ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ 'ವಿಕ್ರಾಂತ್ ರೋಣ' ನಟಿ ನೀತಾ ಅಶೋಕ್; ನಿಶ್ಚಿತಾರ್ಥ ಫೋಟೋ ವೈರಲ್

First Published Dec 19, 2022, 1:46 PM IST

ಕನ್ನಡ ಕಿರುತೆರೆ ಲೋಕದ ಖ್ಯಾತ ನಟಿ, ವಿಕ್ರಾಂತ್ ರೋಣ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿದ ನಟಿ ನೀತಾ ಅಶೋಕ್ ದಾಂಪತ್ಯಕ್ಕೆ ಕಾಲಿಡುತ್ತಿದ್ದಾರೆ

ಕನ್ನಡ ಕಿರುತೆರೆ ಲೋಕದ ಖ್ಯಾತ ನಟಿ, ವಿಕ್ರಾಂತ್ ರೋಣ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿದ ನಟಿ ನೀತಾ ಅಶೋಕ್ ದಾಂಪತ್ಯಕ್ಕೆ ಕಾಲಿಡುತ್ತಿದ್ದಾರೆ. ನೀತಾ ಬಹುಕಾಲದ ಗೆಳೆಯನ ಜೊತೆ ವೈವಾಹಿಕ ಜೀವನಕ್ಕೆ ಕಾಲಿಡಲು ತಯಾರಾಗಿದ್ದಾರೆ. 
 

ನೀತಾ ಅಶೋಕ್ ಈಗಾಗಲೇ ನಿಶ್ಚಿತಾರ್ಥ ಮಾಡಿಕೊಂಡಿದ್ದು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಗೆಳೆಯ ಸತೀಶ್ ಅವರ ಕೈ ಹಿಡಿಯುತ್ತಿರುವ ನಟಿ ನೀತಾ ಅಶೋಕ್ ನಿಶ್ಚಿತಾರ್ಥದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಕ್ಲಾಸ್ ಮೇಟ್ ಈಗ ಸೋಲ್ ಮೇಟ್ ಎಂದು ಬರೆದುಕೊಂಡಿದ್ದಾರೆ.

ನಟಿ ನೀತಾ ಅಶೋಕ್ ತನ್ನ ಕ್ಲಾಸ್ ಮೇಟ್ ಹುಡುಗನನ್ನೆ ಮದುವೆಯಾಗುತ್ತಿದ್ದಾರೆ. ಮದುವೆಯಾಗ್ತೀರಾ ಎಂದು ಪ್ರಪೋಸ್ ಮಾಡಿದ್ದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸಿಂಪಲ್ ಆಗಿ ನಿಶ್ಚಿತಾರ್ಥ ಮಾಡಿಕೊಂಡಿರುವ ನೀತಾ ಅಶೋಕ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ನೀತಾ ಅಶೋಕ್ ನಿಶ್ಚಿತಾರ್ಥ ಸಮಾರಂಭದಲ್ಲಿ ಕುಟುಂಬದವರು ಮತ್ತು ಆಪ್ತರು ಮಾತ್ರ ಭಾಗಿಯಾಗಿದ್ದರು. ನೀತಾ ಅಶೋಕ್ ಜೋಡಿಗೆ ಅಭಿಮಾನಿಗಳು ಮತ್ತು ಸ್ನೇಹಿತರು ಶುಭಾಶಯ ತಿಳಿಸುತ್ತಿದ್ದಾರೆ. 

ಉಡುಪಿ ಮೂಲದ ನಟಿ ನೀತಾ ಅಶೋಕ್ ಕಿರುತೆರೆ ಮೂಲಕ ಬಣ್ಣದ ಲೋಕದ ಪಯಣ ಪ್ರಾರಂಭಿಸಿದರು. ಯಶೋದಾ ಧಾರಾವಾಹಿ ಮೂಲಕ ಮೊದಲ ಬಾರಿಗೆ ತೆರೆಮೇಲೆ ಮಿಂಚಿದರು. ಬಳಿಕ ಕೆಲವು ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿದ್ದಾರೆ. 

ನಾ ನಿನ್ನ ಬಿಡಲಾರೆ, ನೀಲಂಬರಿ ಧಾರಾವಾಹಿಗಳಲ್ಲಿ ನೀತಾ ಪ್ರಮುಖ ಪಾತ್ರದಲ್ಲಿ ಮಿಂಚಿದ್ದಾರೆ. ಕನ್ನಡ ಧಾರಾವಾಹಿ ಜೊತೆಗೆ ಹಿಂದಿ ಧಾರಾವಾಹಿಯಲ್ಲೂ ಮಿಂಚಿದ್ದಾರೆ. ಕಿರುತೆರೆ ಜೊತೆಗೆ ಸಿನಿಮಾಗಳಲ್ಲೂ ನಟಿಸಿದ್ದಾರೆ. ಎರಡು ಸಿನಿಮಾಗಳಲ್ಲಿ ನೀತಾ ನಟಿಸಿದ್ದಾರೆ.

ಸುದೀಪ್ ಜೊತೆ ವಿಕ್ರಾಂತ್ ರೋಣ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ನೀತಾ ಅಶೋಕ್‌ಗೆ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟಿತ್ತು. ಪ್ಯಾನ್ ಇಂಡಿಯಾ ಮಟ್ಟದಲ್ಲಿ ನೀತಾ ಸದ್ದು ಮಾಡಿದರು. ಈ ಸಿನಿಮಾ ಬಳಿಕ ನೀತಾ ಮತ್ತೆ ಯಾವ ಸಿನಿಮಾಗಳಲ್ಲೂ ಕಾಣಿಸಿಕೊಂಡಿಲ್ಲ. ಮುಂದಿನ ಸಿನಿಮಾದ ಬಗ್ಗೆ ಕುತೂಹಲದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಮದುವೆ ಸುದ್ದಿ ನೀಡಿದ್ದಾರೆ. 

click me!