ಇನ್ನೂ ಮುಗಿದಿಲ್ಲ ಮ್ಯಾಕ್ಸ್ ಶೂಟಿಂಗ್: ಆದರೆ ಕಿಚ್ಚ ಸುದೀಪ್ ಮಹಾಬಲಿಪುರಂನಲ್ಲಿರೋದ್ಯಾಕೆ?

Published : Apr 01, 2024, 12:31 PM IST

ಸ್ಟಾರ್‌ ಸಿನಿಮಾಗಳು ಬಿಡುಗಡೆಯಾಗುತ್ತಿಲ್ಲ. ಶೀಘ್ರ ಬಿಡುಗಡೆಯಾಗಬಹುದಾದ ಸಿನಿಮಾ ಯಾವುದು ಎಂದು ನೋಡಿದರೆ ಮನಸ್ಸಿಗೆ ಬರುವ ಮೊದಲ ಹೆಸರು ‘ಮ್ಯಾಕ್ಸ್’. 

PREV
17
ಇನ್ನೂ ಮುಗಿದಿಲ್ಲ ಮ್ಯಾಕ್ಸ್ ಶೂಟಿಂಗ್: ಆದರೆ ಕಿಚ್ಚ ಸುದೀಪ್ ಮಹಾಬಲಿಪುರಂನಲ್ಲಿರೋದ್ಯಾಕೆ?

ಕಿಚ್ಚ ಸುದೀಪ್ ಅಭಿನಯದ ಈ ಸಿನಿಮಾ ಸದ್ಯಕ್ಕಂತೂ ಬಿಡುಗಡೆ ಆಗುವ ಲಕ್ಷಣಗಳಿಲ್ಲ. ಯಾಕೆಂದರೆ ಚಿತ್ರೀಕರಣ ನಡೆಯುತ್ತಲೇ ಇದೆ. ಇನ್ನೂ 15-20 ದಿನಗಳ ಶೂಟಿಂಗ್ ಬಾಕಿ ಇದೆ ಎನ್ನಲಾಗುತ್ತಿದೆ. ಆದರೆ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಈ ಸಿನಿಮಾ ಹಬ್ಬವಾಗಲಿದೆ ಎನ್ನುತ್ತವೆ ಮೂಲಗಳು. 

27

ಬಹಳ ದಿನಗಳ ಬಳಿಕ ಸುದೀಪ್ ಅ‍ವರನ್ನು ಹೊಸ ರೂಪದಲ್ಲಿ ನೋಡಬಹುದು ಎಂದು ಆಪ್ತ ಮೂಲಗಳು ತಿಳಿಸಿವೆ. ಸದ್ಯಕ್ಕೆ ಸುದೀಪ್ ಮಹಾಬಲಿಪುರಂನಲ್ಲಿರುವ ಮ್ಯಾಕ್ಸ್ ಶೂಟಿಂಗ್ ಸೆಟ್‌ನಲ್ಲಿ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ.

37

‘ಮ್ಯಾಕ್ಸ್’ ಸಿನಿಮಾ ಬಗ್ಗೆ ಅಭಿಮಾನಿಗಳು ಪದೇ ಪದೇ ಅಪ್‌ಡೇಟ್ ಕೇಳುತ್ತಲೇ ಇರುತ್ತಾರೆ. ಅದಕ್ಕೆ ಈ ಹಿಂದೆಯೂ ಪ್ರತಿಕ್ರಿಯೆ ನೀಡಿದ್ದರು ಸುದೀಪ್,  ‘ನಿಮ್ಮ ಪ್ರೀತಿ, ಕ್ಯೂರಿಯಾಸಿಟಿ ನನಗೆ ಅರ್ಥವಾಗುತ್ತದೆ. ಆದರೆ, ಸಿನಿಮಾ ಶೂಟ್ ಪೂರ್ಣಗೊಳ್ಳದೆ ಆ ಬಗ್ಗೆ ಅಪ್‌ಡೇಟ್ ನೀಡೋದು ಹೇಗೆ’ ಅನ್ನೋದು ಸುದೀಪ್ ಅವರ ಪ್ರಶ್ನೆಯಾಗಿತ್ತು. 

47

ನವೆಂಬರ್‌ನಲ್ಲಿ ಮಳೆಯಿಂದ ಶೂಟ್ ಮಾಡಲು ಸಾಧ್ಯವಾಗಿರಲಿಲ್ಲ. ಡಿಸೆಂಬರ್‌ನಲ್ಲಿ ಕೆಲವು ಅಡೆತಡೆಗಳು ಎದುರಾದವು. ಈಗ ಸಂಕ್ರಾಂತಿ ಬಳಿಕ ಮತ್ತೆ ‘ಮ್ಯಾಕ್ಸ್’ ಶೂಟಿಂಗ್ ಶುರು ಆಗಿದೆ ಎಂದು ತಿಳಿಸಿದ್ದರು. 

57

ಮೊನ್ನೆಯಷ್ಟೇ ಸಿನಿಮಾದ ಪ್ರಮುಖ ದೃಶ್ಯವನ್ನು ಶೂಟ್ ಮಾಡಿ ಮುಗಿಸಿದ್ದಾರೆ. ಅದೊಂದು ಪ್ರಮುಖ ಘಟ್ಟ. ಜೊತೆಗೆ ಸಣ್ಣದೊಂದು ಭಾಗದ ಚಿತ್ರೀಕರಣ ಮುಗಿದರೆ ಸಿನಿಮಾ ಮುಗಿದಂತೆ. 

67

ಎಲ್ಲ ರಫ್ ಕಟ್ ದೃಶ್ಯಗಳನ್ನು ನೋಡಿದೆ. ಸೂಪರ್. ಅದ್ಭುತವಾಗಿ ಸಿನಿಮಾ ಮೂಡಿ ಬಂದಿದೆ. ಪ್ರತಿಯೊಬ್ಬರ ಎಫರ್ಟ್ ಕಾಣುತ್ತಿದೆ ಎಂದು ಸುದೀಪ್ ಈ ಹಿಂದೆ ಎಕ್ಸ್ (ಟ್ವೀಟ್) ಮಾಡಿದ್ದರು.

77

ಎಲ್ಲಾ ಅಂದುಕೊಂಡಂತೆ ನಡೆದರೆ ಮ್ಯಾಕ್ಸ್‌ ಚಿತ್ರ ಮೇ ತಿಂಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಇನ್ನು ಕೆಲವೇ ದಿನಗಳ ಚಿತ್ರೀಕರಣವಷ್ಟೇ ಬಾಕಿ ಇದೆ ಎಂದು ಸುದೀಪ್ ತಿಳಿಸಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories