ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಭೇಟಿ ಮಾಡಿದ ಸಾಫ್ಟ್‌ವೇರ್ ಎಂಜಿನಿಯರ್ಸ್ ನಿಯೋಗ ಹುಬ್ಬಳ್ಳಿ ಧಾರವಾಡ ಸಾಫ್ಟ್‌ವೇರ್ ಸಂಸ್ಥೆಗಳ ಸ್ಥಾಪನೆಗೆ ಕ್ರಮ ಜರುಗಿಸುವಂತೆ ಮನವಿ ಮಾಡಿತು.
ಬೆಂಗಳೂರು ಸೇರಿದಂತೆ ದೇಶದ ಇತರೆ ನಗರದಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. 10 ಲಕ್ಷಕ್ಕೂ ಅಧಿಕ ಇಂಜಿನಿಯರ್ ಗಳು ಬೇರೆಡೆ ಕೆಲಸ ಮಾಡುತ್ತಿದ್ದು, ಹುಬ್ಬಳ್ಳಿಯಲ್ಲೇ ಸಂಸ್ಥೆಗಳನ್ನು ಸ್ಥಾಪಿಸಿ ಎಂದು ಮನವಿಯಲ್ಲಿ ತಿಳಿಸಿದ್ದು, ಇದಕ್ಕೆ ಸಚಿವರು ಸೂಕ್ತವಾಗಿ ಸ್ಪಂದಿಸಿದರು.