Aryan Khan 'ಅಸಭ್ಯ ವರ್ತನೆ' ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಕೇಸ್ ಕ್ಲೋಸ್ ಮಾಡಲು ಪೊಲೀಸ್ ಸಿದ್ಧತೆ!

Published : Feb 06, 2026, 10:11 AM IST

ಬೆಂಗಳೂರಿನ ಪಬ್‌ವೊಂದರಲ್ಲಿ ಸಾರ್ವಜನಿಕವಾಗಿ ಅಸಭ್ಯ ವರ್ತನೆ ತೋರಿದ ಆರೋಪದ ಮೇಲೆ ಆರ್ಯನ್ ಖಾನ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪೊಲೀಸರು ಕೈಬಿಡಲು ನಿರ್ಧರಿಸಿದ್ದಾರೆ.

PREV
14
ಕೇಸ್ ಮುಕ್ತಾಯಕ್ಕೆ ಮುಂದಾದ ಕಬ್ಬನ್ ಪಾರ್ಕ್ ಪೊಲೀಸರು

ಬೆಂಗಳೂರಿನ ಪಬ್‌ವೊಂದರಲ್ಲಿ ಸಾರ್ವಜನಿಕರ ವಿರುದ್ಧ ಅಸಭ್ಯ ವರ್ತನೆ ತೋರಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‌ಗೆ ದೊಡ್ಡ ರಿಲೀಫ್ ಸಿಗುವ ಸಾಧ್ಯತೆ ಇದೆ. ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಈ ಪ್ರಕರಣಕ್ಕೆ ಇತಿಶ್ರೀ ಹಾಡಲು ಕಬ್ಬನ್ ಪಾರ್ಕ್ ಪೊಲೀಸರು ನಿರ್ಧರಿಸಿದ್ದಾರೆ. ತನಿಖೆಯಲ್ಲಿ ಯಾವುದೇ ಬಲವಾದ ಪುರಾವೆಗಳು ಲಭ್ಯವಾಗದ ಕಾರಣ ಪ್ರಕರಣವನ್ನು ಮುಕ್ತಾಯಗೊಳಿಸಲು ಸಿದ್ಧತೆ ನಡೆಸುತ್ತಿದ್ದಾರೆ.

24
ಆರ್ಯನ್ ಖಾನ್ ಉದ್ದೇಶಪೂರ್ವಕವಾಗಿ ಯಾರನ್ನೂ ಅವಮಾನಿಸಿಲ್ಲ

ನವೆಂಬರ್ 28 ರಂದು ನಡೆದಿದ್ದ ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪಬ್‌ನ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ, ಆರ್ಯನ್ ಖಾನ್ ಉದ್ದೇಶಪೂರ್ವಕವಾಗಿ ಅಥವಾ ಯಾರನ್ನೂ ಅವಮಾನಿಸುವ ರೀತಿಯಲ್ಲಿ ನಡೆದುಕೊಂಡಿಲ್ಲ ಎಂದು ಪಬ್ ಸಿಬ್ಬಂದಿ ಹೇಳಿಕೆ ನೀಡಿದ್ದಾರೆ. ಅಲ್ಲದೆ, ವೈರಲ್ ಆದ ವಿಡಿಯೋದಲ್ಲಿನ ಅಂಶಗಳು ಕಾನೂನಾತ್ಮಕವಾಗಿ ಆರೋಪ ಸಾಬೀತುಪಡಿಸಲು ಪೂರಕವಾಗಿಲ್ಲದ ಕಾರಣ ಶೀಘ್ರದಲ್ಲೇ ಪೊಲೀಸರು ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲಿದ್ದಾರೆ.

34
ಏನಿದು 'ಮಿಡಲ್ ಫಿಂಗರ್' ವಿವಾದ?

ಖಾಸಗಿ ಕಾರ್ಯಕ್ರಮವೊಂದರ ನಿಮಿತ್ತ ಆರ್ಯನ್ ಖಾನ್ ಬೆಂಗಳೂರಿಗೆ ಆಗಮಿಸಿದಾಗ ಈ ಘಟನೆ ನಡೆದಿತ್ತು. ಪಬ್‌ನಲ್ಲಿ ತಮ್ಮನ್ನು ನೋಡಲು ಮುಗಿಬಿದ್ದ ಅಭಿಮಾನಿಗಳತ್ತ ಆರ್ಯನ್ ಮಧ್ಯದ ಬೆರಳು (Middle Finger) ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕಾಡ್ಗಿಚ್ಚಿನಂತೆ ಹರಡಿತ್ತು. ಇದನ್ನು ಕಂಡು ಆಕ್ರೋಶಗೊಂಡಿದ್ದ ನೆಟ್ಟಿಗರು, ಬೆಂಗಳೂರು ಪೊಲೀಸರು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದೂರು ದಾಖಲಿಸಿದ್ದರು.

44
ಪೊಲೀಸರ ಮುಂದಿನ ನಡೆ ಏನು?

ಪಬ್ ಸಿಬ್ಬಂದಿಯ ಹೇಳಿಕೆ ಮತ್ತು ಲಭ್ಯವಿರುವ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಆರ್ಯನ್ ಖಾನ್ ಅವರ ಕೃತ್ಯವು 'ಅಪರಾಧ' ಎಂಬಂತೆ ಬಿಂಬಿತವಾಗುತ್ತಿಲ್ಲ ಎಂದು ಪೊಲೀಸರು ತೀರ್ಮಾನಕ್ಕೆ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಇನ್ನು ಕೆಲವೇ ದಿನಗಳಲ್ಲಿ ಕಬ್ಬನ್ ಪಾರ್ಕ್ ಪೊಲೀಸರು ನ್ಯಾಯಾಲಯಕ್ಕೆ ಈ ಕುರಿತು ಮಾಹಿತಿ ನೀಡಿ ಕೇಸ್ ಕ್ಲೋಸ್ ಮಾಡಲಿದ್ದಾರೆ. ಇದರಿಂದ ಆರ್ಯನ್ ಖಾನ್ ಕಾನೂನು ಸಂಕಷ್ಟದಿಂದ ಪಾರಾಗಲಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories