ಬುಧವಾರ ಬಿಬಿಎಂಪಿ ಆಯುಕ್ತರು, ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಹಾಗೂ ಪಾಲಿಕೆ ಆರೋಗ್ಯ ವಿಭಾಗದ ವಿಶೇಷ ಆಯುಕ್ತರ ನೇತೃತ್ವದಲ್ಲಿ ನಗರದ 50 ರಿಂದ 100 ಹಾಸಿಗೆ ಸಾಮರ್ಥ್ಯವಿರುವ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ನಡೆದ ಸಭೆ

ಸಿಬ್ಬಂದಿ, ವೈದ್ಯರ ಸಮಸ್ಯೆಯಿಂದ ಕಡಿಮೆ ಪ್ರಮಾಣದಲ್ಲಿ ಹಾಸಿಗೆಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ. ಆಸ್ಪತ್ರೆ ಅನುಮತಿ ಪಡೆದಷ್ಟು ಹಾಸಿಗೆ ಬಳಕೆ ಮಾಡುತ್ತಿಲ್ಲ. ಹೀಗಾಗಿ, ಶೇ.50 ರಷ್ಟು ಹಾಸಿಗೆಗಳನ್ನು ಸರ್ಕಾರ ಮತ್ತು ಬಿಬಿಎಂಪಿಯಿಂದ ಶಿಫಾರಸು ಮಾಡುವ ಕೊರೋನಾ ಸೋಂಕಿತರಿಗೆ ಬಿಟ್ಟು ಕೊಡಲು ಸಾಧ್ಯವಾಗುತ್ತಿಲ್ಲ ಎಂಬುದು ಸೇರಿದಂತೆ ವಿವಿಧ ಸಮಸ್ಯೆ ಹೇಳಿಕೊಂಡ ಖಾಸಗಿ ಆಸ್ಪತ್ರೆಯ ಮುಖ್ಯಸ್ಥರು

ಇದಕ್ಕೆ ಸ್ಪಂದಿಸಿದ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಸದ್ಯಬಳಕೆ ಮಾಡುತ್ತಿರುವ ಹಾಸಿಗೆಯಲ್ಲಿ ಶೇ.50 ರಷ್ಟು ಹಾಸಿಗೆಯನ್ನು ಸರ್ಕಾರಕ್ಕೆ ಬಿಟ್ಟು ಕೊಡಿ. ಉಳಿದ ಹಾಸಿಗೆಗಳನ್ನು ತಾತ್ಕಾಲಿಕವಾಗಿ ಸೀಲ್ ಮಾಡಲಾಗುವುದು ಎಂದು ತಿಳಿಸಿದರು.

ಈ ಕುರಿತು ಪ್ರತಿಕ್ರಿಯೆ ನೀಡಿದ ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್, 50 ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲಾಗಿದೆ. ಈ ಆಸ್ಪತ್ರೆಗಳಲ್ಲಿ ಸೋಂಕಿತರ ಚಿಕಿತ್ಸೆಗೆ ಮೀಸಲಿಟ್ಟಹಾಸಿಗೆ, ಚಿಕಿತ್ಸೆ ಪಡೆಯುತ್ತಿರುವ ಸಂಖ್ಯೆಗಳ ವಿವರ ಪಡೆಯಲಾಯಿತು. ಸೀಲ್ ಮಾಡುವ ಹಾಸಿಗೆಗಳನ್ನು ಸರ್ಕಾರ ಮತ್ತು ಪಾಲಿಕೆಯ ಗಮನಕ್ಕೆ ತರದೆ, ಖಾಸಗಿ ಆಸ್ಪತ್ರೆಗಳು ಚಿಕಿತ್ಸೆಗೆ ಬಳಸಲು ಬರುವುದಿಲ್ಲ. ಹೀಗಾಗಿ, ಎಲ್ಲ ಆಸ್ಪತ್ರೆಗಳಿಂದ ಸಂಪೂರ್ಣ ಮಾಹಿತಿ ಕೇಳಿದ್ದೇವೆ. ಮಾಹಿತಿಯ ಆಧಾರದ ಮೇಲೆ ಮುಂದಿನ ಕ್ರಮ ಜರುಗಿಸಲಾಗುವುದು. ಉಳಿದಂತೆ ಕೆಲವು ಆಸ್ಪತ್ರೆಗಳು ವೈದ್ಯರ ಕೊರತೆ ಹಾಗೂ ಸಹಾಯಕ ಸಿಬ್ಬಂದಿ ಕೊರತೆ ಇರುವುದಾಗಿ ಹೇಳಿವೆ, ಈ ಬಗ್ಗೆಯೂ ಚರ್ಚೆ ನಡೆದಿದೆ ಎಂದರು.

ನಗರದ 90 ಖಾಸಗಿ ಆಸ್ಪತ್ರೆಗಳು ಶೇ.50 ರಷ್ಟು ಹಾಸಿಗೆಗಳನ್ನು ಕೊರೋನಾ ಸೋಂಕಿತರ ಚಿಕಿತ್ಸೆಗೆಂದು ನೀಡಿವೆ. ಸದ್ಯ ಪಾಲಿಕೆಗೆ ಐದು ಸಾವಿರ ಹಾಸಿಗೆಗಳು ಕೊರೋನಾ ಸೋಂಕಿತರ ಚಿಕಿತ್ಸೆಗೆ ಲಭ್ಯವಾಗಿದೆ. ಬುಧವಾರ ನಡೆದ ಸಭೆಯಲ್ಲಿ ಭಾಗಿಯಾಗಿದ್ದ 50 ಖಾಸಗಿ ಆಸ್ಪತ್ರೆಗಳಿಂದ 500 ಹಾಸಿಗೆಗಳು ಲಭ್ಯವಾಗಬೇಕಿದ್ದು, ಈಗಾಗಲೇ ಕೊರೋನಾ ಸೋಂಕಿತರ ಚಿಕಿತ್ಸೆಗೆ ಹಾಸಿಗೆ ಮೀಸಲಿಟ್ಟಿದ್ದರೆ ಎಷ್ಟುಮೀಸಲಿಡಲಾಗಿದೆ ಎಂಬ ವಿವರ ನೀಡುವಂತೆ ತಿಳಿಸಲಾಗಿದೆ ಎಂದು ವಿವರಿಸಿದರು.