Vasishta simha-Haripriya; ಅರಿಶಿಣ ಶಾಸ್ತ್ರ ಸಂಭ್ರಮದಲ್ಲಿ ಸಿಂಹಪ್ರಿಯಾ, ಇಲ್ಲಿವೆ ಸುಂದರ ಫೋಟೋಗಳು

Published : Jan 26, 2023, 10:11 AM IST

ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ಹಳದಿ ಶಾಸ್ತ್ರದ ಫೋಟೋಗಳು ವೈರಲ್ ಆಗಿವೆ. 

PREV
16
Vasishta simha-Haripriya; ಅರಿಶಿಣ ಶಾಸ್ತ್ರ ಸಂಭ್ರಮದಲ್ಲಿ ಸಿಂಹಪ್ರಿಯಾ, ಇಲ್ಲಿವೆ ಸುಂದರ ಫೋಟೋಗಳು

ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ಮತ್ತು ವಸಿಷ್ಠಿ ಸಿಂಹ ಜೋಡಿಯ ಮದುವೆ ಸಂಭ್ರಮ ಜೋರಾಗಿದೆ. ಇಂದು ಗಣರಾಜ್ಯ ದಿನದಂದೆ ದಾಂಪತ್ಯಕ್ಕೆ ಕಾಲಿಡುತ್ತಿದ್ದಾರೆ. ಮೈಸೂರಿನ ಸಚ್ಚಿದಾನಂದ ಆಶ್ರಮದಲ್ಲಿ ಇಬ್ಬರ ಮದುವೆ ಸಮಾರಂಭ ನಡೆಯುತ್ತಿದೆ.

26

ಈಗಾಗಲೇ ಹರಿಪ್ರಿಯಾ ಮತ್ತು ವಸಿಷ್ಠ ಜೋಡಿ ಮದುವೆ ಆಮಂತ್ರಣ ನೀಡಿದ್ದಾರೆ. ಸ್ಯಾಂಡಲ್ ವುಡ್‌ನ ಅನೇಕ ಗಣ್ಯರಿಗೆ ಮದುವೆ ಮಮತೆಯ ಕರೆಯೋಲೆ ಮಾಡುತ್ತಿದ್ದಾರೆ. ಸಿನಿಮಾ ಮಂದಿಯ ಜೊತೆಗೆ ರಾಜಕೀಯ ಗಣ್ಯರನ್ನು ಮದುವೆಗೆ ಪ್ರೀತಿಯ ಆಹ್ವಾನ ನೀಡಿದ್ದಾರೆ. 

36

ಅಂದಹಾಗೆ ಈಗಾಗಲೇ ಮದುವೆ ಶಾಸ್ತ್ರಗಳು ನಡೆದಿದ್ದು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅರಿಶಿಣ ಶಾಸ್ತ್ರದ ಸುಂದರ ಫೋಟೋಗಳನ್ನು ನಟ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಹಂಚಿಕೊಂಡಿದ್ದಾರೆ. ಬಿಳಿ ಬಣ್ಣದ ಡ್ರೆಸ್‌ನಲ್ಲಿ ಇಬ್ಬರೂ ಕಂಗೊಳಿಸಿದ್ದರು. 

46

'ಅರಿಶಿಣ ಶಾಸ್ತ್ರದ ಅಪೂರ್ವ ಕ್ಷಣಗಳು' ಕ್ಯಾಪ್ಷನ್ ನೀಡಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಸಿಂಹಪ್ರಿಯಾ ಜೋಡಿಗೆ ಶುಭಕೋರುತ್ತಿದ್ದಾರೆ. ಇಂದು ನಡೆಯುತ್ತಿರುವ ಮದುವೆಯಲ್ಲಿ ಯಾರೆಲ್ಲ ಗಣ್ಯರು ಭಾಗಿಯಾಗಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿದೆ. 

56

2016ರಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಮೊದಲು ಭೇಟಿಯಾಗಿದ್ದು. ಸ್ನೇಹಿತರಾಗಿದ್ದ ಇಬ್ಬರೂ ಬಳಿಕ ಪ್ರೇಮಿಗಳಾದರು. ವಸಿಷ್ಠ ಅವರೇ ಮೊದಲು ಪ್ರಪೋಸ್ ಮಾಡಿದ್ದು ಎಂದು ಹೇಳಿಕೊಂಡಿದ್ದರು. 

66

ಈಗಾಗಲೇ ಮದುವೆ ಸಮಾರಂಭ ಪ್ರಾರಂಭವಾಗಿದೆ. ಹರಿಪ್ರಿಯಾ ಮತ್ತು ವಸಿಷ್ಠ ಇಬ್ಬರ ಫೋಟೋಗಳು ಇನ್ನೂ ರಿವೀಲ್ ಆಗಿಲ್ಲ. ಇಬ್ಬರೂ ಹೇಗೆ ಕಾಣಿಸುತ್ತಾರೆ, ಯಾರೆಲ್ಲ ಭಾಗಿಯಾಗುತ್ತಾರೆ ಎನ್ನುವ ಕುತೂಹಲಕ್ಕೆ ಸದ್ಯದಲ್ಲೇ ತೆರೆಬೀಳಲಿದೆ. 

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories