ವೃದ್ಧನ ಆಸ್ತಿ ಬರೆಸಿಕೊಂಡು ಮನೆಯಿಂದ ಹೊರಹಾಕಿದ ಮಕ್ಕಳು! ಚಿಕ್ಕಮಗಳೂರು ಬಿಜೆಪಿ ಭೀಷ್ಮನಿಗೆ ಇದೆಂಥ ಸ್ಥಿತಿ!

First Published | Nov 26, 2024, 8:52 PM IST

7ನೇ ವಯಸ್ಸಿಗೆ ಆರೆಸ್ಸೆಸ್ ಸೇರಿ ಸಂಘಕ್ಕಾಗಿ ಜೀವ ತೇಯ್ದ ಜೀವ, ಚಿಕ್ಕಮಗಳೂರು ಜಿಲ್ಲಾ ಬಿಜೆಪಿಯ ಭೀಷ್ಮ ಎಂದೇ ಖ್ಯಾತಿ ಪಡೆದಿರುವ ವಿಠಲ್ ಆಚಾರ್ಯ ಅವರು ಇಂದು ಮಕ್ಕಳ ಮೋಸದಿಂದ 92ನೇ ಇಳಿವಯಸ್ಸಿನಲ್ಲಿ ಬೀದಿಯಲ್ಲಿ ವಾಸ ಮಾಡುತ್ತಿದ್ದಾರೆ. ಏನಿದು ಘಟನೆ? 

ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್ ಚಿಕ್ಕಮಗಳೂರು 

ಬಿಜೆಪಿಯ ಭೀಷ್ಮನಿಗೆ ಇದೆಂಥ ಸ್ಥಿತಿ!

ವಿಠಲ್ ಆಚಾರ್ಯ 92 ವರ್ಷದ ವಯೋವೃದ್ಧ. ಚಿಕ್ಕಮಗಳೂರು ಬಿಜೆಪಿಯ ಭೀಷ್ಮ ಎಂದೇ ಖ್ಯಾತಿ. ಆರ್.ಎಸ್.ಎಸ್. ಕಟ್ಟಾಳು. ಎಮರ್ಜೆನ್ಸಿಯಲ್ಲಿ ಯಡಿಯೂರಪ್ಪ, ಶಂಕರಮೂರ್ತಿ, ಪಿ.ಜಿ.ಆರ್.ಸಿಂಧ್ಯಾ, ಕಲ್ಲಡ್ಕ ಪ್ರಭಾಕರ್ ಭಟ್ ಜೊತೆ ಜೈಲು ವಾಸ ಅನುಭವಿಸಿದ್ದ ಇವರ ಶಿಷ್ಯಂದಿರೇ ಸಿ.ಟಿ.ರವಿ, ಸುನೀಲ್ ಕುಮಾರ್. 7ನೇ ವಯಸ್ಸಿಗೆ ಆರ್.ಎಸ್.ಎಸ್. ಸೇರಿ ಸಂಘಕ್ಕಾಗಿ ಜೀವ ತೇಯ್ದ ಹಿರಿಜೀವ. ಬದುಕಿನಲ್ಲಿ 107 ಪ್ರಕೃತಿ ಯಜ್ಞ ಮಾಡಿರೋ ಈ ಜೀವಕ್ಕೆ ಅದು ನಿಲ್ಲಲೇಬಾರದು ಅನ್ನೋದು ಬಯಕೆ. ಅದಕ್ಕಾಗಿ 25 ಲಕ್ಷ ಹಣವಟ್ಟು ಸೈಟ್ ಕೂಡ ಮಾರೋದಕ್ಕೆ ಸಿದ್ಧವಿದೆ ಈ ಜೀವ. ಆದ್ರಿಂದು ಅನಾಥವಾಗಿ ಬೀದಿಯಲ್ಲಿ ಕಾಲ ಕಳೆಯುತ್ತಿದ್ದಾರೆ. 
 

ಬೀದಿಯಲ್ಲಿ ಜೀವನ ಕಳೆಯುತ್ತಿರುವ ಸಿರಿವಂತ ವ್ಯಕ್ತಿ!

ವಿಠಲ್ ಆಚಾರ್ಯ. ವಯಸ್ಸು 92. ಮೂಲತಃ ಉಡುಪಿ ಜಿಲ್ಲೆಯವರು. ಆದ್ರೆ, ಕರ್ಮಭೂಮಿ ಕಾಫಿನಾಡು ಚಿಕ್ಕಮಗಳೂರು. ದಶಕಗಳಿಂದ ಚಿಕ್ಕಮಗಳೂರಿನಲ್ಲೇ ನೆಲೆಯೂರಿರೋ ಇವರು ಆರ್.ಎಸ್.ಎಸ್. ಕಟ್ಟಾಳು. 7ನೇ ವಯಸ್ಸಿನಿಂದ 84ನೇ ವಯಸ್ಸಿನವರೆಗೆ ಸಂಘಕ್ಕಾಗಿ ಜೀವ ತೇಯ್ದಿದ್ದಾರೆ. 1975ರಲ್ಲಿ ಅಂದಿನ ಪ್ರಧಾನಿ ದೇಶದ ಮೇಲೆ ಎಮರ್ಜೆನ್ಸಿ ಹೇರಿದಾಗ ಅದರ ವಿರುದ್ಧ ಹೋರಾಡಿ ಯಡಿಯೂರಪ್ಪ, ಪಿ.ಜಿ.ಆರ್.ಸಿಂಧ್ಯಾ, ಶಂಕರಮೂರ್ತಿ, ಕಲ್ಲಡ್ಕ ಪ್ರಭಾಕರ್ ಭಟ್ ಜೊತೆ ಬೆಳಗಾವಿ-ಬಳ್ಳಾರಿ ಜೈಲಿನಲ್ಲಿ ದಿನ ಕಳೆದಿದ್ದಾರೆ. ಚಿಕ್ಕಮಗಳೂರು ನಗರಸಭೆ ಸದಸ್ಯರಾಗಿದ್ದ ಇವರು, ಜನಸಂಘದಿಂದ ವಿಧಾನಸಭೆ ಚುನಾವಣೆಗೂ ಸ್ಪರ್ಧಿಸಿದ್ದರು. ಕರ್ನಾಟಕದ ಅಯೋಧ್ಯೆ ಎಂದೇ ಕರೆಸಿಕೊಳ್ಳೋ ದತ್ತಪೀಠದ ಹೋರಾಟದಲ್ಲೂ ಸಿ.ಟಿ.ರವಿ, ಕಾರ್ಕಳ ಸುನೀಲ್ ಕುಮಾರ್ ಬೆನ್ನೆಲುಬಾಗಿ ನಿಂತವರು. ಆದರೆ, ಇಂದು ಬೀದಿಯಲ್ಲಿ ಜೀವನ ಕಳೆಯುತ್ತಿದ್ದಾರೆ. ನಾಲ್ಕು ಗಂಡು, ಒಂದು ಹೆಣ್ಣು ಮಗುವಿದ್ದು ಎಲ್ಲರೂ ಡಾಕ್ಟ್ರು-ಇಂಜಿನಿಯರ್. ಕೊಟ್ಯಾಂತರ ಆಸ್ತಿ ಇದ್ರು ಇಂದು ಅನಾಥರಾಗಿ ಸಂಧ್ಯಾಕಾಲವನ್ನ ಬೀದಿಬದಿ ಕಳೆಯುತ್ತಿದ್ದಾರೆ.

Latest Videos


ಪ್ರಕೃತಿ ಯಜ್ಞಕ್ಕಾಗಿ ಸೈಟ್ :

92 ವರ್ಷದ ವಿಠಲ್ ಆಚಾರ್ಯ ಜೀವನದಲ್ಲಿ 107 ಪ್ರಕೃತಿ ಯಜ್ಞ ಮಾಡಿದ್ದಾರೆ. ಅದು ನಿಲ್ಲಬಾರದು ಅನ್ನೋದು ಇವ್ರ ಬಯಕೆ. ನಿಸ್ವಾರ್ಥವಾಗಿ ಪ್ರಕೃತಿಗೆ ಮಾಡುವ ಯಜ್ಞವದು. ಈ ಯಜ್ಞಕ್ಕೆ ಹಾಕುವ ವಸ್ತುಗಳು ಕಾರ್ಬನ್ ಡೈಆಕ್ಸೈಡ್ ಆದರೂ ಕೂಡ ಪ್ರಕೃತಿ ಅದನ್ನ ಪಡೆದು ನಮಗೆ ಆಕ್ಸಿಜನ್ ನೀಡುತ್ತೆ. ಅದು ನಿಲ್ಲಬಾರದು ಅಂತ ಈ ಇಳಿವಯಸ್ಸಲ್ಲಿ ಹೋರಾಡ್ತಿದ್ದಾರೆ. ಇಂದಿನ ಪೀಳಿಗೆ ಜನರಿಗೆ ಆಸಕ್ತಿ ಇಲ್ಲ. ಯಜ್ಞ ನಿಲ್ಲಬಾರದು ಅಂತ ಬ್ಯಾಂಕಿನಲ್ಲಿ 25 ಲಕ್ಷ ಹಣವಿಟ್ಟು ಪ್ರತಿವರ್ಷ ಯಜ್ಞ ಮಾಡ್ತಿದ್ರಂತೆ. ಆದ್ರೆ, ತಾನು ಸತ್ತ ನಂತರವೂ ಯಜ್ಞ ನಿಲ್ಲಬಾರದು ಅಂತ ಮಕ್ಕಳಿಗೆ ಆಸ್ತಿ ಮಾಡಿ, ಅವರಿಗೊಂದು ದಡ ಮುಟ್ಸಿ ಯಜ್ಞಕ್ಕೆ ಅಂತ ಒಂದು ಸೈಟ್ ಇಟ್ಕೊಂಡಿದ್ದರು. ಆ ಸೈಟ್ ಮಾರಿ ಅಥವ ಅದರಲ್ಲಿ ಕಾಂಪ್ಲೆಕ್ಸ್ ಕಟ್ಟಿ ಟ್ರಸ್ಟ್ ನಿರ್ಮಿಸಿ ಬಂದ ಹಣದಲ್ಲಿ ಯಜ್ಞ ನಡೆಸಬೇಕು ಅನ್ನೋದು ಇವ್ರ ಬಯಕೆ. ಹೋರಾಟ. ಕೊನೆ ಆಸೆ. ಆದರೆ, ಇವರಿಗೆ ಹೆತ್ತಮಕ್ಕಳೇ ಮೋಸ ಮಾಡಿದ್ದಾರಂತೆ.

ಮಕ್ಕಳೇ ಮೋಸ ಮಾಡಿದ್ದಾರೆಂದು ಅವರ ಅನ್ನ ನನಗೆ ಬೇಡ ಅಂತ ಮನೆ ಮುಂದೆ ಏಕಾಂಗಿಯಾಗಿ ಪ್ರತಿಭಟನೆ ಮಾಡ್ತಿದ್ದಾರೆ. ಒಟ್ಟಾರೆ, ಇವ್ರಿಗೆ ಇರೋ ಮಕ್ಕಳೆಲ್ಲರೂ ಸಿರಿವಂತರೆ, ಆದರೂ, ಈ ಇಳಿವಯಸ್ಸಿನಲ್ಲಿ ಮಕ್ಕಳ ಮನೆಗೆ ಹೋಗದೇ ಬೇರೆಡೆ ಇದ್ದು 84 ವರ್ಷ ಆಗೋವರೆಗೂ ಹೇಗೋ ಪ್ರಕೃತಿ ಯಜ್ಞ ಮಾಡಿದ್ದಾರೆ. ಆದರೀಗ ತಾನೇ ಕಷ್ಟ ಪಟ್ಟು ಮಾಡಿದ್ದ ಜಾಗ ಇಲ್ಲ. ಆ ಜಾಗ ಟ್ರಸ್ಟ್ಗೆ ಕೊಡಲೇಬೇಕು. ಪ್ರತಿವರ್ಷ ಪ್ರಕೃತಿಯಜ್ಞ ನಡೆಯಲೇಬೇಕು. ನಿಲ್ಲಬಾರದು ಅಂತ ಬೀದಿಯಲ್ಲಿ ಕುಳಿತು ಹೋರಾಟ ಮಾಡುವಂತಾಗಿರೋದು ನಿಜಕ್ಕೂ ದುರಂತ.

click me!