ಮಲಯಾಳಂ ಸೂಪರ್‌ಸ್ಟಾರ್‌ ಜೊತೆ ಪ್ಯಾನ್‌ ಇಂಡಿಯಾ ಸಿನಿಮಾ ಮಾಡ್ತಾರೆ ಇಂದ್ರಜಿತ್ ಪುತ್ರ: ವೃಷಭದಲ್ಲಿ ಸಮರ್ಜಿತ್?

Published : Feb 24, 2025, 05:08 PM ISTUpdated : Feb 24, 2025, 05:12 PM IST

ಈ ಬಿಗ್‌ಬಜೆಟ್‌ ಸಿನಿಮಾವನ್ನು ಕನ್ನಡದ ನಿರ್ದೇಶಕ ನಂದಕಿಶೋರ್ ನಿರ್ದೇಶಿಸುತ್ತಿದ್ದು, ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಮುಖ್ಯಪಾತ್ರದಲ್ಲಿ ನಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

PREV
16
ಮಲಯಾಳಂ ಸೂಪರ್‌ಸ್ಟಾರ್‌ ಜೊತೆ ಪ್ಯಾನ್‌ ಇಂಡಿಯಾ ಸಿನಿಮಾ ಮಾಡ್ತಾರೆ ಇಂದ್ರಜಿತ್ ಪುತ್ರ: ವೃಷಭದಲ್ಲಿ ಸಮರ್ಜಿತ್?

ನಾಯಕ ನಟ ಸಮರ್ಜಿತ್ ಲಂಕೇಶ್ ಇದೀಗ ಮಲಯಾಳಂ ಸೂಪರ್‌ಸ್ಟಾರ್‌ ಮೋಹನ್‌ಲಾಲ್ ನಟನೆಯ ಪ್ಯಾನ್‌ ಇಂಡಿಯಾ ಸಿನಿಮಾ ‘ವೃಷಭ’ದಲ್ಲಿ ನಟಿಸಲಿದ್ದಾರೆ ಎನ್ನಲಾಗಿದೆ.

26

ಈ ಬಿಗ್‌ಬಜೆಟ್‌ ಸಿನಿಮಾವನ್ನು ಕನ್ನಡದ ನಿರ್ದೇಶಕ ನಂದಕಿಶೋರ್ ನಿರ್ದೇಶಿಸುತ್ತಿದ್ದು, ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಮುಖ್ಯಪಾತ್ರದಲ್ಲಿ ನಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
36

ಮಲಯಾಳಂ ಹಾಗೂ ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಈ ಸಿನಿಮಾ ಕನ್ನಡ, ತಮಿಳು ಹಾಗೂ ಹಿಂದಿ ವರ್ಶನ್‌ಗಳಲ್ಲಿ ಬಿಡುಗಡೆಯಾಗಲಿದೆ.

46

ವೃಷಭ ಚಿತ್ರವನ್ನು ಆಕ್ಷನ್-ಪ್ಯಾಕ್ಡ್ ಎಂಟರ್‌ಟೈನರ್ ಎಂದು ಬಿಂಬಿಸಲಾಗಿದೆ. ಇದು 500 ವರ್ಷಗಳ ಹಿಂದಿನ ತಂದೆ-ಮಗನ ಕಥೆಯನ್ನು ಒಳಗೊಂಡಿದೆ. ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಬಿಡುಗಡೆ ಮಾಡುವ ಗುರಿಯನ್ನು ಚಿತ್ರತಂಡ ಹೊಂದಿದೆ. 

56

ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಪುತ್ರ ಸಮರ್ಜಿತ್ 'ಗೌರಿ' ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಸಮರ್ಜಿತ್ ಚಿತ್ರದಲ್ಲಿ ನಟಿಸುತ್ತಿರುವ ಬಗ್ಗೆ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಮಾಡಲಿದೆ.

66

ಈಗಾಗಲೇ ನಾಲ್ಕು ತಿಂಗಳಿಗೂ ಹೆಚ್ಚು ಕಾಲ ಸಮರ್ಜಿತ್ ಮುಂಬೈ ಮತ್ತು ಇತರ ಸ್ಥಳಗಳಲ್ಲಿ ಈಗಾಗಲೇ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. ಚಿತ್ರಕ್ಕಾಗಿ ನಟ ಕುದುರೆ ಸವಾರಿ, ಕತ್ತಿವರಸೆ ಹಾಗೂ ಜಿಮ್ನಾಸ್ಟಿಕ್ಸ್ ಸೇರಿದಂತೆ ಪಾತ್ರಕ್ಕಾಗಿ ಕಠಿಣ ತರಬೇತಿ ಪಡೆದಿದ್ದಾರೆ.

Read more Photos on
click me!

Recommended Stories