ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾದ ಮಹಿಳೆಯರ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಳಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಕೆಆರ್ ಪುರಂ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 571 ಗ್ರಾಂ ಚಿನ್ನ ಮತ್ತು 25 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ.
ಮಹಿಳೆಯರ ನ*ಗ್ನ ಫೋಟೋ ಮತ್ತು ಖಾಸಗಿ ವಿಡಿಯೋಗಳನ್ನಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಕೆಆರ್ ಪುರಂ ಪೊಲೀಸರು ಬಂಧಿಸಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಮಹಿಳೆಯರನ್ನು ಇವರು ಪರಿಚಯ ಮಾಡಿಕೊಳ್ಳುತ್ತಿದ್ದರು.
25
ಚೆನ್ನೂರು ಮಹೇಶ್, ವನ್ನೂರು ಸ್ವಾಮಿ
ಮಹಿಳೆಯ ದೂರು ಆಧರಿಸಿ ಆಂಧ್ರಪ್ರದೇಶ ಮೂಲದ ಚೆನ್ನೂರು ಮಹೇಶ್, ವನ್ನೂರು ಸ್ವಾಮಿ ಎಂಬವರನ್ನು ಕೆಆರ್ ಪುರಂ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು ವಿವಾಹಿತ ಮಹಿಳೆಗೆ ಇಬ್ಬರು ಬೆದರಿಕೆ ಹಾಕುತ್ತಿದ್ದರು ಎಂದು ತಿಳಿದು ಬಂದಿ
35
ಒಂದೂವರೆ ವರ್ಷದ ಹಿಂದೆ ಪರಿಚಯ
ಒಂದೂವರೆ ವರ್ಷದ ಹಿಂದೆ ಮಹಿಳೆಗೆ ಸ್ನ್ಯಾಪ್ ಚಾಟ್ ಮೂಲಕ ಆರೋಪಿಗಳು ಪರಿಚಯವಾಗಿದ್ದರು. ನಂತರ ಪರಸ್ಪರ ಮೊಬೈಲ್ ನಂಬರ್ ಬದಲಾಯಿಸಿಕೊಂಡು ಮಾತುಕತೆ ಆರಂಭಿಸಿದ್ದರು. ವಾಟ್ಸಪ್ ವಿಡಿಯೋ ಕಾಲಿಂಗ್ ವೇಳೆ ಸ್ಕ್ರೀನ್ ಶಾಟ್ ತಗೆದಿಟ್ಟುಕೊಂಡಿದ್ದರು.
ಈ ಸ್ಕ್ರೀನ್ ಶಾಟ್‌ಗಳನ್ನು ತೋರಿಸಿ ನಿನ್ನ ಗಂಡ, ಫ್ಯಾಮಿಲಿ, ಸೋಷಿಯಲ್ ಮಿಡೀಯಾದಲ್ಲಿ ಫೊಟೋ, ವಿಡಿಯೋ ಪೋಸ್ಟ್ ಮಾಡಿಕೊಳ್ಳುತ್ತವೆ. ಫೋಟೋ, ವಿಡಿಯೋಗಳು ಲೀಕ್ ಆಗಬಾರದು ಅಂದ್ರೆ ಕೇಳಿದಷ್ಟು ಹಣ ನೀಡಬೇಕೆಂದು ಡಿಮ್ಯಾಂಡ್ ಮಾಡಿದ್ದರು. ಆರೋಪಿಗಳು ಬ್ಲ್ಯಾಕ್ ಮೇಲ್ ಮಾಡಿ ಹಂತಹಂತವಾಗಿ ಚಿನ್ನಾಭರಣ, ಹಣ ಪಡೆದುಕೊಂಡಿದ್ದರು.
ಆರೋಪಿಗಳು ಪದೇ ಪದೇ ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದರು. ಇದರಿಂದ ಬೇಸತ್ತ ಮಹಿಳೆ ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಬಂಧಿತರಿಂದ 571 ಗ್ರಾಂ ಚಿನ್ನಾಭರಣ ಮತ್ತು 25 ಲಕ್ಷ ನಗದು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳ ಮೊಬೈಲ್ ನಲ್ಲಿ ಹಲವು ಮಹಿಳೆಯರು, ಯುವತಿಯರ ಫೋಟೋ, ವಿಡಿಯೋಗಳ ಪತ್ತೆಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ