ನೀಟ್ ಪರೀಕ್ಷಾ ಹಗರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಸ್ಯಾಂಡಲ್‌ವುಡ್ ನಟ ಯುವ ರಾಜ್‌ಕುಮಾರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಧ್ವನಿಯನ್ನು ಆಲಿಸಿ, ಸತ್ಯಾಂಶಗಳನ್ನು ತಿಳಿದು, ಹೊಣೆಗಾರಿಕೆಯನ್ನು ಪ್ರಶ್ನಿಸಬೇಕು ಎಂದು ಕರೆ ನೀಡಿದ್ದಾರೆ.
ನೀಟ್ ಪರೀಕ್ಷಾ ಲೀಕ್ ಸಂಬಂಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸೇರಿದಂತೆ ಮೂರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಯುವ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ಪ್ರತಿಭಟನೆ ಸಂಬಂಧ ಸ್ಯಾಂಡಲ್‌ವುಡ್ ನಟ ಯುವ ರಾಜ್‌ಕುಮಾರ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
24
ಯುವ ರಾಜ್‌ಕುಮಾರ್ ಪೋಸ್ಟ್
ರಾಜಕೀಯಕ್ಕಿಂತ ಮಾನವೀಯತೆ ದೊಡ್ಡದು, ಪ್ರಚಾರಕ್ಕಿಂತ ಸತ್ಯ ದೊಡ್ಡದು, ಭಯಕ್ಕಿಂತ ಧ್ವನಿ ದೊಡ್ಡದು. ಈ ಪೋಸ್ಟ್ ಯಾವುದೇ ರಾಜಕೀಯ ಪಕ್ಷದ ಪರವೂ ಅಲ್ಲ, ವಿರೋಧವೂ ಅಲ್ಲ. ಇದು ಮಾನವೀಯತೆಯ ಬಗ್ಗೆ ದೆಹಲಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ನಾವು ಸುಮ್ಮನೆ ನೋಡುತ್ತಾ ಹೋಗಬಾರದು. ದೇಶದ ಮೂಲೆ ಮೂಲೆಗಳಿಂದ ವಿದ್ಯಾರ್ಥಿಗಳು ಒಂದೇ ವಿಚಾರಕ್ಕಾಗಿ ಧ್ವನಿ ಎತ್ತುತ್ತಿದ್ದಾರೆ. ಅವರ ಧ್ವನಿಯನ್ನು ಕೇಳುವುದು ಏನಾಗುತ್ತಿದೆ ಎಂದು ತಿಳಿದುಕೊಳ್ಳುವುದು ನಮ್ಮ ಜವಾಬ್ದಾರಿ.
34
ಪ್ರಶ್ನೆ ಮಾಡಿ, ಅಭಿಪ್ರಾಯ ರೂಪಿಸಿಕೊಳ್ಳಿ
ಯಾರು ಹೊಣೆ? ಈ ಪರಿಸ್ಥಿತಿ ತಪ್ಪಿಸಬಹುದಿತ್ತೆ? ವಿದ್ಯಾರ್ಥಿಗಳಿಗೆ ಗಾಯಗಳಾಗಲು ಕಾರಣವೇನು? ಇಂತಹ ಘಟನೆಗಳು ಮತ್ತೆ ನಡೆಯದಂತೆ ಏನು ಮಾಡಬೇಕು? ಪ್ರತಿಯೊಬ್ಬ ನಾಗರಿಕನಿಗೂ ಮಾಹಿತಿ ತಿಳಿದುಕೊಳ್ಳುವ ಜವಾಬ್ದಾರಿ ಇದೆ. ನೆಲಮಟ್ಟದಲ್ಲಿರುವವರ ಧ್ವನಿಯನ್ನು ಆಲಿಸಿ. ಸತ್ಯಾಂಶಗಳನ್ನು ತಿಳಿದುಕೊಳ್ಳಿ. ಕಷ್ಟದ ಪ್ರಶ್ನೆಗಳನ್ನು ಕೇಳಿ. ನಿಮ್ಮದೇ ಅಭಿಪ್ರಾಯ ರೂಪಿಸಿಕೊಳ್ಳಿ.
ಒಂದು ರಾಷ್ಟ್ರ ತನ್ನ ಜನರು ಕಣ್ಮುಚ್ಚಿ ನೋಡುವುದನ್ನು ಬಿಟ್ಟು ಮಾನವೀಯತೆಯ ಪರ ನಿಂತು ಹೊಣೆಗಾರಿಕೆಯನ್ನು ಕೇಳಿದಾಗ ಇನ್ನಷ್ಟು ಬಲವಾಗುತ್ತದೆ. ಇದು ನಮ್ಮೆಲ್ಲರ ಸಮಸ್ಯೆ. ಏಕೆಂದರೆ ಒಂದು ರಾಷ್ಟ್ರದ ಭವಿಷ್ಯವನ್ನು ಅದರ ಜನರ ಜಾಗೃತಿ, ಮಾನವೀಯತೆ ಮತ್ತು ಹೊಣೆಗಾರಿಕೆ ರೂಪಿಸುತ್ತವೆ ಎಂದು ಯುವ ರಾಜ್‌ಕುಮಾರ್ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.