ಜನಾರ್ದನ್ ಚಿಕ್ಕಣ್ಣ ನಿರ್ದೇಶನದ ‘ಪೌಡರ್’ ಚಿತ್ರದ ಮುಹೂರ್ತ ಇತ್ತೀಚೆಗೆ ನಡೆಯಿತು. ಕಿಚ್ಚ ಸುದೀಪ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದರೆ, ನಿರ್ಮಾಪಕ ಕಾರ್ತಿಕ್ ಗೌಡ ತಂದೆ ರಾಮಕೃಷ್ಣೇಗೌಡ ಕ್ಯಾಮೆರಾ ಸ್ವಿಚ್ ಆನ್ ಮಾಡಿದರು.
25
ಇದೊಂದು ಹಾಸ್ಯಮಯ ಚಿತ್ರ. ಒಂದು ಸಣ್ಣ ಊರಿನ ಯುವಕರಿಗೆ ದೊಡ್ಡ ಪ್ರಮಾಣದಲ್ಲಿ ಕೊಕೇನ್ ಸಿಗುತ್ತದೆ. ಒಂದು ಕಡೆ ಆ ಕೊಕೇನ್‌ಗಾಗಿ ಹುಡುಕಾಟದಲ್ಲಿರುವ ದುಷ್ಟರ ಗುಂಪು.
35
ಇನ್ನೊಂದು ಕಡೆ ಆ ಕೊಕೇನ್ ಮಾರಿ ದಿಢೀರ್ ಶ್ರೀಮಂತರಾಗಬೇಕೆಂಬ ಯುವಕರ ಗುಂಪು. ಇದರ ನಡುವೆ ತಮ್ಮ ಅಧಿಪತ್ಯ ಸ್ಥಾಪಿಸುವುದಕ್ಕೆ ಪ್ರಯತ್ನಿಸುತ್ತಿರುವ ವ್ಯಕ್ತಿ. ಈ ಆಟದಲ್ಲಿ ಗೆಲ್ಲುವವರು ಯಾರು ಎಂಬುದು ಚಿತ್ರದ ಕತೆ.
ಮುಹೂರ್ತ ಸಂದರ್ಭದಲ್ಲಿ ಡಾಲಿ ಧನಂಜಯ್, ಸಂತೋಷ್ ಆನಂದರಾಮ್, ರೋಹಿತ್ ಪದಕಿ, ಧೀರೇನ್ ರಾಮಕುಮಾರ್, ನವೀನ್ ಶಂಕರ್, ಕೆ ಮಂಜು, ಭೂಮಿ ಶೆಟ್ಟಿ, ನಾಗಭೂಷಣ್, ನಿರ್ಮಾಪಕ ಅರುಣಭ್ ಕುಮಾರ್ ಇದ್ದರು.