ಏಷ್ಯನ್‌ ಗೇಮ್ಸ್‌ನಲ್ಲಿ ಐತಿಹಾಸಿಕ ಚಿನ್ನ ಗೆದ್ದ ಪ್ರಣವಿ ಅರಸ್ ಆರ್‌ಸಿಬಿ ಅಪ್ಪಟ ಅಭಿಮಾನಿ!

Published : Oct 03, 2026, 05:05 PM IST

ನಗೋಯಾ: 2026ರ ಏಷ್ಯನ್ ಗೇಮ್ಸ್‌ನಲ್ಲಿ ಮೈಸೂರಿನ ಪ್ರಣವಿ ಅರಸ್ ಮಹಿಳಾ ಗಾಲ್ಫ್‌ ವೈಯುಕ್ತಿಕ ವಿಭಾಗದಲ್ಲಿ ಚಿನ್ನದ ಪದಕ ಜಯಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಅಂದಹಾಗೆ ಪ್ರಣವಿ, ಆರ್‌ಸಿಬಿ ತಂಡದ ಅಪ್ಪಟ ಅಭಿಮಾನಿ ಕೂಡಾ ಹೌದು.

PREV
15
ಪ್ರಣವಿ ಅರಸ್ ಏಷ್ಯನ್‌ ಗೇಮ್ಸ್‌ನಲ್ಲಿ ಗಾಲ್ಪ್‌ನಲ್ಲಿ ಚಿನ್ನ ಗೆದ್ದ ಮೊದಲ ಮಹಿಳಾ ಪಟು

ಇಂದು ಮಹಿಳೆಯರ ಗಾಲ್ಫ್‌ ವೈಯುಕ್ತಿಕ ವಿಭಾಗದಲ್ಲಿ ಮೈಸೂರಿನ ಪ್ರಣವಿ ಅರಸ್ ಚಿನ್ನದ ಪದಕ ಜಯಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಪ್ರಣವಿ ಇದೀಗ ಏಷ್ಯನ್ ಗೇಮ್ಸ್‌ನಲ್ಲಿ ವೈಯುಕ್ತಿಕ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಮಹಿಳಾ ಗಾಲ್ಫರ್ ಎನ್ನುವ ಅಪರೂಪದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

25
ದೇಶವೇ ಸಂಭ್ರಮಿಸುವಂತ ಸಾಧನೆ ಮಾಡಿದ ಪ್ರಣವಿ ಅರಸ್

ಸ್ಪರ್ಧೆಯ ಆರಂಭಿಕ ಹಂತದಲ್ಲಿ ಕೊಂಚ ಹಿನ್ನಡೆ ಅನುಭವಿಸಿದ್ದ ಪ್ರಣವಿ ಅರಸ್, ಕೊನೆಯ ಮೂರು ಬರ್ಡಿಗಳನ್ನು ದಾಖಲಿಸುವ ಮೂಲಕ ಭರ್ಜರಿಯಾಗಿ ಕಮ್‌ಬ್ಯಾಕ್ ಮಾಡಿದರು. ಚೀನಾದ ಯಿನ್ ರುವೊನಿಂಗ್ ಹಾಗೂ ಸಿಂಗಾಪುರದ ಶ್ಯಾನನ್ ಟಾನ್ ಅವರನ್ನು ಹಿಂದಿಕ್ಕಿ ಪ್ರಣವಿ ಚಿನ್ನದ ಪದಕಕ್ಕೆ ಕೊರಳೊಡ್ಡಿ ಇಡೀ ದೇಶವೇ ಸಂಭ್ರಮಿಸುವಂತೆ ಮಾಡಿದರು.

35
ಚಿನ್ನ ಗೆದ್ದು ಖುಷಿ ಹಂಚಿಕೊಂಡ ಪ್ರಣವಿ ಅರಸ್

ಇನ್ನು ವೈಯುಕ್ತಿಕ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಮೊದಲ ಮಹಿಳಾ ಗಾಲ್ಫರ್ ಎನ್ನುವ ಅಪರೂಪದ ಕೀರ್ತಿಗೆ ಪಾತ್ರರಾಗಿರುವ ಪ್ರಣವಿ, ಯಾವುದನ್ನೇ ಆದರೂ ಮೊದಲ ಬಾರಿಗೆ ಮಾಡುವುದು ನಂಗಿಷ್ಟ. ಇನ್ನು ಮುಂದೆ ಯಾರು ಬೇಕಾದರೂ ಈ ಸಾಧನೆ ಮಾಡಬಹುದು, ಆದರೆ ಮೊದಲಿಗರು ಯಾವತ್ತಿದ್ದರೂ ಮೊದಲಿಗರೇ ಎಂದು ಪ್ರಣವಿ ಸಂತಸ ಹಂಚಿಕೊಂಡಿದ್ದಾರೆ.

45
ಪ್ರಣವಿ ಅರಸ್ ಆರ್‌ಸಿಬಿ ಅಭಿಮಾನಿ

ಅಂದಹಾಗೆ ಪ್ರಣವಿ ಅರಸ್, ಆರ್‌ಸಿಬಿ ಅಭಿಮಾನಿ ಎನ್ನುವುದು ಬಹುತೇಕ ಮಂದಿಗೆ ಗೊತ್ತಿಲ್ಲ. ಪ್ರಣವಿ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆಲುವಿನ ಬೆನ್ನಲ್ಲೇ ಫೋಟೋವೊಂದು ವೈರಲ್ ಆಗಿದ್ದು, ಆಕೆ 2025ರ ಐಪಿಎಲ್ ಫೈನಲ್ ವೀಕ್ಷಿಸಲು ಆರ್‌ಸಿಬಿ ಜೆರ್ಸಿ ತೊಟ್ಟು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದರು.

55
2025ರಲ್ಲಿ ಆರ್‌ಸಿಬಿ ಮೊದಲ ಬಾರಿಗೆ ಚಾಂಪಿಯನ್

2025ರ ಐಪಿಎಲ್ ಫೈನಲ್‌ನಲ್ಲಿ ಆರ್‌ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ರೋಚಕ ಫೈನಲ್‌ನಲ್ಲಿ ಪಂಜಾಬ್ ತಂಡವನ್ನು ಸೋಲಿಸಿ ಆರ್‌ಸಿಬಿ ತಂಡವು ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇದಾದ ಬಳಿಕ ಆರ್‌ಸಿಬಿ ತಂಡವು 2026ರ ಐಪಿಎಲ್ ಫೈನಲ್‌ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿ ಸತತ ಎರಡನೇ ಬಾರಿಗೆ ಕಪ್ ಜಯಿಸುವಲ್ಲಿ ಯಶಸ್ವಿಯಾಗಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories