Sandalwood Celebritys Voting: ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡಿದ ಸ್ಯಾಂಡಲ್‌ವುಡ್‌ ಸೆಲೆಬ್ರಿಟಿಸ್!

First Published Apr 26, 2024, 11:41 AM IST

ರಾಜ್ಯದಲ್ಲಿ ಲೋಕಸಭಾ ಚುನಾವಣೆ 2024ರ ಮೊದಲನೇ ಹಂತದ ಮತದಾನ ಇಂದು ನಡೆಯುತ್ತಿದ್ದು, ಸ್ಯಾಂಡಲ್‌ವುಡ್‌ನ ಸೆಲೆಬ್ರಿಟಿಸ್ ಮತ ಚಲಾಯಿಸಿದರು. ಯಾರ್ಯಾರು ಸ್ಟಾರ್ಸ್ ಮತ ಚಲಾಯಿಸಿದ್ರು ನೋಡಿ.

ಸ್ಯಾಂಡಲ್​ವುಡ್ ಸ್ಟಾರ್ ಸೆಲೆಬ್ರಿಟಿಗಳು ಮತ ಚಲಾಯಿಸಿದ್ದಾರೆ. ಡಾ.ರಾಜ್ ಕುಟುಂಬದ ಅನೇಕ ಸದಸ್ಯರು ಒಟ್ಟಾಗಿಯೇ ಬಂದು ಮತ ಚಲಾಯಿಸಿದರು. ಅಣ್ಣಾವ್ರ ಪುತ್ರ ರಾಘವೇಂದ್ರ ರಾಜ್ ಕುಮಾರ್, ಅವರ ಪತ್ನಿ ಮಂಗಳ ರಾಘವೇಂದ್ರ ರಾಜ್ ಕುಮಾರ್ ಮತ್ತು ಮಕ್ಕಳಾದ ವಿನಯ್ ರಾಜ್ ಕುಮಾರ್, ಯುವ ರಾಜ್ ಕುಮಾರ್ ಒಟ್ಟಾಗಿ ಬಂದು ಮತದಾನ ಮಾಡಿದ್ದಾರೆ.

ಆರ್.ಆರ್ ನಗರದ ಬೂತ್ ಗೆ ಬಂದ ನಟ ಗಣೇಶ್ ಮತ್ತು ನಿರ್ಮಾಪಕಿ ಶಿಲ್ಪಾ ಗಣೇಶ್ ಮತದಾನ ಮಾಡಿ, ಮಾದರಿಯಾದರು. ದಂಪತಿ ಸಮೇತ ಬೆಳಗ್ಗೆ 7.20ಕ್ಕೆ ಆಗಮಿಸಿದ್ದ ಗಣೇಶ್ ಮತದಾನ ಮಾಡಿದರು. ಮತದಾನ ಮಾಡಿ ಮಾತನಾಡಿದ ಗಣೇಶ್, ತಪ್ಪದೇ ಎಲ್ಲರೂ ಮತದಾನದಲ್ಲಿ ಭಾಗಿಯಾಗಿ ಎಂದರು.

ಆರ್.ಆರ್ ನಗರ ಮತ ಕೇಂದ್ರಕ್ಕೆ ಪತಿ ಸಮೇತ ಆಗಮಿಸಿದ್ದ ನಟಿ ಅಮೂಲ್ಯ, ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಸರದಿ ಸಾಲಿನಲ್ಲಿ ಅರ್ಧ ಗಂಟೆಗೂ ಹೆಚ್ಚು ನಿಂತಿದ್ದ ಅಮೂಲ್ಯ, ಆ ನಂತರ ಸಾಲಿನಲ್ಲಿ ನಿಂತಿದ್ದವರಿಗೆ ಮನವಿ ಮಾಡಿಕೊಂಡು ಬೇಗ ವೋಟು ಹಾಕಿದ್ದಾರೆ. ತುಂಬಾ ಕ್ಯೂ ಇದೆ. ಇಷ್ಟು ಜನ ನೋಡಿ ಖುಷಿಯಾಯ್ತು. ಮಕ್ಕಳಿರೋದ್ರಿಂದ ರಿಕ್ವೆಸ್ಟ್ ಮಾಡಿದೆ, ಬೇಗ ಬಿಟ್ರು. ಆದ್ರೂ ಅರ್ಧ ಗಂಟೆ ಇದ್ದೆ. ಇದು ನಮ್ಮ ಹಕ್ಕು. ನಾವು ವೋಟ್ ಮಾಡಲೇಬೇಕು. ಸಮಯ ವ್ಯರ್ಥ ಮಾಡದೆ, ವೋಟ್ ಮಾಡಬೇಕು. ಈ ಬಾರಿ ಹೆಚ್ಚು ಮತದಾನ ಆಗುತ್ತೆ ಅಂದ್ಕೊಂಡಿದ್ದೇನೆ ಎಂದರು.

ಸ್ಯಾಂಡಲ್‌ವುಡ್‌ನ ನಟ ರಾಕ್ಷಸ ಡಾಲಿ ಧನಂಜಯ ಅವರು ನನ್ನೂರಲ್ಲಿ ನಾನು vote ಮಾಡಿದೆ. ನೀವು ತಪ್ಪದೆ vote ಮಾಡಿ ಎಂದು ತಿಳಿಸಿದ್ದಾರೆ.

ಸ್ಯಾಂಡಲ್​ವುಡ್ ನಟ ವಿನಯ್ ರಾಜ್​ಕುಮಾರ್ ಅವರೂ ಮತ ಚಲಾಯಿಸಿದರು. ವೋಟ್ ಮಾಡಿದ ನಂತರ ಅವರು ಮಾಧ್ಯಮದ ಜೊತೆಗೂ ಮಾತನಾಡಿದರು. ತಂದೆ ಹಾಗೂ ಸಹೋದರನ ಜೊತೆ ಅವರು ವೋಟ್ ಮಾಡೋಕೆ ಬಂದಿದ್ದರು.

ಅಶ್ವಿನಿ ಪುನೀತ್ ರಾಜ್​​ಕುಮಾರ್ ಅವರೂ ಮತಗಟ್ಟೆಗೆ ಬಂದು ವೋಟ್ ಮಾಡಿ ಹೋಗಿದ್ದಾರೆ. ಅಣ್ಣಾವ್ರ ಫ್ಯಾಮಿಲಿಯ ಸದಸ್ಯರು ಬೆಳ್ಳಂಬೆಳಗ್ಗೆಯೇ ವೋಟ್ ಮಾಡೋಕೆ ಬಂದಿದ್ದರು.

ಸ್ಯಾಂಡಲ್‌ವುಡ್‌ನ ನಟಿ ತಾರಾ ಅನುರಾಧ ಅವರು ತಮ್ಮ ಗಂಡನ ಜೊತೆ ಮತಗಟ್ಟೆಗೆ ಬಂದು ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಜೊತೆಗೆ ಕ್ಯಾಮೆರಾಗೆ ನಾವು ವೋಟು ಮಾಡಿದ್ದೇವೆ ಎಂದು ಪೋಸ್ ಕೊಟ್ಟಿದ್ದಾರೆ.

ಸ್ಯಾಂಡಲ್‌ವುಡ್ ನಟಿ ಶ್ವೇತಾ ಶ್ರೀವಾತ್ಸವ ಮತ ಚಲಾಯಿಸಿದರು. ನಮ್ಮ ಮತ ಬಳಸಿ ನಮ್ಮ ಹಕ್ಕು ಬಹಿರಾಗಿ ಸ್ವೀಕರಿಸೋಣ! ಮತದಾನ ನೆರವೇರಿಸಿ ನಮ್ಮ ಭವಿಷ್ಯ ನಿರ್ಧರಿಸೋಣ ಎಂದು ಸಾಮಾಜಿಕ ಜಾಲತಾಣದಲ್ಲಿ  ಬರೆದುಕೊಂಡಿದ್ದಾರೆ.

ಚಾಮರಾಜನಗರ ತಾಲೂಕಿನ ಮೂಡಲಪುರ ಗ್ರಾಮದಲ್ಲಿ ನಟ ವಿಕ್ಕಿ ವರುಣ್ ಮತದಾನ ಮಾಡಿದ್ದಾರೆ‌. ಮಧ್ಯರಾತ್ರಿ ಬೆಂಗಳೂರಿನಿಂದ ಬಂದು ಬೆಳಗ್ಗೆಯೇ ಕೆಂಡಸಂಪಿಗೆ ಹೀರೋ ಮತದಾನ ಮಾಡಿ ಮತದಾನದ ಮಹತ್ವ ಸಾರಿದ್ದಾರೆ. 

ಸ್ಯಾಂಡಲ್‌ವುಡ್‌ನ ಟೋಬಿ ನಟಿ ಚೈತ್ರಾ ಆಚಾರ್ ಅವರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ನಾನು ನನ್ನ ಮತವನ್ನು ಚಲಾಯಿಸಿದ್ಧೇನೆ, ನೀವು ಮಾಡಿದ್ರಾ ಎಂದು ಕೇಳಿದ್ದಾರೆ.

ಕನ್ನಡ ಚಿತ್ರರಂಗದ ರ್ಯಾಪರ್ ಚಂದನ್ ಶೆಟ್ಟಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ನಂತರ ಮಾತನಾಡಿದ ಅವರು ಈಗಲೇ ಹೋಗಿ ವೋಟು ಮಾಡಿ, ನಮ್ಮ ಗ್ರಾಮ, ನಮ್ಮ ಊರು, ನಮ್ಮ ಜಿಲ್ಲೆ, ನಮ್ಮ ರಾಜ್ಯ, ನಮ್ಮ ದೇಶ ಬೆಳವಣಿಗೆಯಾಗಬೇಕೆಂದರೆ ವೋಟು ಮಾಡಿ ಎಂದು ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದಾರೆ.

ಕನ್ನಡ ಚಿತ್ರರಂಗದ ಮಾಸ್ಟರ್ ಮಂಜುನಾಥ್ ಅವರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಜೊತೆಗೆ ಶುಭೋದಯ - ನಾನು ಮತ ಹಾಕಿದ್ದೇನೆ - ನೀವು ಮತ ​​ಹಾಕಿದ್ದೀರಾ? - ದಯವಿಟ್ಟು ಇಂದು ಮತ ಚಲಾಯಿಸಿ - ನಿಮ್ಮ ಸಾಂವಿಧಾನಿಕ ಹಕ್ಕನ್ನು ಬಳಸಿ - ಮತ ಚಲಾಯಿಸಿ, ಮತ ಚಲಾಯಿಸಿ, ಮತ ಚಲಾಯಿಸಿ ಎಂದು ಹೇಳಿದ್ದಾರೆ.

ಶ್ರೀಮುರಳಿ ಸಹ, ‘ಮತದಾನ ನಮ್ಮ ಹಕ್ಕು ಮತ ಚಲಾಯಿಸಿದ್ದೇವೆ. ನಮ್ಮ ಬೂತ್ ಅಲ್ಲಿ ತುಂಬಾ ಜನ ಇದ್ರು, ನೋಡಿ ತುಂಬಾ ಖುಷಿ ಆಯ್ತು. ಹಿರಿಯ ನಾಗರೀಕರು ಬರ್ತಾ ಇದ್ದಾರೆ. ಪ್ರಜಾಪ್ರಭುತ್ವ ನಾವು ಆಯ್ಕೆ ಮಾಡಿಕೊಳ್ಳೋದು. ಯೂತ್ ಇನ್ನೂ ಬರ್ತಿಲ್ಲ ಅಂತಾ ಅಂದರೆ ಏನು ಹೇಳಬೇಕು. ಇಂತಹ ಜವಾಬ್ದಾರಿ ಮೆರೆಯಬಾರದು.  ಇಲ್ಲೇನೂ ಎಕ್ಸಾಂ ಬರೆಸಲ್ಲ ಬಂದು ಮತದಾನ ಮಾಡಿ. ನಿಮಗೆ ಬೇಕಾದ ನಾಯಕನನ್ನ ಆಯ್ಕೆ ಮಾಡಿಕೊಳ್ಳಿ. ಯಾರು ಯಾರು ಓಟ್ ಮಾಡಿಲ್ಲ ಅವರಿಗೆ ಏನು ಹೇಳಬೇಕು ಮಾಧ್ಯಮ ಮುಂದೆ ಮಾತಾಡಬಾರದು’ ಎಂದಿದ್ದಾರೆ.

ರಂಗೋಲಿ ಸಿನಿಮಾದ ಖ್ಯಾತ ನಟಿ ಹೇಮಾ ಪ್ರಭಾತ್ ಅವರು ಇಂದು ವೋಟು ಹಾಕಿದ್ದಾರೆ. ನನ್ನ ಹಕ್ಕನ್ನು ನಾನು ಚಲಾಯಿಸಿದ್ದೇನೆ ನೀವು ? ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಕಾಂತಾರ ಚಿತ್ರ ಖ್ಯಾತಿಯ ನಟಿ ಸಪ್ತಮಿ ಗೌಡ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಬೆಂಗಳೂರಿನ ಜೆ.ಪಿ ನಗರದಲ್ಲಿರುವ ಸೇಂಟ್ ಪೌಲ್ ಸ್ಕೂಲ್ ಗೆ ಆಗಮಿಸಿದ್ದ ಸಪ್ತಮಿ ಗೌಡ ಮತದಾನ ಮಾಡಿದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನ್ನ ಹಕ್ಕು ಚಲಾಯಿಸಿದ್ದೇನೆ. ಎಲ್ಲರೂ ತಪ್ಪದೇ ಮತದಾನ ಮಾಡಿ. ಮತದಾನ ಎಲ್ಲರ ಕರ್ತವ್ಯ ಎಂದರು.

ಸ್ಯಾಂಡಲ್‌ವುಡ್‌ನ ನಟಿಯರಾದ ಕಾವ್ಯ ಶೆಟ್ಟಿ ಹಾಗೂ ನಿಧಿ ಸುಬ್ಬಯ್ಯ ತಮ್ಮ ಕುಟುಂಬಸ್ಥರ ಜೊತೆ ಮತದಾನದ ಕೇಂದ್ರಕ್ಕೆ ತೆರಳಿ ಅವರ ಹಕ್ಕನ್ನು ಚಲಾಯಿಸಿದ್ದಾರೆ. ಹಾಗೂ ಎಲ್ಲರೂ ವೋಟು ಮಾಡಿ ಎಂದು ಕೇಳಿಕೊಂಡಿದ್ದಾರೆ.

click me!