ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಗೂಡ್ಸ್‌ ಗಾಡಿ: ಇಬ್ಬರೂ ಸ್ಥಳದಲ್ಲೇ ಸಾವು, ನೂರಾರು ಕೋಳಿಗಳ ಮಾರಣಹೋಮ

Published : Apr 21, 2026, 09:25 AM ISTUpdated : Apr 21, 2026, 10:10 AM IST

ಬೆಳಗಾವಿ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಟ್ರಕ್‌ಗೆ ಕೋಳಿ ಸಾಗಿಸುತ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕನ ಸ್ಥಿತಿ ಗಂಭೀರವಾಗಿದೆ. ಅಪಘಾತದ ರಭಸಕ್ಕೆ ನೂರಾರು ಕೋಳಿಗಳು ಸಹ ಮೃತಪಟ್ಟಿವೆ.

PREV
15

ಬೆಳಗಾವಿ ನಗರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿಂತಿದ್ದ ಟ್ರಕ್‌ಗೆ ಕೋಳಿ ಸಾಗಾಣಿಕೆ ಮಾಡ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಈ ದುರಂತ ಸಂಭವಿಸಿದೆ.

25

ಬೆಳಗಾವಿ ನಗರದ ಯಡಿಯೂರಪ್ಪ ಮಾರ್ಗದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದ್ದು, ಬೆಳಗಿನ ಜಾವ ನಿದ್ರೆಯ ಮಂಪರಿನಲ್ಲಿದ್ದ ಚಾಲಕ ನಿಯಂತ್ರಣ ತಪ್ಪಿ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

35

ಅಪಘಾತದ ರಭಸಕ್ಕೆ ಚಾಲಕನ ಪಕ್ಕದಲ್ಲಿದ್ದ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದರೆ, ಚಾಲಕನ ಸ್ಥಿತಿ ಗಂಭೀರವಾಗಿದೆ. ಅಪಘಾತದಿಂದಾಗಿ ವಾಹನವೂ ನಜ್ಜುಗುಜ್ಜಾಗಿದ್ದು, ವಾಹನದೊಳಗಿನಿಂದ ಗಾಯಾಳು ಹಾಗೂ ಮೃತಪಟ್ಟವರನ್ನು ಹೊರತೆಗೆದು ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.

45

ಅಪಘಾತಕ್ಕೀಡಾದ ಈ ಗೂಡ್ಸ್ ಗಾಡಿ ಕೊಲ್ಲಾಪುರದಿಂದ ಶಿವಮೊಗ್ಗದ ಸೊರಬಕ್ಕೆ ಹೋಗ್ತಿತ್ತು. ಕೋಳಿ ತುಂಬಿಸಿಕೊಂಡು ಹೋಗುತ್ತಿದ್ದ ಈ ಲಾರಿ ಡಿಕ್ಕಿ ಹೊಡೆದ ಪರಿಣಾಮ ನೂರಾರು ಕೋಳಿಗಳು ಕೂಡ ಸಾವನ್ನಪ್ಪಿವೆ.

55

ಘಟನಾ ಸ್ಥಳಕ್ಕೆ ಹಿರೇಬಾಗೆವಾಡಿ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಿರೇಬಾಗೆವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ಸೊರಬ ನಿವಾಸಿ ವಾಸೀಂ, ಶಿವಮೊಗ್ಗದ ಕುಕ್ಕಪೇಟೆ ನಿವಾಸಿ ಮುಬಾರಕ್ ಎಂದು ಗುರುತಿಸಲಾಗಿದ್ದು, ಗಾಯಾಳು ಚಾಲಕನನ್ನು ಶಿಕಾರಿಪುರ ತಾಲೂಕಿನ ಮುಗಳಿಕೊಪ್ಪ ಗ್ರಾಮದ ಈರಪ್ಪ ಹಂಚಿನಮನಿ ಎಂದು ಗುರುತಿಸಲಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories