ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಎ.ಕೆ.ನಾಗೇಂದ್ರಪ್ಪ ಹಾಗೂ ಮಧ್ಯವರ್ತಿಯೊಬ್ಬರು ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 1 ಲಕ್ಷ ರೂ. ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಇಬ್ಬರೂ ಸಿಕ್ಕಿಬಿದ್ದಿದ್ದಾರೆ.
ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯೊಬ್ಬರು ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲಂಚ ಪಡೆಯುವ ವೇಳೆ ಬಿಇಒ ಹಾಗೂ ಮಧ್ಯವರ್ತಿ ಇಬಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
25
ಲೋಕಾಯುಕ್ತ ಬಲೆಗೆ ಬಿದ್ದಿರುವ ಮಧ್ಯವರ್ತಿ ಮಂಜುನಾಥ
ಭದ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಬರೋಬ್ಬರಿ ಒಂದು ಲಕ್ಷ ರೂಪಾಯಿ ಲಂಚ ಪಡೆಯುವಾಗ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಕ್ಷೇತ್ರ ಶಿಕ್ಷಣಾಧಿಕಾರಿಯನ್ನು ಬಂಧಿಸಿದ್ದಾರೆ.
35
ಬಿಇಒ ಕಚೇರಿಯ ಅಧೀಕ್ಷಕ ಲಿಂಗರಾಜು ದೂರು
ಭದ್ರಾವತಿ ಬಿಇಒ ಎ.ಕೆ.ನಾಗೇಂದ್ರಪ್ಪ ಮತ್ತು ಮಧ್ಯವರ್ತಿ ಮಂಜುನಾಥ ಲೋಕಾಯುಕ್ತ ಬಲೆಗೆ ಬಿದ್ದವರು. ಭದ್ರಾವತಿ ಬಿಇಒ ಕಚೇರಿಯ ಅಧೀಕ್ಷಕ ಲಿಂಗರಾಜು ಎಂಬುವರು ಇವರ ವಿರುದ್ಧ ಲೋಕಾಯುಕ್ತಗೆ ದೂರು ನೀಡಿದ್ದ
ಲಿಂಗರಾಜು ಅವರಿಗೆ 2011ರಿಂದ 2023ವರೆಗೆ ಇಲಾಖೆಯಿಂದ ನ್ಯಾಯವಾಗಿ ಬರಬೇಕಾಗಿದ್ದ ವಾರ್ಷಿಕ ವೇತನ ಬಡ್ತಿಗಳು ಮತ್ತು ಇತರ ಭತ್ಯೆಗಳು ಸೇರಿ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಕ್ಕೆ ಈ ಅಧಿಕಾರಿಗಳು ಲಂಚಕ್ಕೆ ಪೀಡಿಸಿದ್ದರು.
ಲಿಂಗರಾಜು ಅವರಿಗೆ ಅವರು ಸಲ್ಲಿಸಿದ್ದ ಸೇವೆಗಾಗಿ ಬರಬೇಕಾಗಿದ್ದ ಈ ಆರ್ಥಿಕ ಸವಲತ್ತುಗಳನ್ನು ಪಡೆಯುವುದಕ್ಕೆ ಬಿಇಒ ನಾಗೇಂದ್ರಪ್ಪ ಮತ್ತು ಮಧ್ಯವರ್ತಿ ಮಂಜುನಾಥ 4 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹೀಗಾಗಿ
ಈ ಬಗ್ಗೆ ಲಿಂಗರಾಜು ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಹೀಗಾಗಿ ಪ್ಲಾನ್ ಮಾಡಿ ಶಿವಮೊಗ್ಗ ಲೋಕಾಯುಕ್ತ ಎಸ್‌ಪಿ ಎಂ.ಎಸ್.ಕೌಲಾಪೂರೆ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಬಿ.ಪಿ.ಚಂದ್ರಶೇಖರ್ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳು 1 ಲಕ್ಷ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬೀಳುವಂತೆ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ