ಕೊರೋನಾ ವೈರಸ್ ಭೀತಿಯಿಂದಾಗಿ ಇತರೆ ರೋಗಿಗಳಿಗೆ ಸೂಕ್ತವಾದ ಚಿಕಿತ್ಸೆ ದೊರೆಯುತ್ತಿಲ್ಲ ಎಂಬ ದೂರುಗಳು ವರದಿಯಾಗಿವೆ. ಪ್ರಮುಖವಾಗಿ ಗರ್ಭಿಣಿ ಮಹಿಳೆಯರನ್ನು ಆಸ್ಪತ್ರೆಗಳಗೆ ಸೇರಿಸಿಕೊಳ್ಳುತ್ತಿಲ್ಲ ಎಂಬ ಆರೋಪವೂ ಇದೆ. ಇಂತಹ ಸಂಕಷ್ಟದ ಸನ್ನಿವೇಶದಲ್ಲೂ ಬೆಂಗಳೂರಿನ ವಾಣಿ ವಿಲಾಸ ಮತ್ತು ವಿಕ್ಟೋರಿಯಾ ಆಸ್ಪತ್ರೆ ವಿಶೇಷವಾದ ಮೈಲಿಗಲ್ಲು ಸಾಧಿಸಿದೆ.