ಕೊರೋನಾ ಕಾಟ: 'ಕೆ.ಆರ್‌.ಮಾರುಕಟ್ಟೆ ಶೀಘ್ರ ಪುನಾರಾಂಭ'

First Published | Aug 24, 2020, 7:56 AM IST

ಬೆಂಗಳೂರು(ಆ.24): ಕೊರೋನಾ ಸೋಂಕು ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಬಂದ್‌ ಮಾಡಿರುವ ಕೆ.ಆರ್‌.ಮಾರುಕಟ್ಟೆ ಈ ಮಾಸಾಂತ್ಯದ ವೇಳೆಗೆ ಪುನಾರಂಭವಾಗುವ ಸಾಧ್ಯತೆಯಿದೆ.

ಭಾನುವಾರ ಕೆ.ಆರ್‌.ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಿಬಿಎಂಪಿ ಮೇಯರ್‌ ಗೌತಮ್‌ ಕುಮಾರ್‌
undefined
ಕೊರೋನಾ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಚ್ಚಲಾಗಿರುವ ಕೆ.ಆರ್‌.ಮಾರುಕಟ್ಟೆಯನ್ನು ಈ ಮಾಸಾಂತ್ಯದ ವೇಳೆಗೆ ತೆರೆಯಲು ಸರ್ಕಾರ ಅನುಮತಿ ನೀಡುವ ಸಾಧ್ಯತೆಯಿದೆ. ಇದಕ್ಕೂ ಮುನ್ನ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಮೇಯರ್‌ ಗೌತಮ್‌ ಕುಮಾರ್‌
undefined

Latest Videos


ಜಲಮಂಡಳಿಯಿಂದ ಕೆ.ಆರ್‌.ಮಾರುಕಟ್ಟೆ ಬಳಿ ಕೈಗೊಂಡಿರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ರಸ್ತೆ ಮಾರ್ಗದಲ್ಲಿ ಬಿದ್ದಿರುವ ತ್ಯಾಜ್ಯವನ್ನು ಕೂಡಲೇ ತೆರವುಗೊಳಿಸಬೇಕು. ಮಾರುಕಟ್ಟೆಯಲ್ಲಿ ಸ್ವಚ್ಛತೆ ಕಾಪಾಡಬೇಕು. ಮಾರುಕಟ್ಟೆಗೆ ಸೋಂಕು ನಿವಾರಕ್ಕೆ ಔಷಧಿ ಸಿಂಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
undefined
ಸ್ಮಾರ್ಟ್‌ ಸಿಟಿ ಯೋಜನೆಯಡಿ ಕೈಗೊಂಡಿರುವ ಟೆಂಡರ್‌ ಶ್ಯೂರ್‌ ಮಾದರಿಯ ಕಾಮಗಾರಿಗಳನ್ನು ಮೇಯರ್‌ ಗೌತಮ್‌ ಕುಮಾರ್‌, ಸಂಸದ ಪಿ.ಸಿ.ಮೋಹನ್‌ ಪರಿಶೀಲಿಸಿದರು. ಕಾಮಗಾರಿ ಸ್ಥಳದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳದ್ದಕ್ಕೆ ಬೇಸರ ವ್ಯಕ್ತಪಡಿಸಿದರು.
undefined
click me!