Rukmini vasanth deepfake: ರುಕ್ಮಿಣಿ ವಸಂತ್ ಡೀಪ್‌ಫೇಕ್ ವಿಡಿಯೋ ಸೃಷ್ಟಿಸಿದ ಮೂವರು ಕಿಡಿಗೇಡಿಗಳ ಬಂಧನ!

Published : Jun 19, 2026, 09:00 PM IST

ನಟಿ ರುಕ್ಮಿಣಿ ವಸಂತ್ ಅವರ ಎಐ ಡೀಪ್‌ಫೇಕ್ ಅಶ್ಲೀಲ ವಿಡಿಯೋ ವೈರಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಆರೋಪಿಗಳನ್ನು ಪತ್ತೆಹಚ್ಚಿ, ಕೃತ್ಯಕ್ಕೆ ಬಳಸಿದ್ದ ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

PREV
15

ಕನ್ನಡ ಚಿತ್ರರಂಗದ ಪ್ರತಿಭಾವಂತ ನಟಿ ರುಕ್ಮಿಣಿ ವಸಂತ್ ಅವರ ಹೆಸರಿನಲ್ಲಿ ಎಐ (AI) ತಂತ್ರಜ್ಞಾನ ಬಳಸಿ ಅಶ್ಲೀಲ ವಿಡಿಯೋ ಹಾಗೂ ಫೋಟೋಗಳನ್ನು ತಯಾರಿಸಿ ವೈರಲ್ ಮಾಡಿದ್ದ ಪ್ರಕರಣವನ್ನು ಭೇದಿಸುವಲ್ಲಿ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಕುಕೃತ್ಯಕ್ಕೆ ಸಂಬಂಧಿಸಿದಂತೆ ಪೊಲೀಸರು ರಾಜ್ಯದ ವಿವಿಧ ಜಿಲ್ಲೆಗಳ ಮೂವರು ಯುವಕರನ್ನು ಬಂಧಿಸಿ, ಅವರಿಂದ ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

25

ಬಂಧಿತ ಆರೋಪಿಗಳ ವಿವರ:

ಬಂಧಿತರನ್ನು ರವಿಕುಮಾರ್ (24), ಚಂದ್ರಕಾಂತ್ (33) ಮತ್ತು ರಂಜಿತ್ (25) ಎಂದು ಗುರುತಿಸಲಾಗಿದೆ. ರವಿಕುಮಾರ್ ಬಾಗಲಕೋಟೆ ಜಿಲ್ಲೆಯ ನಿವಾಸಿಯಾಗಿದ್ದರೆ, ರಂಜಿತ್ ಬೆಂಗಳೂರು ನಗರದವನು. ಇನ್ನು ಮೂರನೇ ಆರೋಪಿ ಚಂದ್ರಕಾಂತ್ ಮೂಲತಃ ಶಿವಮೊಗ್ಗದ ತೀರ್ಥಹಳ್ಳಿಯವನಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇವರಿಂದ ಕೃತ್ಯಕ್ಕೆ ಬಳಸಲಾಗಿದ್ದ ಮೂರು ದುಬಾರಿ ಸ್ಮಾರ್ಟ್‌ಫೋನ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

35

ಘಟನೆಯ ಹಿನ್ನೆಲೆ ಮತ್ತು ದೂರು:

ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಾದ ಇನ್‌ಸ್ಟಾಗ್ರಾಮ್, ಎಕ್ಸ್ (ಟ್ವಿಟ್ಟರ್) ಮತ್ತು ಫೇಸ್‌ಬುಕ್‌ನಲ್ಲಿ ನಟಿ ರುಕ್ಮಿಣಿ ವಸಂತ್ ಅವರ ಮುಖವನ್ನು ಹೋಲುವ ಅಶ್ಲೀಲ ವಿಡಿಯೋವೊಂದು ಹರಿದಾಡುತ್ತಿತ್ತು. ಇದು ಎಐ ಡೀಪ್‌ಫೇಕ್ (DeepFake) ತಂತ್ರಜ್ಞಾನ ಬಳಸಿ ಸೃಷ್ಟಿಸಿದ ವಿಡಿಯೋ ಆಗಿತ್ತು. ಇದರಿಂದ ತೀವ್ರ ಬೇಸರಗೊಂಡಿದ್ದ ರುಕ್ಮಿಣಿ ವಸಂತ್, ‘ನಾನು ಇಂತಹ ಯಾವುದೇ ದೃಶ್ಯಗಳಲ್ಲಿ ನಟಿಸಿಲ್ಲ, ಇದು ಕಿಡಿಗೇಡಿಗಳ ಕೃತ್ಯ’ ಎಂದು ಸ್ಪಷ್ಟನೆ ನೀಡಿ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದರು

45

ಪೊಲೀಸರ ತನಿಖೆ ಮತ್ತು ಪತ್ತೆ:

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಿಸಿಬಿ ಸೈಬರ್ ಕ್ರೈಂ ಪೊಲೀಸರು ವಿಡಿಯೋ ಅಪ್‌ಲೋಡ್ ಆದ ಖಾತೆಗಳ ಐಪಿ ಅಡ್ರೆಸ್ ಆಧರಿಸಿ ತನಿಖೆ ಕೈಗೊಂಡಿದ್ದರು. ಆರಂಭದಲ್ಲಿ ಈ ವಿಡಿಯೋಗಳನ್ನು ಹೊರ ರಾಜ್ಯದವರು ಹಂಚಿಕೊಂಡಿದ್ದಾರೆ ಎಂದು ಶಂಕಿಸಲಾಗಿತ್ತು. ಆದರೆ ತಾಂತ್ರಿಕ ತನಿಖೆ ನಡೆಸಿದಾಗ ನಮ್ಮ ರಾಜ್ಯದ ಕಿಡಿಗೇಡಿಗಳೇ ಈ ಕೃತ್ಯ ಎಸಗಿರುವುದು ಸಾಬೀತಾಗಿದೆ. ಪ್ರಕರಣ ದಾಖಲಾದ ಕೂಡಲೇ ಆರೋಪಿಗಳು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳನ್ನು ಡಿಲೀಟ್ ಮಾಡಿ ತಲೆಮರೆಸಿಕೊಳ್ಳಲು ಯತ್ನಿಸಿದ್ದರು. ಆದರೆ ಸೈಬರ್ ಪೊಲೀಸರು ಚಾಣಾಕ್ಷತನದಿಂದ ಇವರನ್ನು ಪತ್ತೆಹಚ್ಚಿ ಸಂಕೋಲೆ ತೊಡಿಸಿದ್ದಾರೆ.

55

ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೋಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಇವರ ಹಿಂದೆ ಬೇರೆ ಯಾರಾದರೂ ಇದ್ದಾರೆಯೇ ಅಥವಾ ಇವರು ಇತರ ನಟಿಯರ ವಿಡಿಯೋಗಳನ್ನು ಕೂಡ ಇದೇ ರೀತಿ ಮಾಡಿದ್ದಾರೆಯೇ ಎಂಬ ಬಗ್ಗೆ ತನಿಖೆ ತೀವ್ರಗೊಂಡಿದೆ. ಎಐ ತಂತ್ರಜ್ಞಾನದ ದುರ್ಬಳಕೆ ಮಾಡಿಕೊಂಡು ಮಹಿಳೆಯರ ಗೌರವಕ್ಕೆ ಧಕ್ಕೆ ತರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೋಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories