ಪವಿತ್ರಾ ಮತ್ತು ನರೇಶ್ ಇಬ್ಬರು ಅನೇಕ ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದಾರೆ. ಸಿನಿಮಾದಿಂದ ಪ್ರಾರಂಭವಾದ ಸ್ನೇಹ ಬಳಿಕ ಪ್ರೀತಿಗೆ ತಿರುಗಿತ್ತು. ನಂತರ ಇಬ್ಬರು ಒಟ್ಟಿಗೆ ವಾಸಿಸಲು ಪ್ರಾರಂಭಿಸಿದರು. ಇದೀಗ ಮದುವೆಯಾಗಿದ್ದಾರೆ ಎನ್ನಲಾಗಿದೆ. ಪವಿತ್ರಾ ಲೋಕೇಶ್ ಕನ್ನಡ ಮತ್ತು ತೆಲುಗು ಸಿನಿಮಾರಂಗದಲ್ಲಿ ಮಿಂಚುತ್ತಿದ್ದಾರೆ. ಎರಡು ಭಾಷೆಯಲ್ಲಿ ಬ್ಯುಸಿಯಾಗಿರುವ ಕನ್ನಡದ ನಟಿ ಪವಿತ್ರಾ ಲೋಕೇಶ್ ಇದೀಗ ಹೈದರಾಬಾದ್‌ನಲ್ಲಿ ನೆಲೆಸಿದ್ದಾರೆ.