ಇನ್ನು ಕೆಲ ದಿನ ಮಾತ್ರ ಬಾಕಿ, ಆಗಸ್ಟ್ 8ಕ್ಕೆ ಗುಡ್ ನ್ಯೂಸ್ ಹೊರಬರುತ್ತಿದೆ. ಟಾಕ್ಸಿಕ್ ಸಿನಿಮಾ ಕುರಿತು ನಟ ಯಶ್ ಬಿಗ್ ಅಪ್‌ಡೇಟ್ ನೀಡಿದ್ದಾರೆ. ಸಿನಿಮಾ ಆಗಸ್ಟ್ 26ಕ್ಕೆ ಬಿಡುಗಡೆಯಾಗಲಿದೆ. ಹಾಗಾದರೆ ಆಗಸ್ಟ್ 8ರ ರಹಸ್ಯವೇನು?
2026ರ ಮತ್ತೊಂದು ಬಿಗ್ ಸಿನಿಮಾಗಾಗಿ ದೇಶಾದ್ಯಂತ ಸಿನಿ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಕೆಜಿಎಫ್ ಬಳಿ ರಾಕಿಂಗ್ ಸ್ಟಾರ್ ಯಶ್ ತೆರೆ ಮೇಲೆ ನೋಡಲು ಕನ್ನಡಿಗರು ಮಾತ್ರವಲ್ಲ ದೇಶದ ಸಿನಿಮಾ ಅಭಿಮಾನಿಗಳು ಉತ್ಸುಕರಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಟಾಕ್ಸಿಕ್ ಸಿನಿಮಾ ನಿರ್ಮಾಣ ನಿರಂತರವಾಗಿ ನಡೆಯುತ್ತಿದೆ. ಇದೀಗ ಬಿಡುಗಡೆಗೆ ಸಜ್ಜಾಗುತ್ತಿದೆ. ಇದಕ್ಕೂ ಮೊದಲು ನಟ ಯಶ್ ಮಹತ್ವದ ಅಪ್‌ಡೇಟ್ ನೀಡಿದ್ದಾರೆ.
26
08-08-2026ಕ್ಕೆ ಗುಡ್ ನ್ಯೂಸ್
ಆಗಸ್ಟ್ 8ಕ್ಕೆ ಟಾಕ್ಸಿಕ್ ಸಿನಿಮಾದ ಟ್ರೇಲರ್ ಬಿಡುಗಡೆಯಾಗಲಿದೆ. ಈ ಕುರಿತು ಯಶ್ ಅನೌನ್ಸ್ ಮಾಡಿದ್ದಾರೆ. 08-08-2026ಕ್ಕೆ ಟಾಕ್ಸಿಕ್ ಟ್ರೇಲರ್ ಬಿಡುಗಡೆಯಾಗುತ್ತಿದೆ. ಇದೀಗ ಕುತೂಹಲ ಹೆಚ್ಚಾಗಿದೆ. ಈಗಾಗಲೇ ಟಾಕ್ಸಿಕ್ ಟೀಸರ್ ನೋಡಿ ಭಾರಿ ಚರ್ಚೆಯಾಗಿತ್ತು. ಇದೀಗ ಟ್ರೇಲರ್ ನಿರೀಕ್ಷೆ ಹೆಚ್ಚಿಸಿದೆ.
36
ಆಗಸ್ಟ್ 26ಕ್ಕೆ ಟಾಕ್ಸಿಕ್ ರಿಲೀಸ್
ಯಶ್ ಅಭಿನಯದ, ಗೀತು ಮೋಹನದಾಸ್ ನಿರ್ದೇಶನಕ ಟಾಕ್ಸಿಕ್ ಸಿನಿಮಾ ಆಗಸ್ಟ್ 26ಕ್ಕೆ ಬಿಡುಗಡೆಯಾಗುತ್ತಿದೆ. ವಿಶೇಷ ಅಂದರೆ ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಚಿತ್ರೀಕರಣಗೊಂಡಿರುವ ಟಾಕ್ಸಿಕ್ ಸಿನಿಮಾ ತಮಿಳು, ತೆಲುಗು, ಹಿಂದಿ, ಮಲೆಯಾಳಂ ಸೇರಿದಂತ ಹಲವು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.
ನಟ ಯಶ್ ತಮ್ಮ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಟ್ರೇಲರ್ ಕುರಿತು ಪೋಸ್ಟ್ ಮಾಡುತ್ತಿದ್ದಂತೆ ಅಭಿಮಾನಿಗಳು ಭರ್ಜರಿ ಪ್ರತಿಕ್ರಿಯಿಸಿದ್ದಾರೆ. ಯಶ್ ಸಿನಿಮಗಾಗಿ ಕಾಯುತ್ತಿದ್ದೇವೆ ಎಂದು ಪ್ರತಿಕ್ರಿಯಿಸಿದ್ದಾರೆ. ಭಾರತ ಮಾತ್ರವಲ್ಲ, ವಿಶ್ವ ಸಿನಿಮಾದಲ್ಲಿ ಯಶ್ ಹೊಸ ಅಧ್ಯಾಯ ಬರೆಯುತ್ತಿದ್ದಾರೆ ಎಂದು ಹಲವರು ಪ್ರತಿಕ್ರಿಯಿಸಿದ್ದಾರೆ.
56
ಟಾಕ್ಸಿಕ್ ಸೀಕ್ರೆಟ್
ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಸಂಗೀತ ನಿರ್ದೇಶಕ ರವಿ ಬಸ್ರೂರ್ ಮಾಸ್ಟರ್ ಪೀಸ್ ಮ್ಯೂಸಿಕ್ ನೀಡಿದ್ದಾರೆ. ಜೊತೆಗೆ ವಿಶಾಲ್ ಮಿಶ್ರಾ, ತನ್ಶಿಕ್ ಬಗ್ಚಿ ಹಾಡುಗಳಿಗೆ ಕೆಲಸ ಮಾಡಿದ್ದಾರೆ. ವಿಶೇಷ ಅಂದರೆ ಸಿನಿಮಾದ ಆ್ಯಕ್ಷನ್ ಕಟ್ ಹಾಲಿವುಡ್ ಸ್ಟಂಟ್ ನಿರ್ದೇಶಕ ಜೆಜೆ ಪೆರಿ ಹಾಗೂ ತಮಿಳಿನ ಅನ್ಬರಿವ್ ಮಾಡಿದ್ದಾರೆ. ರಾಜೀವ್ ರವಿ ಸಿನಿಮಾಟೋಗ್ರಫಿ ಮಾಡಿದ್ದಾರೆ.
66
ಹೀರೋಯಿನ್ ಧಮಾಕಾ
ಟಾಕ್ಸಿಕ್ ಸಿನಿಮಾದ ಪ್ರಮುಖ ಅಟ್ರಾಕ್ಷನ್ ನಟಿಯರು. ನಯನತಾರಾ, ಕಿಯಾರ ಅಡ್ವಾಣಿ, ರುಕ್ಮಣಿ ವಸಂತ್, ತಾರಾ ಸುತಾರಿಯಾ, ಹುಮಾ ಖುರೇಷಿ ಸೇರಿದಂತೆ ಅತೀ ದೊಡ್ಡ ತಾರಾ ಬಣ ಇದರಲ್ಲಿದೆ. ಈಗಾಗಲೇ ಯಶ್ ಹಾಗೂ ಕಿಯಾರ ಅಡ್ವಾಣಿಯ ತಬಾಹಿ ಹಾಡು ಭಾರಿ ಮೆಚ್ಚುಗೆ ಗಳಿಸಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.