ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ಸರ್ಕಾರಿ ಕೋಟಾದಡಿ ಶೇ.50ರಷ್ಟು ಹಾಸಿಗೆ ಉಸ್ತುವಾರಿಗೆ ಹಾಗೂ ನಿಗಾ ವಹಿಸುವುದಕ್ಕೆ ಸರ್ಕಾರ ನೇಮಿಸಿದ ಹಿರಿಯ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳು ಮತ್ತು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಅವರೊಂದಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯಭಾಸ್ಕರ್ ಸಭೆ ನಡೆಸಿದರು.
undefined
ಈ ವೇಳೆ ಖಾಸಗಿ ಆಸ್ಪತ್ರೆಯಲ್ಲಿ ಶೇ.50 ರಷ್ಟು ಹಾಸಿಗೆಯನ್ನು ಬಿಬಿಎಂಪಿ ಅಥವಾ ಸರ್ಕಾರ ಶಿಫಾರಸು ಮಾಡುವ ಸೋಂಕಿತರಿಗೆ ನೀಡಲಾಗುತ್ತಿದೆಯೇ ಹಾಗೂ ತೀವ್ರ ನಿಗಾ ಘಟಕದ ಹಾಸಿಗೆಗಳ ವ್ಯವಸ್ಥೆ, ಲಭ್ಯವಿರುವ ಹಾಸಿಗೆಗಳ ಸಂಖ್ಯೆ ಮತ್ತೊಮ್ಮೆ ಖಚಿತ ಪಡಿಸಿಕೊಳ್ಳುವಂತೆ ಸೂಚನೆ ನೀಡಿದರು.
undefined
ಸರ್ಕಾರ ಶಿಫಾರಸು ಮಾಡುವ ಸೋಂಕಿತರಿಂದ ಖಾಸಗಿ ಆಸ್ಪತ್ರೆಗಳು ಯಾವುದೇ ಕಾರಣಕ್ಕೂ ಹಣ ಪಡೆಯಬಾರದು. ಇದೇ ರೀತಿ ನೇರವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗುವ ಸೋಂಕಿತರಿಗೂ ಸರ್ಕಾರ ನಿಗದಿ ಮಾಡಿರುವ ಮೊತ್ತವೇ ಪಡೆಯಬೇಕು. ಒಂದೊಮ್ಮೆ ಈ ನಿಯಮ ಉಲ್ಲಂಘನೆಯಾಗುತ್ತಿದ್ದರೆ, ಪಾಲಿಕೆಗೆ ವರದಿ ಮಾಡಿ ಆಯುಕ್ತರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಸೂಚಿಸಿದರು.
undefined
ಸಭೆಯಲ್ಲಿ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್, ಬಿಬಿಎಂಪಿ (ಘನತ್ಯಾಜ್ಯ ನಿರ್ವಹಣೆಯ) ವಿಶೇಷ ಆಯುಕ್ತ ರಂದೀಪ್, ಖಾಸಗಿ ಆಸ್ಪತ್ರೆಗಳ ಹಾಸಿಗೆ ನಿರ್ವಹಣೆ ಕಮಿಟಿಯ ಮುಖ್ಯಸ್ಥರಾದ ತುಷಾರ್ ಗಿರಿನಾಥ್ ಹಾಗೂ ಬೆಂಗಳೂರು ಸ್ಮಾರ್ಟ್ ಸಿಟಿ ಲಿ. ವ್ಯವಸ್ಥಾಪಕ ನಿರ್ದೇಶಕಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
undefined