ಕುಟುಂಬ ಸಮೇತರಾಗಿ ಧರ್ಮಸ್ಥಳ ಮಂಜುನಾಥ, ಕುಕ್ಕೆ ಸುಬ್ರಹ್ಮಣ್ಯ ದರ್ಶನ ಪಡೆದ ನಿಖಿಲ್ ಕುಮಾರಸ್ವಾಮಿ

First Published | Sep 23, 2024, 7:08 PM IST

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುತ್ರ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರು ಪತ್ನಿ ರೇವತಿ ಮಂಜುನಾಥ್, ಪುತ್ರ ಅವ್ಯಾನ್ ದೇವ್ ಜೊತೆ ದಕ್ಷಿಣ ಕನ್ನಡದ ಸುಪ್ರಸಿದ್ಧ ದೇವಸ್ಥಾನಗಳಿಗೆ ಭೇಟಿ ಕೊಟ್ಟಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಅವರು ಸಿನಿಮಾದಿಂದ ದೂರಗುಳಿದು, ರಾಜಕೀಯದಲ್ಲಿ ಸಕ್ರಿಯವಾಗಿದ್ದಾರೆ. ಸದ್ಯ ಅವರು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡು, ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಸತ್ಯ, ನ್ಯಾಯದ ನೆಲೆವೀಡು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿ ನಾಡಿನ ಜನತೆಗೆ ಒಳಿತಾಗಲಿ ಎಂದು ಪ್ರಾರ್ಥಿಸಿದೆ. ನಂತರ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಪೂಜ್ಯ ಶ್ರೀ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದೆ. 
 

Tap to resize

ನಾಗರಾಧನೆಗೆ ಪ್ರಸಿದ್ಧವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಶ್ರೀ ಕುಕ್ಕೆ ಸುಬ್ರಮಣ್ಯ ಸ್ವಾಮಿಯ ದೇಗುಲಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿಕೊಂಡಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಅವರು ಸಿನಿಮಾದಿಂದ ದೂರಗುಳಿದು, ರಾಜಕೀಯದಲ್ಲಿ ಸಕ್ರಿಯವಾಗಿದ್ದಾರೆ. ಪಕ್ಷ ಕಟ್ಟುವತ್ತ ಅವರು ಮುಖಮಾಡುತ್ತಿದ್ದು, ಇನ್ನು ಸಮಾಜದಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಮಾತನಾಡಿದ್ದಾರೆ.

ಇನ್ನು ನಿಖಿಲ್ ಕುಮಾರಸ್ವಾಮಿ ದೈವ ಭಕ್ತರಾಗಿದ್ದು, ಹೆಚ್ಚಾಗಿ ತಮಗೆ ಬಿಡುವು ಸಿಕ್ಕಾಗಲೆಲ್ಲಾ ವಿವಿಧ ತೀರ್ಥ ಕ್ಷೇತ್ರಗಳಿಗೆ ತೆರಳಿ ದೇವರ ದರ್ಶನ ಪಡೆದು ಬರುತ್ತಾರೆ. ಈ ಹಿಂದೆ ನಿಖಿಲ್, ಕುಟುಂಬ ಸಮೇತರಾಗಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಪೂಜೆ, ಹರಕೆಯನ್ನು ಸಲ್ಲಿಸಿದ್ದರು.
 

Latest Videos

click me!