ವಿಷ್ಣುವರ್ಧನ್ ಸರ್ ಥರ ನಾನೂ ಕೈಗೆ ಕಡಗ ಹಾಕಿಕೊಳ್ಳುತ್ತೇನೆ: ಗೋಲ್ಡನ್‌ಸ್ಟಾರ್‌ ಗಣೇಶ್

Published : Mar 11, 2026, 04:35 PM IST

ನಾನು ವಿಷ್ಣು ಸಾರ್ ದೊಡ್ಡ ಅಭಿಮಾನಿ. ಅವರಂತೆಯೇ ನನ್ನ ಕೈಗೂ ಕಡಗ ಹಾಕ್ಕೊಂಡಿದ್ದೇನೆ. ನೀನು ಯಾವಾಗಲೂ ಸಂತೋಷವಾಗಿರುವಂತೆ ಇರಬೇಡ, ಸಂತೋಷವಾಗಿರು ಎನ್ನುತ್ತಿದ್ದರು ಎಂದು ಗೋಲ್ಡನ್‌ಸ್ಟಾರ್‌ ಗಣೇಶ್ ಹೇಳಿದರು.

PREV
15
ಬ್ಲಾಕ್ ಟಿಕೆಟ್ ತಗೊಂಡು ನೋಡ್ತಿದ್ದೆ

ನಾನು ವಿಷ್ಣು ಸಾರ್ ದೊಡ್ಡ ಅಭಿಮಾನಿ. ಅವರಂತೆಯೇ ನನ್ನ ಕೈಗೂ ಕಡಗ ಹಾಕ್ಕೊಂಡಿದ್ದೇನೆ. ಅವರ ಸಿನಿಮಾಗಳನ್ನು ಬ್ಲಾಕ್ ಟಿಕೆಟ್ ತಗೊಂಡು ನೋಡ್ತಿದ್ದೆ.

25
ಸಂತೋಷವಾಗಿರು ಎನ್ನುತ್ತಿದ್ದರು

ಅವರು, ನೀನು ಯಾವಾಗಲೂ ಸಂತೋಷವಾಗಿರುವಂತೆ ಇರಬೇಡ, ಸಂತೋಷವಾಗಿರು ಎನ್ನುತ್ತಿದ್ದರು ಎಂದು ಗೋಲ್ಡನ್‌ಸ್ಟಾರ್‌ ಗಣೇಶ್ ಹೇಳಿದರು.

35
ಕೋಟಿಗೊಬ್ಬ 25ನೇ ವರ್ಷದ ಸಂಭ್ರಮ

ಸಾಹಸಸಿಂಹ ಡಾ.ವಿಷ್ಣುವರ್ಧನ್ ಅಭಿನಯದ ‘ಕೋಟಿಗೊಬ್ಬ’ ಚಿತ್ರ ಬಿಡುಗಡೆಯಾಗಿ 25 ವರ್ಷಗಳಾದ ಪ್ರಯುಕ್ತ ನಿರ್ಮಾಪಕ ಸೂರಪ್ಪಬಾಬು ಆಯೋಜಿಸಿದ್ದ ‘ಕೋಟಿಗೊಬ್ಬ 25ನೇ ವರ್ಷದ ಸಂಭ್ರಮ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

45
ದೇವರ ಬಗ್ಗೆ ತುಂಬಾ ಹೇಳುತ್ತಿದ್ದರು

ಉಪೇಂದ್ರ ಮಾತನಾಡಿ, ವಿಷ್ಣು ಅವರನ್ನು ಮಾತಾಡಿಸಬೇಕೆಂದೇ ಅವರ ಮನೆಗೆ ಹೋಗುತ್ತಿದೆ. ಅಧ್ಯಾತ್ಮ, ದೇವರ ಬಗ್ಗೆ ತುಂಬಾ ಹೇಳುತ್ತಿದ್ದರು. ಅಂಥ ಮಹಾನ್ ವ್ಯಕ್ತಿ ಮಾತು ಕೇಳೋದೇ ಪುಣ್ಯ. ಅವರಿಂದ ನಾನು ಸ್ಫೂರ್ತಿ ಪಡೆಯುತ್ತಿದ್ದೆ.

55
ನನ್ನ ಸಿನಿಮಾಗಳನ್ನು ಮೆಚ್ಚಿಕೊಳ್ಳುತ್ತಿದ್ದರು

ನಿಮ್ಮ ಸಿನಿಮಾಗಳು ಬೇರೆಯದೇ ಪ್ರೇಕ್ಷಕರನ್ನು ಹುಟ್ಟು ಹಾಕುತ್ತಿವೆ ಎಂದು ನನ್ನ ಸಿನಿಮಾಗಳನ್ನು ಮೆಚ್ಚಿಕೊಳ್ಳುತ್ತಿದ್ದರು ಎಂದರು. ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಕಲಾವಿದರಾದ ದೇವರಾಜ್‌, ಪ್ರಿಯಾಂಕ ಉಪೇಂದ್ರ, ಗಣೇಶ್, ನಿರ್ದೇಶಕ ನಾಗಣ್ಣ ಭಾಗವಹಿಸಿದ್ದರು.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories