ಸಂಭ್ರಮದ ದಸರಾ ಹಬ್ಬ: ರಾಜ್ಯ ಬಿಜೆಪಿ ಕಚೇರಿಯಲ್ಲಿ ವಿಶೇಷ ಪೂಜೆ, ಬಿ.ಎಲ್. ಸಂತೋಷ್ ಭಾಗಿ

Suvarna News   | Asianet News
Published : Oct 15, 2021, 02:05 PM IST

ಬೆಂಗಳೂರು(ಅ.15):  ಇಂದು ರಾಜ್ಯಾದ್ಯಂತ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ಹಾಗೆಯೇ ನಗರದ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿಯೂ ಕೂಡ ವಿಶೇಷ ಪೂಜೆ ಸಲ್ಲಿಸಲಾಗಿದೆ. 

PREV
14
ಸಂಭ್ರಮದ ದಸರಾ ಹಬ್ಬ:  ರಾಜ್ಯ ಬಿಜೆಪಿ ಕಚೇರಿಯಲ್ಲಿ ವಿಶೇಷ ಪೂಜೆ, ಬಿ.ಎಲ್. ಸಂತೋಷ್ ಭಾಗಿ

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ದಸರಾ ಹಬ್ಬದ ಸಂಭ್ರಮ ಮನೆ ಮಾಡಿತ್ತು. ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಸೇರಿದಂತೆ ಸಾಕಷ್ಟು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾಗಿದ್ದಾರೆ.  

24

ಪೂಜಾ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್, ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಮತ್ತು ಬಿಜೆಪಿ ಕಾರ್ಯಕರ್ತರು, ಕಚೇರಿ ಸಿಬ್ಬಂದಿ ಭಾಗಿ. 

34

ಇದೇ ವೇಳೆ ಪೂಜಾ ಕಾರ್ಯಕ್ರಮ ನಡೆಸಿದ್ದ ಅರ್ಚಕರ ಕಾಲಿಗೆ ನಮಸ್ಕರಿಸುವ ಮೂಲಕ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಅವರ ಆಶೀರ್ವಾದವನ್ನ ಪಡೆದುಕೊಂಡಿದ್ದಾರೆ. 

44

ಮೊನ್ನೆಯಷ್ಟೇ ಬೆಂಗಳೂರಿಗೆ ಆಗಮಿಸಿರುವ ಬಿ.ಎಲ್. ಸಂತೋಷ್ ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನ ಭೇಟಿಯಾಗಿದ್ದರು. ಇಂದು ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. 

click me!

Recommended Stories