ರಕ್ಷಿತ್ ಶೆಟ್ಟಿ ಹುಟ್ಟುಹಬ್ಬಕ್ಕೆ ರಿಷಬ್ ಶೆಟ್ಟಿ ವಿಶೇಷ ವಿಶ್: ಸ್ನೇಹದ ಬಗ್ಗೆ ಹರಿದಾಡಿದ್ದ ವದಂತಿಗಳಿಗೆ ತೆರೆ!

Published : Jun 06, 2026, 05:05 PM IST

ಕನ್ನಡ ಚಿತ್ರರಂಗದಲ್ಲಿ ದಶಕಕ್ಕೂ ಹೆಚ್ಚು ಕಾಲದ ಸ್ನೇಹವನ್ನು ಹಂಚಿಕೊಂಡಿರುವ ರಕ್ಷಿತ್ ಮತ್ತು ರಿಷಬ್ ನಡುವಿನ ಸಂಬಂಧದ ಬಗ್ಗೆ ಇತ್ತೀಚೆಗೆ ಹಲವು ಊಹಾಪೋಹಗಳು ಕೇಳಿಬಂದಿದ್ದವು. ಆದರೆ ರಕ್ಷಿತ್ ಹುಟ್ಟುಹಬ್ಬದಂದು..

PREV
14
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ಸ್ಯಾಂಡಲ್‌ವುಡ್‌ನ ‘ಸಿಂಪಲ್ ಸ್ಟಾರ್’ ರಕ್ಷಿತ್ ಶೆಟ್ಟಿ ಇಂದು (ಜೂನ್.6) ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ಆತ್ಮೀಯ ಗೆಳೆಯ ಹಾಗೂ ‘ಡಿವೈನ್ ಸ್ಟಾರ್’ ರಿಷಬ್ ಶೆಟ್ಟಿ ಮಾಡಿರುವ ವಿಶಿಷ್ಟ ಶುಭಾಶಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜೊತೆಗೆ, ಕಳೆದ ಕೆಲ ದಿನಗಳಿಂದ ಹರಿದಾಡುತ್ತಿದ್ದ ಇಬ್ಬರ ನಡುವಿನ ಮನಸ್ತಾಪದ ವದಂತಿಗಳಿಗೆ ರಿಷಬ್ ತಮ್ಮ ಒಂದೇ ಒಂದು ಪೋಸ್ಟ್ ಮೂಲಕ ತೆರೆ ಎಳೆದಿದ್ದಾರೆ.

24
ಚರ್ಚೆಗಳಿಗೆ ಸ್ಪಷ್ಟ ಉತ್ತರ

ಕನ್ನಡ ಚಿತ್ರರಂಗದಲ್ಲಿ ದಶಕಕ್ಕೂ ಹೆಚ್ಚು ಕಾಲದ ಸ್ನೇಹವನ್ನು ಹಂಚಿಕೊಂಡಿರುವ ರಕ್ಷಿತ್ ಮತ್ತು ರಿಷಬ್ ನಡುವಿನ ಸಂಬಂಧದ ಬಗ್ಗೆ ಇತ್ತೀಚೆಗೆ ಹಲವು ಊಹಾಪೋಹಗಳು ಕೇಳಿಬಂದಿದ್ದವು. ಆದರೆ ರಕ್ಷಿತ್ ಹುಟ್ಟುಹಬ್ಬದಂದು ರಿಷಬ್ ಹಂಚಿಕೊಂಡಿರುವ ಪೋಸ್ಟ್ ಆ ಎಲ್ಲ ಚರ್ಚೆಗಳಿಗೆ ಸ್ಪಷ್ಟ ಉತ್ತರ ನೀಡಿದೆ.

34
ಹ್ಯಾಪಿ ಬರ್ತ್‌ಡೇ ಮಗ

‘ಕಿರಿಕ್ ಪಾರ್ಟಿ’ ಚಿತ್ರದ ಚಿತ್ರೀಕರಣದ ವೇಳೆ ಸೆರೆಹಿಡಿದ ಹಳೆಯ ಫೋಟೋವನ್ನು ಹಂಚಿಕೊಂಡಿರುವ ರಿಷಬ್, 'ಬಂದು ಹೋಗುವ ಜನರ ಮಧ್ಯೆ ಈ ಗೆಳೆಯ ಶಾಶ್ವತ ಅಧ್ಯಾಯವಾಗಿದ್ದಾನೆ. ಹ್ಯಾಪಿ ಬರ್ತ್‌ಡೇ ಮಗ ರಕ್ಷಿತ್ ಶೆಟ್ಟಿ' ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ. ಈ ಸಾಲುಗಳು ಇಬ್ಬರ ನಡುವಿನ ಗಾಢ ಸ್ನೇಹವನ್ನು ಮತ್ತೊಮ್ಮೆ ಅಭಿಮಾನಿಗಳ ಮುಂದೆ ಅನಾವರಣಗೊಳಿಸಿವೆ.

44
ಸದ್ಯದಲ್ಲೇ ಮರಳಿ ಬರಲಿದ್ದಾನೆ

ಇದರ ಜೊತೆಗೆ, ರಕ್ಷಿತ್ ಶೆಟ್ಟಿ ಅವರ ಮುಂದಿನ ಸಿನಿಮಾ ಕುರಿತು ಕಾತರದಿಂದ ಕಾಯುತ್ತಿರುವ ಅಭಿಮಾನಿಗಳಿಗೆ ರಿಷಬ್ ಮತ್ತೊಂದು ಸಂತಸದ ಸುಳಿವನ್ನೂ ನೀಡಿದ್ದಾರೆ. 'ಮೊನ್ನೆ ತಾನೇ ಭೇಟಿ ಮಾಡಿ ಬಂದೆ. ಅವನು ಸದ್ಯದಲ್ಲೇ ಮರಳಿ ಬರಲಿದ್ದಾನೆ' ಎಂದು ಕಾಮೆಂಟ್ ಮಾಡಿರುವ ರಿಷಬ್, ರಕ್ಷಿತ್ ಅವರ ಮುಂದಿನ ಸಿನಿಮಾ ಅಪ್‌ಡೇಟ್ ಶೀಘ್ರದಲ್ಲೇ ಬರಬಹುದೆಂಬ ನಿರೀಕ್ಷೆಯನ್ನು ಹೆಚ್ಚಿಸಿದ್ದಾರೆ. ಸದ್ಯ ರಿಷಬ್ ಶೆಟ್ಟಿ ಅವರ ಈ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ರಕ್ಷಿತ್ ಅಭಿಮಾನಿಗಳಲ್ಲಿ ಹೊಸ ಉತ್ಸಾಹ ಮೂಡಿಸಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories