Published : Oct 09, 2019, 06:02 PM ISTUpdated : Oct 09, 2019, 06:40 PM IST
ಒಂದು ಕಾಲದಲ್ಲಿ ತನ್ನ ಸ್ಥಿರ ಪ್ರದರ್ಶನದ ಮೂಲಕ ಪಾಕಿಸ್ತಾನ ತಂಡದ ಹೀರೋ ಆಗಿದ್ದ ಉಮರ್ ಅಕ್ಮಲ್ ಇದೀಗ ರನ್ ಗಳಿಸಲು ಪರದಾಡುತ್ತಿದ್ದಾರೆ. ಶ್ರೀಲಂಕಾ ವಿರುದ್ಧ ತವರಿನಲ್ಲಿ ನಡೆದ ಮೊದಲೆರಡು ಟಿ20 ಪಂದ್ಯಗಳಲ್ಲಿ ಸೊನ್ನೆ ಸುತ್ತುವ ಮೂಲಕ ಬೇಡವಾದ ದಾಖಲೆಗೆ ಪಾತ್ರವಾಗಿದ್ದಾರೆ. ಹೌದು, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿಹೆಚ್ಚು ಶೂನ್ಯ ಸುತ್ತಿದ ಟಾಪ್ 10 ಪಟ್ಟಿಯಲ್ಲಿ ಶ್ರೀಲಂಕಾ ಮಾಜಿ ಕ್ರಿಕೆಟಿಗ ತಿಲಕರತ್ನೆ ದಿಲ್ಷ್ಯಾನ್ ಜತೆ ಉಮರ್ ಅಕ್ಮಲ್ ಜಂಟಿ ಅಗ್ರಸ್ಥಾನಕ್ಕೇರುವ ಮೂಲಕ ಅಪಖ್ಯಾತಿಗೆ ಗುರಿಯಾಗಿದ್ದಾರೆ. ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್’ನಲ್ಲಿ ಅತಿಹೆಚ್ಚು ಶೂನ್ಯ ಸುತ್ತಿದ ಟಾಪ್ 10 ಆಟಗಾರರ ಪಟ್ಟಿಯನ್ನು ಸುವರ್ಣ ನ್ಯೂಸ್.ಕಾಂ ನಿಮ್ಮ ಮುಂದಿಡುತ್ತಿದೆ. ಅತಿ ಹೆಚ್ಚು ಸೊನ್ನೆ ಸುತ್ತಿದವರ ಪಟ್ಟಿಯಲ್ಲಿ ಪಾಕಿಸ್ತಾನ ಹಾಗೂ ಶ್ರೀಲಂಕಾದವರದ್ದೇ ಸಿಂಹಪಾಲು. ಆದರೆ ಭಾರತದ ಯಾವೊಬ್ಬ ಕ್ರಿಕೆಟಿಗನೂ ಈ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ ಎನ್ನುವುದೇ ಖುಷಿಯ ವಿಚಾರ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.