರಲ್ಲಿ ಬಣ್ಣ ಹಚ್ಚಿದ್ದಾರೆ. ಈ ಮೂಲಕ ಹಿಂದಿ ಚಿತ್ರರಂಗಕ್ಕೂ ಪರಿಚಯವಾಗಲಿದ್ದಾರೆ. 

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories