ಡಿ.25ಕ್ಕೆ ಥಿಯೇಟರ್‌ನಲ್ಲಿ ಒಂದು ಸಿನಿಮಾ ಬಿಡುಗಡೆ ಆಗುತ್ತೆ. ಹೊರಗಡೆ ಒಂದು ಪಡೆ ಯುದ್ಧಕ್ಕೆ ರೆಡಿ ಆಗ್ತಿದೆ. ಈ ವೇದಿಕೆ ಮೇಲೆ ಹೇಳ್ತೀನಿ. ಯುದ್ಧಕ್ಕೆ ಸಿದ್ಧ. ಯಾಕಂದ್ರೆ ನಾವು ನಮ್ಮ ಮಾತಿಗೆ ಬದ್ಧ ಎಂದು ಕಿಚ್ಚ ಸುದೀಪ್ ಹೇಳಿದರು.
ಕೆಲವು ಮಾತು ಹುಬ್ಬಳ್ಳಿಗೆ ಬಂದು ಮಾತನಾಡಿದ್ರೆ, ಇಡೀ ಕರ್ನಾಟಕಕ್ಕೆ ಎಲ್ಲಿ ತಟ್ಟಬೇಕೋ ಅಲ್ಲಿ ತಟ್ಟುತ್ತದೆ. ಡಿ.25ಕ್ಕೆ ಥಿಯೇಟರ್‌ನಲ್ಲಿ ಒಂದು ಸಿನಿಮಾ ಬಿಡುಗಡೆ ಆಗುತ್ತೆ. ಹೊರಗಡೆ ಒಂದು ಪಡೆ ಯುದ್ಧಕ್ಕೆ ರೆಡಿ ಆಗ್ತಿದೆ. ಈ ವೇದಿಕೆ ಮೇಲೆ ಹೇಳ್ತೀನಿ. ಯುದ್ಧಕ್ಕೆ ಸಿದ್ಧ. ಯಾಕಂದ್ರೆ ನಾವು ನಮ್ಮ ಮಾತಿಗೆ ಬದ್ಧ.
26
ಮಾರ್ಕ್ ಪ್ರಿ ರಿಲೀಸ್ ಈವೆಂಟ್
ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಆಯೋಜನೆಯಾಗಿದ್ದ ‘ಮಾರ್ಕ್’ ಸಿನಿಮಾದ ಪ್ರಿ ರಿಲೀಸ್ ಈವೆಂಟ್‌ನಲ್ಲಿ ತಮ್ಮ ವಿರುದ್ಧ ಕತ್ತಿ ಮಸೆಯುತ್ತಿರುವವರಿಗೆ ಕಿಚ್ಚ ಸುದೀಪ್ ಮಾರ್ಮಿಕವಾಗಿ ತಿರುಗೇಟು ಕೊಟ್ಟ ಬಗೆ ಹೀಗಿತ್ತು.
36
ಸುದೀಪ್ ಭರದ ಪ್ರಚಾರ
ಈ ಮೂಲಕ ಡಿ.25ಕ್ಕೆ ಬಿಡುಗಡೆಯಾಗುತ್ತಿರುವ ತನ್ನ ನಟನೆ, ನಿರ್ಮಾಣದ ಸಿನಿಮಾದ ಪರ ಸುದೀಪ್ ಭರದ ಪ್ರಚಾರ ಮಾಡಿದರು. ಡಿಸೆಂಬರ್ 25ಕ್ಕೆ ಥಿಯೇಟರ್ ಬಾಗಿಲು ತಟ್ತೀವಿ ಅಂತ ಜುಲೈ 5ಕ್ಕೇ ಹೇಳಿದ್ದೆ.
ಕೊಟ್ಟ ಮಾತಿನಂತೆ ಈಗ ಜೋರಾಗಿ ಬಾಗಿಲು ತಟ್ಟುತ್ತಿದ್ದೀವಿ. ಸೈಲೆಂಟ್ ಆಗಿರೋದು ಒಳ್ಳೆಯದೋ ಕೆಟ್ಟದೋ ಗೊತ್ತಿಲ್ಲ. ಆದರೆ ಕೆಲವೊಮ್ಮೆ ನಿಮಗೋಸ್ಕರ ಬಾಯಿ ಮುಚ್ಚಿಕೊಂಡಿದ್ದೆ. ಬಾಯಿ ಇಲ್ಲ ಅಂತಲ್ಲ. ನನ್ನಿಂದಾಗಿ ನಿಮ್ಮ ಮೇಲೆ ಕಲ್ಲು ತೂರಾಟ ನಡೆಯುತ್ತೆ.
56
ಅಭಿಮಾನಿಗಳನ್ನು ಹುರಿದುಂಬಿಸಿದ ಸುದೀಪ್
ಇವತ್ತು ಹೇಳ್ತಿದ್ದೀನಿ, ತಡೆಯುವಷ್ಟು ತಡೆಯಿರಿ. ಮಾತನಾಡುವ ಸಮಯದಲ್ಲಿ ಮಾತಾಡಿ. ಡಿಸೆಂಬರ್ 25ಕ್ಕೆ ಪರದೆ ಮುಂದೆ ನೀವು ಕೂಗುವ ಕೂಗು ನನಗೆ ಬೆಂಗಳೂರಿನಲ್ಲಿ ಕೇಳಿಸಬೇಕು ಎಂದೂ ಸುದೀಪ್ ಅಭಿಮಾನಿಗಳನ್ನು ಹುರಿದುಂಬಿಸಿದ್ದಾರೆ.
66
ಅಜಯ್ ಮಾರ್ಕಂಡೇಯ ಪಾತ್ರದಲ್ಲಿ ಸುದೀಪ್
ವಿಜಯ ಕಾರ್ತಿಕೇಯ ನಿರ್ದೇಶನದ ಆ್ಯಕ್ಷನ್ ಥ್ರಿಲ್ಲರ್ ‘ಮಾರ್ಕ್’ ನಲ್ಲಿ ಸುದೀಪ್, ಪೊಲೀಸ್ ಆಫೀಸರ್ ಅಜಯ್ ಮಾರ್ಕಂಡೇಯ ಪಾತ್ರದಲ್ಲಿ ನಟಿಸಿದ್ದಾರೆ. ಸತ್ಯಜ್ಯೋತಿ ಫಿಲಂಸ್ ಮತ್ತು ಕಿಚ್ಚ ಕ್ರಿಯೇಶನ್ಸ್ ಈ ಸಿನಿಮಾ ನಿರ್ಮಿಸಿವೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.