ಕೃಷಿ ಇಲಾಖೆಗೆ 'ಡಿ'ಬಾಸ್.. ರೈತರ ಬೆನ್ನೆಲುಬಾಗಿ ನಿಲ್ಲಲಿರುವ ದರ್ಶನ್..!

First Published | Jan 24, 2021, 7:28 PM IST

ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಇಂದು (ಭಾನುವಾರ) ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೈಸೂರಿನ ಫಾರ್ಮ್ ಹೌಸ್ ಗೆ ಭೇಟಿ ನೀಡಿದರು. ಈ ವೇಳೆ ಡಿಬಾಸ್ ರೈತರಿಗಾಗಿ ಯಾವುದೇ ಸಂಭಾವನೆ ಪಡೆಯದೇ ಮಹತ್ವದ ಕಾರ್ಯಕ್ಕೆ ಸಹಿ ಹಾಕಿದ್ದಾರೆ.

ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಇಂದು (ಭಾನುವಾರ) ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೈಸೂರಿನ ಫಾರ್ಮ್ ಹೌಸ್ ಗೆ ಭೇಟಿ ನೀಡಿದರು.
ಈ ವೇಳೆಚಾಲೆಂಜಿಂಗ್ ಸ್ಟಾರ್ ದರ್ಶನ್ ಸಚಿವ ಬಿ.ಸಿ.ಪಾಟೀಲ್ ಅವರಿಗೆ ಸನ್ಮಾನ ಮಾಡಿ ಗೌರವಿಸಿದರು.
Tap to resize

ಕೃಷಿ ಇಲಾಖೆಯ ರಾಯಭಾರಿಯಾಗುವುದಕ್ಕೆ ನಟ ದರ್ಶನ್ ಒಪ್ಪಿಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಮೈಸೂರಿನ ಫಾರ್ಮ್‌ ಹೌಸ್‌ಗೆ ಭೇಟಿ ನೀಡಿ ದರ್ಶನ್‌ಗೆ ಧನ್ಯವಾದ ತಿಳಿಸಿದರು.
ದರ್ಶನ್‌ ಯಾವುದೇ ಸಂಭಾವನೆ ಪಡೆಯದೇ ರಾಯಭಾರಿಯಾಗಲು ದರ್ಶನ್ ಒಪ್ಪಿಕೊಂಡಿದ್ದಾರೆ
ಇದೀಗ ಡಿಬಾಸ್ ಕೃಷಿ ಇಲಾಖೆಯ ರಾಯಭಾರಿಯಾಗಿರುವುದರಿಂದ ರೈತರ ಬಲ ಹೆಚ್ಚಿಸಿದೆ.
ಈ ಹಿಂದೆ ಚಾಲೆಂಜಿಂಗ್ ಸ್ಟಾರ್ ರಾಜ್ಯ ಅರಣ್ಯ ಇಲಾಖೆಯ ರಾಯಭಾರಿಯಾಗಿದ್ದರು. ಇದೀಗ ರೈತರ ಬೆನ್ನೆಲುಬಾಗಿ ನಿಲ್ಲಲಿದ್ದಾರೆ
ಸ್ಯಾಂಡಲ್‌ವುಡ್‌ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸಿನಿಮಾದ ಜೊತೆಗೆ ಜೊತೆಗೆ ಕೃಷಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ವಿಷಯ ನಮೆಗೆಲ್ಲ ತಿಳಿದಿದೆ. ಮೈಸೂರಿನಲ್ಲಿರುವ ತಮ್ಮ ಫಾರ್ಮ್‌ ಹೌಸ್‌ನಲ್ಲಿ ದರ್ಶನ್ ಅವರು ಹೈನುಗಾರಿಕೆ ಸೇರಿದಂತೆ ನಾನಾ ರೀತಿಯ ಬೆಳೆಯನ್ನು ಬೆಳೆದು ಅದರಲ್ಲೇ ತಮ್ಮ ಸಂತೋಷವನ್ನು ಕಾಣುತ್ತಿದ್ದಾರೆ ಕೂಡ.

Latest Videos

click me!