ಬೇಡಿಕೆ ಈಡೇರಿಸಿ ಶ್ರೀಗಳನ್ನ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಸಿಎಂ ಬೊಮ್ಮಾಯಿ

First Published Aug 14, 2021, 6:12 PM IST

ಕನ್ನಡ ನಾಡಿನ ವೀರ ಪುರುಷ ಸಂಗೊಳ್ಳಿ ರಾಯಣ್ಣನವರ ಜನ್ಮದಿನವನ್ನು ಅಧಿಕೃತವಾಗಿ ಆಚರಿಸುವ ಬೇಡಿಕೆ ಇತ್ತು. ಈ ಬೇಡಿಕೆಯನ್ನು ಪರಿಗಣಿಸಿ ನಾಳೆ(ಆ.15)  ಸರ್ಕಾರಿ ಕಚೇರಿಗಳಲ್ಲಿ ಸಂಗೊಳ್ಳಿ ರಾಯಣ್ಣ ಜನ್ಮದಿನಾಚರಣೆ ಆಚರಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಿಡಿಸಿದೆ. ಈ ಆದೇಶ ಕಾರ್ಯಗತವಾಗಲಿದ್ದು ಅಧಿಕೃತವಾಗಿ ಸಂಗೊಳ್ಳಿ ರಾಯಣ್ಣ ಜನ್ಮದಿನಾಚರಣೆಯನ್ನು ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಈ ಹಿನ್ನೆಲೆಯಲ್ಲಿ ಕಾಗಿನೆಲೆ ಶ್ರೀಗಳಿಗೆ ಸಂಗೊಳ್ಳಿ ರಾಯಣ್ಣ ಹುಟ್ಟುಹಬ್ಬ ಆಚರಣೆಗೆ ಆಹ್ವಾನಿಸಿದರು. 

basavaraj bommai Meets Kaginele Shri

ಇಂದು (ಆ.14) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಮೈಸೂರು ರಸ್ತೆಯ ಕೆಂಗೇರಿ ಬಳಿ ಇರುವ ಕಾಗಿನೆಲೆ ಕನಕ ಗುರುಪೀಠದ ಶಾಖಾ ಮಠಕ್ಕೆ ಭೇಟಿ ನೀಡಿ ಕಾಗಿನೆಲೆ ಮಹಾಸಂಸ್ಥಾನ ಪೀಠದ ಜಗದ್ಗುರು ಶ್ರೀ ನಿರಂಜನಾನಂದ ಪುರಿ ಶ್ರೀಗಳ ಆಶೀರ್ವಾದ ಪಡೆದರು.

basavaraj bommai Meets Kaginele Shri

ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮಠದ ಸಿಬ್ಬಂದಿಗಳು ಸಾಂಪ್ರದಾಯಿಕ ಸ್ವಾಗತ ಕೋರಿದರು. ಬಳಿಕ ನಿರಂಜನಾನಂದ ಪುರಿ ಶ್ರೀಗಳು ಬೊಮ್ಮಾಯಿಗೆ ಕರಿ‌ಕಂಬಳಿ, ಫಲ ತಾಂಬೂಲ‌ ನೀಡಿ  ಸನ್ಮಾನ ಮಾಡಿದರು. ಸಿಎಂಗೆ ಸಚಿವರಾದ ಕೆಎಸ್ ಈಶ್ವರಪ್ಪ, ಎಂಟಿಬಿ ನಾಗರಾಜ್ ಸಾಥ್ ನೀಡಿದರು.

basavaraj bommai Meets Kaginele Shri

ನಾಳೆ(ಆ.15)  ಸರ್ಕಾರಿ ಕಚೇರಿಗಳಲ್ಲಿ ಸಂಗೊಳ್ಳಿ ರಾಯಣ್ಣ ಜನ್ಮದಿನಾಚರಣೆ ಆಚರಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಿಡಿಸಿದೆ. ಈ ಆದೇಶ ಕಾರ್ಯಗತವಾಗಲಿದ್ದು ಅಧಿಕೃತವಾಗಿ ಸಂಗೊಳ್ಳಿ ರಾಯಣ್ಣ ಜನ್ಮದಿನಾಚರಣೆಯನ್ನು ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಈ ಹಿನ್ನೆಲೆಯಲ್ಲಿ ಕಾಗಿನೆಲೆ ಶ್ರೀಗಳಿಗೆ ಸಂಗೊಳ್ಳಿ ರಾಯಣ್ಣ ಹುಟ್ಟುಹಬ್ಬ ಆಚರಣೆಗೆ ಆಹ್ವಾನಿಸಿದರು.

basavaraj bommai Meets Kaginele Shri

ಕನ್ನಡ ನಾಡಿನ ವೀರ ಪುರುಷ ಸಂಗೊಳ್ಳಿ ರಾಯಣ್ಣನವರ ಜನ್ಮದಿನವನ್ನು ಅಧಿಕೃತವಾಗಿ ಆಚರಿಸುವ ಬೇಡಿಕೆ ಇತ್ತು. ಈ ಬಗ್ಗೆ ಹಲವು ಪ್ರತಿಭಟನೆಗಳು ಸಹ ನಡೆದಿದ್ದು. ಇದೀಗ ಆ ಬೇಡಿಕೆಯನ್ನು ಬಸವರಾಜ ಬೊಮ್ಮಾಯಿ ಸರ್ಕಾರ ಈಡೇರಿಸಿದ್ದು, ಇದಕ್ಕೆ ನಿರಂಜನಾನಂದ ಪುರಿ ಶ್ರೀಗಳು ಸಂತಸ ವ್ಯಕ್ತಪಡಿಸಿದರು.

basavaraj bommai Meets Kaginele Shri

ಸಂಗೊಳ್ಳಿ ರಾಯಣ್ಣನವರ ಹುಟ್ಟುಹಬ್ಬ ಆಚರಣೆ ಮಾಡಬೇಕು ಅಂತಾ ಹೋರಾಟ ಮಾಡಿದ್ದೆವು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನಮ್ಮ ಬೇಡಿಕೆ ಈಡೇರಿಸಿದ್ದಕ್ಕೆ ಸಮಾಜದ ಪರ ಧನ್ಯವಾದ ತಿಳಿಸುತ್ತೇನೆ. ನಾನು ಕೂಡ ನಾಳೆ (ಆ.15) ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ. ಎಂದು ನಿರಂಜನಾನಂದ ಪುರಿ ಶ್ರೀ ಸಂಗೊಳ್ಳಿ ರಾಯಣ್ಣ ಜನ್ಮದಿನಾಚರಣೆಯ ಅಧಿಕೃತ ಘೋಷಣೆ ಕುರಿತು ಪ್ರತಿಕ್ರಿಯಿಸಿದರು.

click me!