ಹೊಂಬಾಳೆ ಫಿಲಂಸ್ ಬ್ಯಾನರ್‌ನಡಿ ನಿರ್ಮಾಣವಾಗುತ್ತಿರುವ ರಾಘವೇಂದ್ರ ರಾಜ್‌ಕುಮಾರ್ ಪುತ್ರ ಯುವರಾಜ್ ಕುಮಾರ್ ನಟನೆಯ ಚಿತ್ರಕ್ಕೆ ರುಕ್ಮಿಣಿ ವಸಂತ್ ನಾಯಕಿಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ ರುಕ್ಮಿಣಿ ಈ ಸುದ್ದಿ ನಿರಾಕರಿಸಿದ್ದಾರೆ. ಈ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.