ಕರಾವಳಿ ಟೂರಿಸಂಗೆ ರಿಷಬ್ ಶೆಟ್ಟಿ ರಾಯಭಾರಿ? ಡಿವೈನ್ ಸ್ಟಾರ್ ಬೆನ್ನುತಟ್ಟಿದ ಡಿಕೆಶಿ, ಫೋಟೋ ವೈರಲ್!

Ravi Janekal   | Kannada Prabha
Published : Jun 20, 2026, 07:14 AM IST

ಕರಾವಳಿ ಹಾಗೂ ಮಲೆನಾಡು ಪ್ರವಾಸೋದ್ಯಮ ಪ್ರಚಾರ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ ಅವರನ್ನು ನೇಮಕ ಮಾಡಲು ಸರ್ಕಾರ ಚಿಂತನೆ ನಡೆಸಿದ್ದು,  ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರವಾಗುವ ಸಾಧ್ಯತೆ, ಸಿಎಂ ಡಿಕೆ ಶಿವಕುಮಾರ್ ರಿಷಬ್ ಶೆಟ್ಟಿ ಅವರ ಬೆನ್ನು ತಟ್ಟಿರುವ ಫೋಟೋ ವೈರಲ್ ಆಗಿದೆ.

PREV
15
ಕರಾವಳಿ ಟೂರಿಸಂಗೆ ನಟ ರಿಷಬ್‌ ಶೆಟ್ಟಿ ರಾಯಭಾರಿ?

ಕರಾವಳಿ ಹಾಗೂ ಮಲೆನಾಡು ಪ್ರವಾಸೋದ್ಯಮ ಪ್ರಚಾರ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ ಅವರನ್ನು ನೇಮಕ ಮಾಡಲು ಸರ್ಕಾರ ಚಿಂತನೆ ನಡೆಸಿದ್ದು, ಶನಿವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರ ಚರ್ಚೆಗೆ ಬರಲಿದೆ ಎಂದು ತಿಳಿದು ಬಂದಿದೆ.

25
ಸಿಎಂ ಅಧ್ಯಕ್ಷತೆಯಲ್ಲಿ ಕರಾವಳಿ ಪ್ರವಾಸೋದ್ಯಮ ಸಭೆ

ವಿಧಾನಸೌಧದಲ್ಲಿ ಶುಕ್ರವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಕರಾವಳಿ ಪ್ರವಾಸೋದ್ಯಮ ಸಭೆಯಲ್ಲಿ ಕೂಡ ವಿಚಾರ ಅನೌಪಚಾರಿಕವಾಗಿ ಚರ್ಚೆಯಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ಅಂತಿಮ ನಿರ್ಧಾರ ಪ್ರಕಟಿಸಲು ತೀರ್ಮಾನಿಸಲಾಗಿದೆ ಎಂದು ಗೊತ್ತಾಗಿದೆ.

35
ರಿಷಬ್ ಶೆಟ್ಟಿ ಬೆನ್ನು ತಟ್ಟಿದ ಸಿಎಂ ಡಿಕೆ ಶಿವಕುಮಾರ್, ಫೋಟೋ ವೈರಲ್

ವಿಶೇಷವಾಗಿ ಶುಕ್ರವಾರ ನಡೆದ ಸಭೆಯಲ್ಲಿ ರಿಷಬ್‌ ಶೆಟ್ಟಿ ಅವರು ಕೂಡ ಹಾಜರಿದ್ದರು. ಮುಖ್ಯಮಂತ್ರಿ ಅವರು ರಿಷಬ್‌ ಶೆಟ್ಟಿ ಅವರನ್ನು ಬೆನ್ನು ತಟ್ಟಿರುವ ಫೋಟೋ ಕೂಡ ಬಹಿರಂಗವಾಗಿದೆ. ಆದರೆ, ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದ್ದರೂ ಸಂಪುಟ ಸಭೆಯ ಒಪ್ಪಿಗೆ ಬಳಿಕ ಅಧಿಕೃತವಾಗಿ ಪ್ರಕಟಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

45
ರಾವಳಿ ಪ್ರವಾಸೋದ್ಯಮ ಸಭೆಯಲ್ಲಿ ರಿಷಬ್ ಶೆಟ್ಟಿ ಭಾಗಿ, ಚರ್ಚೆಗಳೇನು?

ಶುಕ್ರವಾರ ಬೆಂಗಳೂರಿನ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಕರಾವಳಿ ಪ್ರವಾಸೋದ್ಯಮ ಸಭೆಯಲ್ಲಿ ಕರಾವಳಿ ಸಂಸ್ಕೃತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಾರ ಮಾಡುವುದರ ಜತೆಗೆ ಹೆಚ್ಚು ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸದ್ಯ ಅನುಮೋದಿಸಿರುವ ೪೫ ಯೋಜನೆಗಳಿಂದ ೪,೫೦೦ ಉದ್ಯೋಗ ಸೃಷ್ಟಿಯಾಗುತ್ತದೆ. ಈ ಪ್ರಮಾಣ ಇನ್ನಷ್ಟು ಹೆಚ್ಚಾಗಬೇಕು. ಅತಿ ಉದ್ದದ ಸಮುದ್ರ ತೀರಗಳು ಇರುವ ಪ್ರದೇಶಗಳಲ್ಲಿ ರಾಜ್ಯದ ಕರಾವಳಿಯೂ ಸೇರಿದೆ. ನಮ್ಮ ಪರಿಸರಕ್ಕೆ ಧಕ್ಕೆ ಆಗದಂತೆ ಸಮುದ್ರ ತೀರಗಳನ್ನು ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಪರಿಗಣಿಸುವಂತೆ ಅವರು ಸೂಚಿಸಿದರು.

55
ಕಲೆಗೆ ಪ್ರಾಶಸ್ತ್ಯ ಹೆಚ್ಚಿಸಬೇಕು: ರಿಷಬ್ ಶೆಟ್ಟಿ

ಕರಾವಳಿಯ ಜನಪದ ಕಲೆ, ಸಂಗೀತಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಡಿವೈನ್ ಸ್ಟಾರ್ ರಿಷಬ್‌ ಶೆಟ್ಟಿ ಹೇಳಿದರು.

ಸಿನಿಮಾ ಚಿತ್ರೀಕರಣಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸುವುದರಿಂದ ಕೇರಳ-ಗೋವಾ-ಕರ್ನಾಟಕದ ಸಿನಿಮಾ ಜಗತ್ತಿಗೆ ಹೆಚ್ಚು ಅನುಕೂಲ. ಅಭಿವೃದ್ಧಿ ಯೋಜನೆಗಳಿಗೆ ತಾಂತ್ರಿಕ ತೊಂದರೆ ಆಗದಂತೆ ನಾನಾ ಅನುಮತಿಗಳನ್ನು ಪಡೆಯಲು ಏಕ ಗವಾಕ್ಷಿ (ಸಿಂಗಲ್‌ ವಿಂಡೋ) ವ್ಯವಸ್ಥೆ ಜಾರಿಗೆ ಸಿಎಂ ಒಲವು ವ್ಯಕ್ತಪಡಿಸಿದರು. ಇದೇ ಸಂದರ್ಭ ಹೆಲಿ ಟೂರಿಸಂ ಅಭಿವೃದ್ಧಿಗೆ ಒತ್ತು ನೀಡಲು ಸಿಎಂಗೆ ಉದ್ಯಮಿಗಳು ಮನವಿ ಮಾಡಿದರು.

ಈ ಸಭೆಯಲ್ಲಿ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ ಜೆ ಜಾರ್ಜ್, ಖ್ಯಾತ ನಟ ರಿಷಬ್ ಶೆಟ್ಟಿ, ಶಾಸಕರಾದ ಜಿ. ಟಿ. ದೇವೇಗೌಡ, ಸತೀಶ್ ಸೈಲ್, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಶ್ರೀನಿವಾಸ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ತ್ರಿಲೋಕ್ ಚಂದ್ರ ಮತ್ತಿತರರು ಇದ್ದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories