ಇಂದು ಚಿಕ್ಕಬಳ್ಳಾಪುರದಲ್ಲಿ ಆರ್‌ಆರ್‌ಆರ್‌ ಪ್ರೀ ರಿಲೀಸ್‌ ಈವೆಂಟ್‌!

First Published | Mar 19, 2022, 8:57 AM IST

5 ಭಾಷೆಯಲ್ಲಿ ರಿಲೀಸ್ ಆಗುತ್ತಿರುವ 'ಆರ್‌ಆರ್‌ಆರ್'  ಸಿನಿಮಾದ ಪ್ರೀ-ರಿಲೀಸ್ ಇವೆಂಟ್‌ ಚಿಕ್ಕಬಳ್ಳಾಪುರದಲ್ಲಿ ಅದ್ದೂರಿಯಾಗಿ ನಡೆಯಲಿದೆ. 

ರಾಜಮೌಳಿ ನಿರ್ದೇಶನದ ಬಹುಭಾಷೆಯಲ್ಲಿ ತೆರೆಗೆ ಬರಲು ಸಜ್ಜಾಗಿರುವ ಆರ್‌ಆರ್‌ಆರ್‌ ಚಿತ್ರದ ಪ್ರೀ ರಿಲೀಸ್‌ ಈವೆಂಟ್‌ ಇಂದು (ಮಾ.19) ಸಂಜೆ 6 ಗಂಟೆಗೆ ಚಿಕ್ಕಬಳ್ಳಾಪುರದಲ್ಲಿ ಅದ್ದೂರಿಯಾಗಿ ನಡೆಯಲಿದೆ. 

ಚಿತ್ರದ ನಾಯಕರಾದ ಜ್ಯೂಎನ್‌ಟಿಆರ್‌ (Junior NTR), ರಾಮ್‌ಚರಣ್‌ (Ram Chanran) ತೇಜ, ರಾಜಮೌಳಿ (Rajamouli) ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.

Tap to resize

ನೂರು ಎಕರೆ ಬೃಹತ್‌ ಮೈದಾನದಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಡಾ ಕೆ ಸುಧಾಕರ್‌, ನಟ ಶಿವರಾಜ್‌ಕುಮಾರ್‌ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಈ ಈವೆಂಟ್‌ಗೆ 1 ಲಕ್ಷಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ. ಅಗಲಗುರ್ಗಿ ಗೇಟ್‌ ಬಳಿ ಕಾರ್ಯಕ್ರಮ ನಡೆಯಲಿದೆ. 

ಮಾಚ್‌ರ್‍ 25ರಂದು ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ಬಿಡುಗಡೆ ಆಗುತ್ತಿದೆ. ಅಜಯ್‌ ದೇವಗನ್‌, ಅಲಿಯಾ ಭಟ್‌ ಚಿತ್ರದಲ್ಲಿ ನಟಿಸಿದ್ದಾರೆ.

ಸಾಮಾನ್ಯವಾಗಿ ರಾಜಮೌಳಿ ಸಿನಿಮಾಗಳ ಪ್ರೀ ರಿಲೀಸ್ ಇವೆಂಟ್‌ಗಳು ಹೈದ್ರಾಬಾದ್‌ನಲ್ಲೇ ಹೆಚ್ಚಾಗಿ ನಡೆದಿವೆ. ಆದರೆ ಈ ಬಾರಿ ತಮಿಳುನಾಡು, ಕರ್ನಾಟಕ, ಆಂಧ್ರ ಗಡಿಭಾಗದ ಚಿಕ್ಕಬಳ್ಳಾಪುರದಲ್ಲಿ ಪ್ರೀ ರಿಲೀಸ್ ಇವೆಂಟ್ ಮಾಡಲು ನಿರ್ಧರಿಸಿದ್ದಾರೆ.

ಇದಕ್ಕೆ ಕಾರಣವೂ ಇದೆ. 'ಆರ್‌ಆರ್‌ಆರ್' ಸಿನಿಮಾ ಬಹು ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಹೀಗಾಗಿ ಮೂರು ರಾಜ್ಯಗಳು ಸೇರಿದಂತೆ ಇಡೀ ದೇಶದ ಗಮನ ಸೆಳೆಯುವ ಸಲುವಾಗಿ ಚಿಕ್ಕಬಳ್ಳಾಪುರದಲ್ಲಿ ಅತಿದೊಡ್ಡ ಕಾರ್ಯಕ್ರಮ ಮಾಡಲಾಗುತ್ತಿದೆ

Latest Videos

click me!