ಕೊರೋನಾ ಕಾಟ: ಬೆಡ್‌ ಲಭ್ಯತೆ ಬಗ್ಗೆ ಡಿಜಿಟಲ್‌ ಬೋರ್ಡ್‌ ಹಾಕಿ, ಮೇಯರ್‌

Kannadaprabha News   | Asianet News
Published : Aug 07, 2020, 08:07 AM IST

ಬೆಂಗಳೂರು(ಆ.07):  ಕೊರೋನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಮೀಸಲಿಟ್ಟಶೇ.50 ರಷ್ಟು ಹಾಸಿಗೆಯಲ್ಲಿ ಎಷ್ಟು ಹಾಸಿಗೆ ಭರ್ತಿಯಾಗಿವೆ, ಎಷ್ಟು ಹಾಸಿಗೆ ಖಾಲಿ ಇವೆ ಎಂಬುದರ ಬಗ್ಗೆ ಮಾಹಿತಿಯನ್ನು ಡಿಜಿಟಲ್‌ ಬೋರ್ಡ್‌ ಮೂಲಕ ಪ್ರದರ್ಶಿಸುವಂತೆ ಖಾಸಗಿ ಆಸ್ಪತ್ರೆಗಳಿಗೆ ಮೇಯರ್‌ ಗೌತಮ್‌ ಕುಮಾರ್‌ ಸೂಚಿಸಿದ್ದಾರೆ.  

PREV
14
ಕೊರೋನಾ ಕಾಟ: ಬೆಡ್‌ ಲಭ್ಯತೆ ಬಗ್ಗೆ ಡಿಜಿಟಲ್‌ ಬೋರ್ಡ್‌ ಹಾಕಿ, ಮೇಯರ್‌

ಗುರುವಾರ ನಗರದ ಸೇಂಟ್‌ ಮಾರ್ಥಾಸ್‌, ವಿಕ್ರಮ್‌, ಆಸ್ಟರ್‌ ಸಿಎಂಐ ಖಾಸಗಿ ಆಸ್ಪತ್ರೆಗಳಿಗೆ ಅನಿರೀಕ್ಷಿತ ಭೇಟಿ ಮಾಡಿ ಪರಿಶೀಲನೆ ನಡೆಸಿದ ಬಿಬಿಎಂಪಿ ಮೇಯರ್‌ ಗೌತಮ್‌ ಕುಮಾರ್‌ 

24

ಖಾಸಗಿ ಆಸ್ಪತ್ರೆಯಲ್ಲಿ ಹಾಸಿಗೆ ಸಾಮರ್ಥ್ಯ, ಭರ್ತಿಯಾದ ಹಾಗೂ ಲಭ್ಯವಿರುವ ಹಾಸಿಗೆಗಳ ಬಗ್ಗೆ ತಕ್ಷಣದ (ರಿಯಲ್‌ ಟೈಮ್‌) ಮಾಹಿತಿ ನೀಡಲು ಡಿಜಿಟಲ್‌ ಬೋರ್ಡ್‌ ಅಳವಡಿಸಬೇಕು. ಜತೆಗೆ ಸರ್ಕಾರದ ನಿಯಮದಂತೆ ಖಾಸಗಿ ಆಸ್ಪತ್ರೆಗಳು ಶೇ.50 ರಷ್ಟು ಹಾಸಿಗೆ ಕೊಡದಿದ್ದಲ್ಲಿ, ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ ಮೇಯರ್‌

34

ಕೊರೋನಾ ಸೋಂಕಿಗೆ ಚಿಕಿತ್ಸೆ ಹಾಗೂ ಸೋಂಕಿತರ ಆರೋಗ್ಯ ಮಾಹಿತಿಯನ್ನು ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲು ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ನಾಗರಿಕ ಸಹಾಯ ಕೇಂದ್ರ ಆರಂಭಿಸಲಾಗುತ್ತಿದೆ. ಕೂಡಲೇ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಗೆ ಸೂಚಿಸಿದರು.

44

ತಪಾಸಣೆ ವೇಳೆ ಉಪ ಮೇಯರ್‌ ರಾಮಮೋಹನ ರಾಜು, ಆಡಳಿತ ಪಕ್ಷದ ನಾಯಕ ಮುನೀಂದ್ರ ಕುಮಾರ್‌, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಜಿ. ಮಂಜುನಾಥ್‌ ರಾಜು, ಮುಖ್ಯಆರೋಗ್ಯ ಅಧಿಕಾರಿ ಡಾ.ವಿಜೇಂದ್ರ ಮೊದಲಾದವರು ಉಪಸ್ಥಿತರಿದ್ದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories