Published : Mar 06, 2025, 12:39 PM ISTUpdated : Mar 06, 2025, 08:21 PM IST
Tejasvi Surya Marriage: ಬಿಜೆಪಿ ಯುವ ಘಟಕದ ಅಧ್ಯಕ್ಷ ತೇಜಸ್ವಿ ಸೂರ್ಯ ಮತ್ತು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರ ವಿವಾಹವು ಬೆಂಗಳೂರಿನಲ್ಲಿ ನೆರವೇರಿತು. ಈ ಸಮಾರಂಭದಲ್ಲಿ ರಾಜಕೀಯ ಗಣ್ಯರು ಮತ್ತು ಕುಟುಂಬ ಸದಸ್ಯರು ಭಾಗವಹಿಸಿದ್ದರು.
ಬಿಜೆಪಿ ಯುವ ಘಟಕದ ಅಧ್ಯಕ್ಷ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮತ್ತು ತಮಿಳುನಾಡಿನ ಖ್ಯಾತ ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಮದುವೆ ನಡೆದಿದೆ. ಬೆಂಗಳೂರಿನ ಹೆಸರಘಟ್ಟ ರೆಸಾರ್ಟ್‌ನಲ್ಲಿ ಇಬ್ಬರ ಮದುವೆ ಸಂಪ್ರದಾಯಬದ್ಧವಾಗಿ ನಡೆದಿದೆ.
212
ಇಂದು ಬೆಳಗ್ಗೆ ಶುಭ ಮುಹೂರ್ತ 10.45ರ ತುಲಾ ಲಗ್ನದಲ್ಲಿ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಅವರ ಮದುವೆ ನಡೆದಿದೆ. ಇಂದು ಸಂಜಯೇ ಬೆಂಗಳೂರಿನ ಗಿರಿನಗರದಲ್ಲಿರುವ ನಿವಾಸದಲ್ಲಿ ಮನೆ ತುಂಬಿಸಿಕೊಳ್ಳುವ ಶಾಸ್ತ್ರ ನಡೆಯಲಿದೆ.
312
ಬುಧವಾರ ಸಂಜೆಯಿಂದಲೇ ರೆಸಾರ್ಟ್‌ನಲ್ಲಿ ವರಪೂಜೆ ಸೇರಿದಂತೆ ವಿವಿಧ ಮದುವೆ ಶಾಸ್ತ್ರಗಳು ಅರಂಭಗೊಂಡಿದ್ದವು. ಮದುವೆಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ, ಸಂಸದ ಸಿಎನ್ ಮಂಜುನಾಥ್, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ, ವಿನಯ್ ಗುರೂಜಿ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ರಾಜಕೀಯ ಮತ್ತು ರಾಜಕೀಯೇತರ ಮುಖಂಡರು ಭಾಗವಹಿಸಿದ್ದರು.
412
ಮದುವೆಗೆ ಎರಡು ಕುಟುಂಬದ ಆಪ್ತ ಸದಸ್ಯರು ಮತ್ತು ಅತ್ಯಾಪ್ತ ರಾಜಕೀಯ ಗಣ್ಯರಿಗೆ ಆಹ್ವಾನಿಸಲಾಗಿತ್ತು. ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದ ಪ್ರಸಾದ್ ವೈವಾಹಿಕ ಜೀವನಕ್ಕೆ ಕಾಲಿಟಿದ್ದಾರೆ.
512
ಪ್ರತಾಪ್ ಸಿಂಹ ಪೋಸ್ಟ್
ಮಾಜಿ ಸಂಸದ ಪ್ರತಾಪ್ ಸಿಂಹ ಕುಟುಂಬ ಸಮೇತರಾಗಿ ಗೆಳೆಯ ತೇಜಸ್ವಿ ಸೂರ್ಯ ಮದುವೆಗೆ ಆಗಮಿಸಿದ್ದು, ತಮ್ಮ ಎಕ್ಸ್ ಖಾತೆಯಲ್ಲಿ ಗಣ್ಯರೊಂದಿಗೆ ಕ್ಲಿಕ್ಕಿಸಿಕೊಂಡಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನವಜೋಡಿಗೆ ಪ್ರತಾಪ್ ಸಿಂಹ ಶುಭ ಹಾರೈಸಿದ್ದಾರೆ.
612
ಮಾರ್ಚ್ 9ರಂದು ಅದ್ಧೂರಿಯಾಗಿ ಬೆಂಗಳೂರಿನ ಅರಮನೆ ಮೈದಾನದ ಗಾಯಿತ್ರಿ ವಿಹಾರದಲ್ಲಿ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದ ಪ್ರಸಾದ್ ಆರತಕ್ಷತೆ ನಡೆಯಲಿದೆ. ಈ ವೇಳೆ ರಾಜ್ಯ-ದೇಶದ ರಾಜಕೀಯ ಗಣ್ಯರು ಭಾಗಿಯಾಗಲಿದ್ದಾರೆ.
712
ಬೆಂಗಳೂರಲ್ಲಿ ನಡೆದ ಏರೋ ಶೋಗೂ ಸಹ ಭಾವೀ ಪತ್ನಿಯೊಂದಿಗೆ ಸಂಸದ ತೇಜಸ್ವಿ ಸೂರ್ಯ ಆಗಮಿಸಿದ್ದರು. ನಂತರ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದರು. ಆರ್ಟ್ ಆಫ್ ಲಿವಿಂಗ್‌ನಲ್ಲಿ ನಡೆದ ಕಾರ್ಯಕ್ರಮದ ವೇಳೆ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದರು.
812
Tejasvi Surya Marriage
ಆಯೋಧ್ಯೆ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಶಿವಶ್ರೀ ಸ್ಕಂದ ಪ್ರಸಾದ್ ಅವರು ಹಾಡಿದ ರಾಮನ ಕುರಿತ ಗೀತೆಯನ್ನು ಮೆಚ್ಚಿ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.
912
ಯಾರು ಈ ಶಿವಶ್ರೀ?
ತಮಿಳುನಾಡು ಮೂಲದ ಶಿವಶ್ರೀ ಅವರು ಗಾಯನವಲ್ಲದೆ ಭರತನಾಟ್ಯ ಕಲಾವಿದೆ ಕೂಡ ಹೌದು. ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಪದವಿಯನ್ನೂ ಗಳಿಸಿದ್ದಾರೆ. ಆಯೋಧ್ಯೆ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಶಿವಶ್ರೀ ಅವರು ಹಾಡಿದ ರಾಮನ ಕುರಿತ ಗೀತೆಯನ್ನು ಮೆಚ್ಚಿ ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.
1012
ಸಂಸದ ತೇಜಸ್ವಿ ಸೂರ್ಯ ಮದುವೆ ಕರ್ನಾಟಕ ಮತ್ತು ತಮಿಳು ಸಂಪ್ರದಾಯದಂತೆ ಅದ್ಧೂರಿಯಾಗಿ ನಡೆದಿದೆ. ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮದುವೆಗೆ ಆಗಮಿಸಿ ನವಜೋಡಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
1112
ಗಾಯಕಿ ಮತ್ತು ಭರತನಾಟ್ಯ ಪ್ರವೀಣೆಯಾಗಿರುವ ಶಿವಶ್ರೀ ಸ್ಕಂದಪ್ರಸಾದ್ ಬಹುಮುಖ ಪ್ರತಿಭೆ. ಚಿತ್ರಕಲೆ ಮತ್ತು ಮಾಡೆಲಿಂಗ್ ಅಂದ್ರೆ ಶಿವಶ್ರೀ ಅವರಿಗೆ ಇಷ್ಟ. ಕೆಲವು ವೇದಿಕೆಗಳಲ್ಲಿ ಮಾಡೆಲಿಂಗ್ ಸಹ ಮಾಡಿದ್ದಾರೆ. ತಮಿಳಿನ ಸೂಪರ್ ಹಿಟ್ ಸಿನಿಮಾ ಪೊನ್ನಿಯಿನ್ ಸೆಲ್ವನ್ ಹಾಡುಗಳಿಗೆ ಶಿವಶ್ರೀ ಧ್ವನಿಯಾಗಿದ್ದಾರೆ.
1212
ಭಾರತದ ರಾಜಕಾರಣದಲ್ಲಿ ಉನ್ನತ ಸ್ಥಾನಕ್ಕೆ ತಲುಪುವ ಭರವಸೆ ನಾಯಕನೆಂದು ಖ್ಯಾತಿ ಆಗಿರುವ ಬಿಜೆಪಿ ನಾಯಕ ತೇಜಸ್ವಿ ಸೂರ್ಯ ಅವರು ಸತತ 2ನೇ ಸಂಸದರಾಗಿ ಆಯ್ಕೆ ಆಗಿದ್ದಾರೆ.