The Devil Movie: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ವಿಚಾರವಾಗಿ ಸದ್ಯ ನಟ ದರ್ಶನ್ ತೂಗುದೀಪ ಜೈಲಿನಲ್ಲಿದ್ದಾರೆ. ಹೀಗಿರುವಾಗ ಇವರ ‘ದಿ ಡೆವಿಲ್ʼ ಸಿನಿಮಾ ರಿಲೀಸ್‌ಗೆ ರೆಡಿಯಿದೆ. ಡಿಸೆಂಬರ್ 11ರಂದು ಈ ಚಿತ್ರ ರಿಲೀಸ್ ಆಗುತ್ತಿದ್ದು, ಜೈಲಿನಿಂದಲೇ ದರ್ಶನ್ ಫ್ಯಾನ್ಸ್‌ಗೆ ಸಂದೇಶ ಕಳಿಸಿದ್ದಾರೆ.
ನಟ ದರ್ಶನ್ ತೂಗುದೀಪ ಅಭಿನಯದ ‘ದಿ ಡೆವಿಲ್’ ಸಿನಿಮಾ ರಿಲೀಸ್‌ಗೆ ರೆಡಿಯಿದೆ. ದರ್ಶನ್ ಅನುಪಸ್ಥಿತಿಯಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಈಗ ಜೈಲಿನಲ್ಲಿದ್ದುಕೊಂಡೇ ದರ್ಶನ್ ಅವರು ಅಭಿಮಾನಿಗಳಿಗೆ ಸಂದೇಶ ಕಳಿಸಿದ್ದಾರೆ.
26
ಯಾರು ಏನು ಹೇಳಿದರೂ ಚಿಂತಿಸಬೇಡಿ
ದರ್ಶನ್ ಅವರು “ನನ್ನ ಹೃದಯದಿಂದ ಈ ಸಂದೇಶ ನಿಮಗೆ, ವಿಜಯಲಕ್ಷ್ಮೀ ನಿಮ್ಮೆಲ್ಲರಿಗೂ ತಲುಪಿಸುತ್ತಾಳೆ. ನಿಮ್ಮೆಲ್ಲರ ಪ್ರೀತಿ, ಕಾಳಜಿ, ಬೆಂಬಲ, ನನ್ನ ಸಿನಿಮಾ ಪ್ರಚಾರ ಬಗ್ಗೆ ಪ್ರತಿ ಬಾರಿಯೂ ವಿಜಯಲಕ್ಷ್ಮೀ ನನಗೆ ತಿಳಿಸುತ್ತಿದ್ದಾರೆ. ದೂರ ಇದ್ರು..ಪ್ರತಿ ಕ್ಷಣವೂ ನಿಮ್ಮ ಉಪಸ್ಥಿತಿಯನ್ನು ನಾನು ಅನುಭವಿಸುತ್ತೇನೆ. ನಾನು ನಿಮಗೆ ಹೇಳಲು ಬಯಸುವುದೇನೆಂದರೆ ದಯವಿಟ್ಟು ಯಾರು ಏನು ಹೇಳಿದರೂ ಚಿಂತಿಸಬೇಡಿ" ಎಂದು ಹೇಳಿದ್ದಾರೆ.
36
ನನ್ನ ದೊಡ್ಡ ಶಕ್ತಿ ನೀವೇ
ಯಾವುದೇ ವದಂತಿ, ನೆಗೆಟಿವಿಟಿ ನಿಮ್ಮ ಹೃದಯವನ್ನು ಅಲುಗಾಡಿಸಲು ಬಿಡಬೇಡಿ. ನೀವು ನನ್ನ ಶಕ್ತಿ, ನೀವು ನನ್ನ ಕುಟುಂಬ, ಇಂದು ಎಂದಿಗಿಂತಲೂ ಹೆಚ್ಚಾಗಿ, ನೀವು ನನ್ನ ಮೇಲೆ ಇಟ್ಟಿರುವ ನಂಬಿಕೆಯಿಂದಾಗಿ ನಾನು ನಿಂತಿದ್ದೇನೆ. ನನ್ನ ಜೀವನದ ಈ ಹಂತದಲ್ಲಿ, ನನ್ನ ದೊಡ್ಡ ಶಕ್ತಿ ನೀವೇ ಎಂದಿದ್ದಾರೆ.
ಈ ಸಮಯದಲ್ಲಿ ನಮ್ಮ ಡೆವಿಲ್ ಸಿನಿಮಾ ಕಡೆಗೆ ಗಮನ ಹರಿಸಬೇಕು ಎಂದು ನಾನು ಬಯಸುತ್ತಿದ್ದೇನೆ. ನನಗೆ ತೋರಿಸಿದ ಅದೇ ಪ್ರೀತಿಯಿಂದ ನೀವು ಡೇವಿಲ್ ಸಿನಿಮಾ ಮೇಲೆ ತೋರಿಸಿ. ನನ್ನ ಅನುಪಸ್ಥಿತಿಯಲ್ಲಿಯೂ ಸಹ, ನೀವು ಪ್ರತಿಯೊಂದು ಪ್ರಶ್ನೆಗೆ, ಅನುಮಾನಕ್ಕೆ, ಧ್ವನಿಗೆ ಉತ್ತರಿಸಬೇಕೆಂದು ನಾನು ಬಯಸುತ್ತೇನೆ. ಪದಗಳಿಂದಲ್ಲ, ಆದರೆ ಈ ಚಿತ್ರದ ಅದ್ಭುತ ಯಶಸ್ಸಿನೊಂದಿಗೆ.
56
ನನ್ನ ಸುತ್ತಲೂ ಗೋಡೆಯಂತೆ ನಿಂತಿದ್ದೀರಾ
ನನ್ನ ಸಿನಿಮಾಗೆ ನೀವು ಮಾಡ್ತಿರೋ ಪ್ರಚಾರ.. ಎಫರ್ಟ್.. ನಿಮ್ಮ ಏಕತೆ... ಬಗ್ಗೆ ಕೇಳಿದಾಗ ನನಗೆ ಹೆಮ್ಮೆ ಮತ್ತು ಭಾವುಕನಗುತ್ತೇನೆ. ನಿಮ್ಮನ್ನೆಲ್ಲ ಮತ್ತೆ ಭೇಟಿಯಾಗುವ ದಿನಕ್ಕಾಗಿ ಕಾಯುತ್ತಿರೋದೇ ಖುಷಿ ಕೊಡ್ತಿದೆ. ನನ್ನ ಸುತ್ತಲೂ ಗೋಡೆಯಂತೆ ನಿಂತಿದ್ದಕ್ಕಾಗಿ ಧನ್ಯವಾದಗಳು. ನೀವು ನನ್ನನ್ನು ಎಷ್ಟು ನಂಬುತ್ತಿರೋ ನಾನು ನನ್ನ ಸೆಲೆಬ್ರಿಟಿಗಳನ್ನ ಅಷ್ಟೇ ನಂಬುತ್ತಿನಿ
66
ಕಾಲವೇ ಸತ್ಯ ಹೇಳುತ್ತದೆ
ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಎಲ್ಲವನ್ನೂ ಉತ್ತರಿಸುತ್ತದೆ. ಅಲ್ಲಿವರೆಗೂ ತಲೆಯನ್ನೆತ್ತಿ, ಹೃದಯ ಬಲವಾಗಿರಲಿ, ಪ್ರೀತಿ ಅಚಲವಾಗಿರಲಿ. ನಿಮ್ಮ ದಾಸ ದರ್ಶನ ಎಂದು ಹೇಳಿರೋದನ್ನು ವಿಜಯಲಕ್ಷ್ಮೀ ಅವರು ಹಂಚಿಕೊಂಡಿದ್ದಾರೆ.