ವಿದ್ಯುತ್‌ ಸಂಪರ್ಕಕ್ಕೆ ಸ್ವಾಧೀನಾನುಭವ ಪತ್ರ ಕಡ್ಡಾಯದಿಂದ 2 ಲಕ್ಷ ಕಟ್ಟಡಗಳಿಗೆ ವಿದ್ಯುತ್‌ ಸಂಪರ್ಕ ಸಿಕ್ಕಿಲ್ಲ

Published : Jun 10, 2025, 08:28 AM IST

ಓಸಿ ಇಲ್ಲದ ಕಟ್ಟಡಗಳಿಗೆ ವಿದ್ಯುತ್‌ ಸಂಪರ್ಕ ನೀಡದಂತೆ ಸುಪ್ರೀಂ ಕೋರ್ಟ್‌ ಆದೇಶ ಹಿನ್ನೆಲೆಯಲ್ಲಿ ಸುಮಾರು 2 ಲಕ್ಷ ಮನೆಗಳಿಗೆ ವಿದ್ಯುತ್‌ ಸಂಪರ್ಕ ಸಮಸ್ಯೆಯಾಗಿದೆ. 

PREV
14

ವಿದ್ಯುತ್‌ ಸಂಪರ್ಕಕ್ಕೆ ಸ್ವಾಧೀನಾನುಭವ ಪತ್ರ (ಓಸಿ) ಕಡ್ಡಾಯದಿಂದ ಸುಮಾರು 2 ಲಕ್ಷ ಮನೆ, ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಸಮಸ್ಯೆಯಾಗಿದೆ. ಹೀಗಾಗಿ ನಿಯಮಗಳಿಗೆ ತಿದ್ದುಪಡಿ ತಂದು ಬಡವರಿಗೆ ವಿದ್ಯುತ್‌ ಸಂಪರ್ಕ ನೀಡುವ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ.

24

ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಓಸಿ ಇಲ್ಲದ ಕಟ್ಟಡಗಳಿಗೆ ವಿದ್ಯುತ್‌ ಸಂಪರ್ಕ ಹಾಗೂ ನೀರು ಸರಬರಾಜು ಮಾಡದಂತೆ ಸುಪ್ರೀಂ ಕೋರ್ಟ್‌ ಆದೇಶ ಮಾಡಿದೆ. ಅದರಂತೆ ಕೆಇಆರ್‌ಸಿ ಆದೇಶದ ಪ್ರಕಾರವೇ ಎಸ್ಕಾಂಗಳು ವಿದ್ಯುತ್ ಸಂಪರ್ಕಕ್ಕೆ ಓಸಿ ಕಡ್ಡಾಯ ಮಾಡಿವೆ.

34

ಇದರಿಂದ ಬಡವರ ಮನೆ, ಕಟ್ಟಡ ಹಾಗೂ ಕೈಗಾರಿಕೆಗಳಿಗೆ ಓಸಿ ಇಲ್ಲದೆ ವಿದ್ಯುತ್‌ ಸಂಪರ್ಕ ಸಿಗುತ್ತಿಲ್ಲ ಎಂಬುದು ಗಮನಕ್ಕೆ ಬಂದಿದೆ. ನಮ್ಮ ಅಂದಾಜು ಪ್ರಕಾರ 2ಲಕ್ಷ ಕಟ್ಟಡಗಳಿಗೆ ಸಂಪರ್ಕ ಸಿಗದೆ ಇರಬಹುದು.

44

ಈ ಬಗ್ಗೆ ಸಮಸ್ಯೆ ಬಗೆಹರಿಸಲು ಮುಖ್ಯಮಂತ್ರಿಗಳು ಉಪಮುಖ್ಯಮಂತ್ರಿ, ಸರ್ಕಾರದ ಮುಖ್ಯಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ. ಅವರು ನಿಯಮ ತಿದ್ದುಪಡಿಗೆ ಪ್ರಸ್ತಾವನೆ ಮಂಡಿಸಿದರೆ ಮುಂದಿನ ಸಂಪುಟದಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ ಎಂದು ಕೆ.ಜೆ. ಜಾರ್ಜ್‌ ತಿಳಿಸದಿರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories