ಯೂರಿಯಾಕ್ಕಾಗಿ ರೈತರ ಪರದಾಟ: ಕೇಂದ್ರ ಸಚಿವ ಸದಾನಂದಗೌಡರನ್ನ ಭೇಟಿ ಮಾಡಿ ಮಾಡಿದ ಬಿ.ಸಿ. ಪಾಟೀಲ್‌

First Published Aug 27, 2020, 12:51 PM IST

ಬೆಂಗಳೂರು(ಆ.27): ರಾಜ್ಯದಲ್ಲಿ ಯೂರಿಯಾ ಗೊಬ್ಬರ ಸಮರ್ಪಕವಾಗಿ ದೊರೆಯದ ಹಿನ್ನೆಲೆಯಲ್ಲಿ ರೈತರು ಪರದಾಡುತ್ತಿದ್ದಾರೆ. ಹೀಗಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್‌ ಅವರು ಇಂದು(ಗುರುವಾರ) ನವದೆಹಲಿಯಲ್ಲಿ ಕೇಂದ್ರ ರಸಗೊಬ್ಬರ ಮತ್ತು ರಸಾಯನಿಕ ಸಚಿವ ಡಿ.ವಿ. ಸದಾನಂದಗೌಡ ಅವರನ್ನ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ‌ ಕೇಂದ್ರದಿಂದ ರಾಜ್ಯಕ್ಕೆ ಸರಬರಾಜು ಮಾಡಲಾಗುತ್ತಿರುವ ರಸಗೊಬ್ಬರಗಳ ಸಂಪೂರ್ಣ ಮಾಹಿತಿಯನ್ನು ರಾಜ್ಯದ ಕೃಷಿ ಬಿ.ಸಿ.ಪಾಟೀಲ್‌ ಅವರಿಗೆ ಒದಗಿಸಿದ ಕೇಂದ್ರ ಸಚಿವ ಸದಾನಂದ ಗೌಡ
undefined
ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಾಜ್ಯಕ್ಕೆ ಅವಶ್ಯಕ ಗೊಬ್ಬರವನ್ನು ಪೂರೈಸಲು ಕ್ರಮ ಜರುಗಿಸಲು ಸೂಚನೆ ನೀಡಿದ ಸದಾನಂದ ಗೌಡ
undefined
ಕೇಂದ್ರ ಸರ್ಕಾರ ರಾಜ್ಯದ ಅವಶ್ಯಕತೆಗಿಂತಲೂ ಹೆಚ್ಚಿನ ರಸಗೊಬ್ಬರವನ್ನು ಪೂರೈಸಿದ್ದು, ಮುಂದಿನ ದಿನಗಳಲ್ಲೂ ಸಹ ರಸಗೊಬ್ಬರದ ಕೊರತೆಯಾಗುವುದಿಲ್ಲ ಎಂದು ಕೇಂದ್ರ ಸಚಿವ ಸದಾನಂದ ಗೌಡ ಅವರು ಭರವಸೆ ನೀಡಿದ್ದಾರೆ.
undefined
ರಾಜ್ಯ ಸರ್ಕಾರ ರಸಗೊಬ್ಬರ ಹಂಚಿಕೆ ಮತ್ತು ರಾಜ್ಯದ ಎಲ್ಲಾ ಭಾಗಗಳಲ್ಲೂ ರೈತರಿಗೆ ಸಮರ್ಪಕವಾಗಿ ತಲುಪಿಸುವಲ್ಲಿ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.
undefined
click me!