ಹೆಣ್ಣೂರು, ಕೆ.ಆರ್.ಪುರ ಸೇರಿದಂತೆ ಇನ್ನಿತರ ಮಳೆ ಹಾನಿ ಪ್ರದೇಶಗಳಿಗೆ ಪರಿಶೀಲನೆ ನಡೆಸಿದ ಆಯುಕ್ತ ಗೌತಮ್ ಕುಮಾರ್
ಮಂಗಳವಾರ ಸುರಿದ ಮಳೆಯಿಂದ ಸುಮಾರು 200 ಮನೆಗಳಿಗೆ ನೀರು ನುಗ್ಗಿದೆ. ಬೆಂಗಳೂರಿನಲ್ಲಿ ಇನ್ನೂ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಕ್ಷಣಾ ಕಾರ್ಯಗಳು ನಡೆಯುತ್ತಿವೆ ಎಂದು ತಿಳಿಸಿದ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್
ನಗರದ ಅನೇಕ ಕಡೆ ಅಪಾರ್ಟ್‌ಮೆಂಟ್‌ಗಳ ಅನಧಿಕೃತವಾಗಿ ಕೊಳಚೆ ನೀರನ್ನು ರಾಜಕಾಲುವೆಗೆ ಹರಿಬಿಡಲು ಕೊಳವೆ ಹಾಕಲಾಗಿದೆ.
ಕೊಳವೆಗಳ ಮೂಲಕ ನೀರು ಅಪಾರ್ಟ್‌ಮೆಂಟ್‌ಗಳಿಗೆ ನುಗ್ಗಿದೆ. ಇನ್ನು ಹಲವು ಕಡೆ ರಾಜಕಾಲುವೆ, ನೀರುಗಾಲುವೆಗಳನ್ನು ಒತ್ತುವರಿ ಮಾಡಿಕೊಂಡ ಪರಿಣಾಮ ಸಮಸ್ಯೆ ಆಗುತ್ತಿದೆ. ಹಾಗಾಗಿ, ಒತ್ತುವರಿ ತೆರವಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.