ಶರ್ಮಿಳಾ ಮದುವೆ ಸಂಭ್ರಮಕ್ಕೆ ರಮ್ಯಾ ಸ್ಪೆಷಲ್ ಎಂಟ್ರಿ: ಮೋಹಕ ತಾರೆ ಲುಕ್‌ಗೆ ಫ್ಯಾನ್ಸ್ ಕ್ಲೀನ್ ಬೋಲ್ಡ್

Published : Jul 12, 2026, 09:32 PM IST

ಬಹುಕಾಲದ ಸ್ನೇಹಿತೆಯಾಗಿರುವ ಸ್ಯಾಂಡಲ್‌ವುಡ್‌ ಕ್ವೀನ್ ರಮ್ಯಾ, ಶರ್ಮಿಳಾ ಅವರ ಪ್ರೀ-ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದರು. ಕಾರ್ಯಕ್ರಮದ ಪ್ರತಿಯೊಂದು ಕ್ಷಣವನ್ನು ಆನಂದಿಸಿದರು.

PREV
16
ರಮ್ಯಾ ಸ್ಪೆಷಲ್ ಎಂಟ್ರಿ

ನಟಿ ಶರ್ಮಿಳಾ ಮಾಂಡ್ರೆ ಹಾಗೂ ನಿರ್ಮಾಪಕ ಸುಧನ್ ಸುಂದರಂ ಅವರ ವಿವಾಹ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇತ್ತೀಚೆಗಷ್ಟೇ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಈ ಜೋಡಿ, ಇದೀಗ ಮದುವೆ ಪೂರ್ವ ಸಂಭ್ರಮದಲ್ಲಿ ತೊಡಗಿಸಿಕೊಂಡಿದ್ದು, ಕುಟುಂಬದವರು ಹಾಗೂ ಆಪ್ತರ ಸಮ್ಮುಖದಲ್ಲಿ ನಡೆದ ಪ್ರೀ-ವೆಡ್ಡಿಂಗ್ ಸೆಲೆಬ್ರೇಷನ್ ಸಂಭ್ರಮದಿಂದ ಕೂಡಿತ್ತು. ಈ ವಿಶೇಷ ಕಾರ್ಯಕ್ರಮದಲ್ಲಿ ನಟಿ ಸ್ಯಾಂಡಲ್‌ವುಡ್‌ನ ಮೋಹಕ ತಾರೆ ರಮ್ಯಾ (ದಿವ್ಯ ಸ್ಪಂದನ) ಕೂಡ ಭಾಗವಹಿಸಿ ಎಲ್ಲರ ಗಮನ ಸೆಳೆದಿದ್ದಾರೆ.

26
ಮದುವೆ ಮನೆಯ ಸಂಭ್ರಮದಲ್ಲಿ ತೇಲಿದ ಶರ್ಮಿಳಾ

ಶರ್ಮಿಳಾ ಮಾಂಡ್ರೆ ಅವರ ನಿವಾಸದಲ್ಲಿ ಮದುವೆ ಪೂರ್ವ ಶಾಸ್ತ್ರಗಳು ಮತ್ತು ಸಂಪ್ರದಾಯಬದ್ಧ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯುತ್ತಿವೆ. ಕುಟುಂಬಸ್ಥರು, ಬಂಧು-ಬಳಗ ಹಾಗೂ ಆಪ್ತ ಸ್ನೇಹಿತರ ಸಮ್ಮುಖದಲ್ಲಿ ನಡೆದ ಈ ಸಂಭ್ರಮದಲ್ಲಿ ವಧು ಶರ್ಮಿಳಾ ಸಂತಸದಿಂದ ಕಂಗೊಳಿಸಿದ್ದು, ಮನೆ ತುಂಬಾ ಹಬ್ಬದ ವಾತಾವರಣ ಕಂಡುಬಂದಿದೆ.

36
ಗೆಳತಿಯ ವಿಶೇಷ ಕ್ಷಣಗಳಿಗೆ ಸಾಕ್ಷಿಯಾದ ರಮ್ಯಾ

ಬಹುಕಾಲದ ಸ್ನೇಹಿತೆಯಾಗಿರುವ ರಮ್ಯಾ, ಶರ್ಮಿಳಾ ಅವರ ಪ್ರೀ-ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದರು. ಕಾರ್ಯಕ್ರಮದ ಪ್ರತಿಯೊಂದು ಕ್ಷಣವನ್ನು ಆನಂದಿಸಿದ ಅವರು, ವಧುವಿನೊಂದಿಗೆ ಫೋಟೋಗಳಿಗೆ ಪೋಸ್ ನೀಡಿ ಗಮನ ಸೆಳೆದರು. ಇಬ್ಬರ ಸ್ನೇಹದ ಕ್ಷಣಗಳು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿವೆ.

46
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಫೋಟೋಗಳು

ಪ್ರೀ-ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಉಡುಪಿನಲ್ಲಿ ಮಿಂಚಿದ ರಮ್ಯಾ ಅವರ ಸ್ಟೈಲಿಶ್ ಲುಕ್ ಹಾಗೂ ಶರ್ಮಿಳಾ ಅವರೊಂದಿಗೆ ಕ್ಲಿಕ್ಕಿಸಿಕೊಂಡಿರುವ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅಭಿಮಾನಿಗಳು ಈ ಚಿತ್ರಗಳಿಗೆ ಮೆಚ್ಚುಗೆಯ ಕಾಮೆಂಟ್‌ಗಳನ್ನು ಮಾಡುತ್ತಿದ್ದು, "ಎರಡು ಸುಂದರಿಯರು ಒಂದೇ ಫ್ರೇಮ್‌ನಲ್ಲಿ" ಎಂದು ಪ್ರಶಂಸಿಸುತ್ತಿದ್ದಾರೆ.

56
ಗಣ್ಯರಿಗೆ ಖುದ್ದಾಗಿ ಆಹ್ವಾನ ನೀಡಿದ್ದ ಜೋಡಿ

ಇತ್ತೀಚೆಗೆ ನಡೆದ ನಿಶ್ಚಿತಾರ್ಥದ ಬಳಿಕ ಶರ್ಮಿಳಾ ಮಾಂಡ್ರೆ ಮತ್ತು ಸುಧನ್ ಸುಂದರಂ, ಚಿತ್ರರಂಗದ ಗಣ್ಯರು ಹಾಗೂ ರಾಜಕೀಯ ನಾಯಕರನ್ನು ಖುದ್ದಾಗಿ ಭೇಟಿ ಮಾಡಿ ತಮ್ಮ ಮದುವೆಗೆ ಆಹ್ವಾನ ನೀಡಿದ್ದರು. ಈ ಜೋಡಿಯ ವಿವಾಹಕ್ಕೆ ಸ್ಯಾಂಡಲ್‌ವುಡ್‌ನ ಹಲವು ಗಣ್ಯರು ಸಾಕ್ಷಿಯಾಗಲಿದ್ದಾರೆ ಎಂಬ ನಿರೀಕ್ಷೆಯಿದೆ.

66
ಮದುವೆಗೆ ಕ್ಷಣಗಣನೆ

ಶರ್ಮಿಳಾ ಮಾಂಡ್ರೆ ಮತ್ತು ಸುಧನ್ ಸುಂದರಂ ಅವರ ಮದುವೆ ದಿನ ಸಮೀಪಿಸುತ್ತಿದ್ದಂತೆ, ಮಾಂಡ್ರೆ ಕುಟುಂಬದಲ್ಲಿ ಸಂಭ್ರಮ ಮನೆಮಾಡಿದೆ. ಮದುವೆ ಪೂರ್ವ ಕಾರ್ಯಕ್ರಮಗಳ ಝಲಕ್ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿವಾಹ ಸಮಾರಂಭದ ಫೋಟೋಗಳಿಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories