'ಕೋಣ'ಕ್ಕಾಗಿ ನಾನ್​ವೆಜ್​ ಬಿಟ್ಟ Tanisha Kuppanda: ಚಾಮುಂಡಿ ಅಮ್ಮನ ಮುಂದೆ ಪ್ರತಿಜ್ಞೆ

Published : Oct 07, 2025, 09:15 PM IST

ಬಿಗ್​ಬಾಸ್​ ಖ್ಯಾತಿಯ ನಟಿ ತನಿಷಾ ಕುಪ್ಪಂಡ ಅವರು  ‘ಕೋಣ’ಕ್ಕಾಗಿ ನಾನ್​ವೆಜ್​ ತ್ಯಜಿಸಿದ್ದಾರೆ. ಇತ್ತೀಚೆಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದಾಗ,  ಮಾಂಸಾಹಾರ ಸೇವಿಸುವುದಿಲ್ಲವೆಂದು ಹರಕೆ ಹೊತ್ತಿರುವುದಾಗಿ ಅವರು ತಿಳಿಸಿದ್ದಾರೆ. ಹಾಗಿದ್ದರೆ ಯಾವ ಕೋಣ ಇದು? ನಟಿ ಹೇಳಿದ್ದೇನು? 

PREV
17
ಬಿಗ್​ಬಾಸ್​ ಖ್ಯಾತಿಯ ತನಿಷಾ ಕುಪ್ಪಂಡ

ಬಿಗ್​ಬಾಸ್​ ಖ್ಯಾತಿಯ ತನಿಷಾ ಕುಪ್ಪಂಡ (Bigg Boss Tanisha Kuppanda) ಈಗ ಕಿರುತೆರೆ, ಹಿರಿತೆರೆ ಎಲ್ಲಾ ಕಡೆಯೂ ಫೇಮಸ್​ ಆಗಿದ್ದಾರೆ. ಅದರಲ್ಲಿಯೂ ಬಿಗ್​ಬಾಸ್​ ಇವರಿಗೆ ಸಾಕಷ್ಟು ಖ್ಯಾತಿ ತಂದುಕೊಟ್ಟಿದೆ. ಪೆಂಟಗನ್ ಚಿತ್ರದ ಮೂಲಕ ಎಂಥ ಪಾತ್ರಕ್ಕೂ ಸೈ ಎನ್ನುವಂಥ ನಟನೆ ಮಾಡಿದ್ದಾರೆ ತನಿಷಾ. ಇಲ್ಲಿ ಹಸಿಬಿಸಿ ದೃಶ್ಯದಲ್ಲಿ ಕಾಣಿಸಿಕೊಂಡು ಅಭಿಮಾನಿಗಳಿಗೆ ಕಚಗುಳಿ ನೀಡಿದ್ದಾರೆ. ‘ಮಂಗಳಗೌರಿ ಮದುವೆ’, ‘ಇಂತಿ ನಿಮ್ಮ ಆಶಾ’ ಮುಂತಾದ ಸೀರಿಯಲ್‌ಗಳಲ್ಲಿ ನಟಿಸುವ ಮೂಲಕ ಮನೆಮಾತಾಗಿರುವ ನಟಿ ಇದೀಗ ಪೆನ್​ಡ್ರೈವ್​ ಸಿನಿಮಾದಲ್ಲಿಯೂ ಸಕತ್​ ನಟನೆ ಮಾಡಿದ್ದಾರೆ. ಇಲ್ಲಿ ಅವರು ಪೊಲೀಸ್​​ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.

27
ನಾನ್​ವೆಜ್​ ಬಿಟ್ಟು ಸದ್ದು

ಇಂತಿಪ್ಪ ತನಿಷಾ ಇದೀಗ ನಾನ್​ವೆಜ್​ ಬಿಟ್ಟು ಸದ್ದು ಮಾಡುತ್ತಿದ್ದಾರೆ. ಈ ಬಗ್ಗೆ ಅವರೇ ಖುದ್ದಾಗಿ ವಿಷಯ ತಿಳಿಸಿದ್ದಾರೆ. ಹಾಗೆಂದು ಅವರು ಪರ್ಮನೆಂಟ್​ ಆಗೇನೂ ನಾನ್​ವೆಜ್​ ಬಿಟ್ಟಿಲ್ಲ. ಆದ್ರೆ ಕೆಲವು ದಿನಗಳ ಮಟ್ಟಿಗೆ ಬಿಟ್ಟಿರುವುದಾಗಿ ಹೇಳಿದ್ದಾರೆ. ಅದಕ್ಕೆ ಕಾರಣವೂ ಇದೆ.

37
ಚಾಮುಂಡಿ ಬೆಟ್ಟದಲ್ಲಿ ಪ್ರತಿಜ್ಞೆ

ನಾನು ಮೊದಲ ಸಲ ಚಾಮುಂಡಿ ಬೆಟ್ಟಕ್ಕೆ ಹೋದೆ. ಅಲ್ಲಿಗೆ ಹೋಗಿ ಬಂದಾಗ ನಾನ್​ವೆಜ್​ ಬಿಡಬೇಕು ಎನ್ನಿಸಿತು. ಆದ್ದರಿಂದ ದೇವಿಯ ಬಳಿ ಹೇಳಿಕೊಂಡಿದ್ದೇನೆ, ಆದ್ದರಿಂದ ನಾನ್​ವೆಜ್​ ತಿನ್ನುವುದಿಲ್ಲ ಎಂದಿದ್ದಾರೆ. ಹಾಗೆಂದು ದೇವಿಯ ಬಳಿ ಅವರು ಬೇಡಿಕೊಂಡದ್ದು ಅವರ ಮುಂಬರುವ ಚಿತ್ರ ರಿಲೀಸ್​ ಆಗುವವರೆಗೂ ನಾನ್​ವೆಜ್​ ತಿನ್ನಲ್ಲ ಎಂದು ಅಷ್ಟೇ.

47
ಕೋಣನಿಗೆ ತಯಾರಿ

ಅಂದಹಾಗೆ ತನಿಷಾ ಅವರ ಕೋಣ ಚಿತ್ರ ಮುಂದಿನ ಚಿತ್ರ ನವೆಂಬರ್​ ತಿಂಗಳಿನಲ್ಲಿ ರಿಲೀಸ್​ ಆಗಲಿದೆ. ಅದರ ಪ್ರಮೋಷನ್​ ಶುರು ಮಾಡಿಕೊಂಡಿದ್ದಾರೆ. ಇದಕ್ಕೂ ಮುನ್ನ ಚಾಮುಂಡೇಶ್ವರಿ ದೇವಿಯಲ್ಲಿ ಪೂಜೆ ಸಲ್ಲಿಸಲು ಹೋಗಿದ್ದಾರೆ. ಆಗ ಅವರಿಗೆ ನಾನ್​ ವೆಜ್​ ಬಿಡಬೇಕು ಎನ್ನಿಸಿದೆಯಂತೆ. ಅದಕ್ಕಾಗಿ ಇದನ್ನು ಬಿಟ್ಟಿರುವುದಾಗಿ ಹೇಳಿದ್ದಾರೆ.

57
ಕೋಣ ಚಿತ್ರದ ಡಿಟೇಲ್ಸ್​

ಅಂದಹಾಗೆ, ಕುಪ್ಪಂಡಾಸ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ತನಿಷಾ ಕುಪ್ಪಂಡ, ಕಾರ್ತಿಕ್ ಕಿರಣ್ ಸಂಕ ಪಾಲ್, ರವಿಕಿರಣ್ .ಎನ್ ಅವರು ‘ಕೋಣ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಶಶಾಂಕ್ ಶೇಷಗಿರಿ ಅವರ ಸಂಗೀತ ನಿರ್ದೇಶನವಿದೆ. ವೀನಸ್ ನಾಗರಾಜ್‌ ಮೂರ್ತಿ ಛಾಯಾಗ್ರಹಣದ ಜವಾಬ್ದಾರಿ ನಿಭಾಯಿಸಿದ್ದಾರೆ. ಉಮೇಶ್ ಆರ್. ಬಿ. ಅವರ ಸಂಕಲನವಿದ್ದು, ಸಾಹಸ ನಿರ್ದೇಶಕರಾಗಿ ವಿನೋದ್‌ಕುಮಾರ್ ಹಾಗೂ ನೃತ್ಯ ನಿರ್ದೇಶನವನ್ನು ಮುರುಗನ್ ಮಾಡಿದ್ದಾರೆ.

67
ಟ್ರೇಲರ್​ ರಿಲೀಸ್​

ಕೋಮಲ್ ಕುಮಾರ್ ಹೊಸ ಅವತಾರದಲ್ಲಿ ಕಾಣಿಸುತ್ತಾರೆ. ಇದಾಗಲೇ ಟೀಸರ್ ಕುತೂಹಲ ಹೆಚ್ಚಿಸಿತ್ತು. ಬಳಿಕ ಮೊನ್ನೆಯಷ್ಟೇ ಕೋಣ ಚಿತ್ರದ ಟ್ರೇಲರ್ ಕೂಡ ರಿಲೀಸ್ ಆಗಲಿದೆ. ಕಾಮಿಡಿ, ಆಕ್ಷನ್, ಸಸ್ಪೆನ್ಸ್ ಅಂಶಗಳನ್ನು ಬ್ಲೆಂಡ್ ಮಾಡಿ ಟ್ರೇಲರ್ ಕಟ್ ಮಾಡಲಾಗಿದೆ.

77
ತನಿಷಾ ಕುಪ್ಪಂಡ ನಾಯಕಿ

ನಿರ್ಮಾಣದಲ್ಲಿ ಕೈ ಜೋಡಿಸಿರುವ ತನಿಷಾ ಕುಪ್ಪಂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕೀರ್ತಿ ರಾಜ್, ರಿತ್ವಿ ಜಗದೀಶ್, ನಮ್ರತಾ ಗೌಡ, ವಿನಯ್ ಗೌಡ, ರಾಘು ರಾಮನಕೊಪ್ಪ, ವಿಜಯ್ ಚೆಂಡೂರ್, ಎಂ.ಕೆ.ಮಠ್, ರಂಜಿತ್ ಗೌಡ, ತುಕಾಲಿ ಸಂತೋಷ್, ಹುಲಿ ಕಾರ್ತಿಕ್, ನಿರಂಜನ್, ಅನಂತ್, ಶಿಶಿರ್ ಶಾಸ್ತಿç, ಗೋಲ್ಡ್ ಸುರೇಶ್, ಸುಷ್ಮಿತ, ಜಗಪ್ಪ, ಮಂಜು ಪಾವಗಡ, ಕುರಿ ಸುನಿಲ್, ಮೋಹನ್ ಕೃಷ್ಣರಾಜ್ ಹೀಗೆ ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

Read more Photos on
click me!

Recommended Stories